AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾನು ಮುಷ್ತಾಕ್​ ಗೆ ಹಿಂದೂ ಸಂಪ್ರದಾಯದಂತೆ ಬಾಗಿನ, ಮೈಸೂರು ದಸರಾ ಉದ್ಘಾಟನೆ ಬಗ್ಗೆ ಲೇಖಕಿ ಹೇಳಿದ್ದಿಷ್ಟು

ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿದೆ. ಮೈಸೂರಿನಲ್ಲಿ ದಸರಾಗೆ ಸಿದ್ಧತೆಗಳು ನಡೆಯುತ್ತಿವೆ. ಈ ನುಡವೆ ರಾಜ್ಯ ರಾಜಕೀಯದಲ್ಲಿ ದಸರಾ ಉದ್ಘಾಟಕರ ವಿಚಾರವಾಗಿ ಆಕ್ಷೇಪಗಳು ವ್ಯಕ್ತವಾಗಿವೆ. ಬೂಕರ್ ಪ್ರಶಸ್ತಿ ಪುರಸ್ಕೃತೆ, ಲೇಖಕಿ ಬಾನು ಮುಷ್ತಾಕ್‌ ಅವರನ್ನ ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಇದರ ನಡುವೆ ಸ್ವತಃ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ಬಾನು ಮುಷ್ತಾಕ್​ ಗೆ ಹಿಂದೂ ಸಂಪ್ರದಾಯದಂತೆ ಬಾಗಿನ, ಮೈಸೂರು ದಸರಾ ಉದ್ಘಾಟನೆ ಬಗ್ಗೆ ಲೇಖಕಿ ಹೇಳಿದ್ದಿಷ್ಟು
Banu Mushtaq
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ|

Updated on: Aug 25, 2025 | 5:38 PM

Share

ಹಾಸನ, (ಆಗಸ್ಟ್​ 25): ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್  (Writer banu Mushtaq) ಅವರನ್ನು ಮೈಸೂರು ದಸರಾ (Mysuru Dasara 2025) ಉದ್ಘಾಟಕರಾಗಿ ಆಯ್ಕೆ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ನಡೆಗೆ ವಿರೋಧಗಳು ವ್ಯಕ್ತವಾಗಿವೆ. ಬಾನು ಮುಷ್ತಾಕ್ ಅವರಿಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆಯಾ? ಹಿಂದೂ ಧರ್ಮವನ್ನು ಗೌರವಿಸದವರನ್ನು ಹೇಗೆ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಾರೆ ಅಂತೆಲ್ಲಾ ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದಾರೆ. ಈ ಎಲ್ಲಾ ಪರ ವಿರೋಧದ ಚರ್ಚೆ ನಡುವೆ ಬೆಂಗಳೂರಿನ ಕಲಾವಿದೆ ಅಮ್ಮನ ಮಡಿಲು ಸಂಸ್ಥಾಪಕಿ ಹಾಸನದ ಬಾನು ಮುಷ್ತಾಕ್ ಅವರ ನಿವಾಸಕ್ಕೆ ಭೇಟಿ ನೀಡಿ ಹಿಂದೂ ಸಂಪ್ರದಾಯದಂತೆ ಬಾಗಿನ ಅರ್ಪಣೆ ಮಾಡಿದರು. ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವುದರಿಂದ ಹೂ, ಬಳೆ ,ಸೀರೆ ಅರಿಶಿನ ಕುಂಕುಮ ನೀಡಿ ಶುಭ ಹಾರೈಸಿದರು.

ನಿನ್ನೆ ಅಷ್ಟೇ ಲಂಡನ್ ನಿಂದ ಹಾಸನದ ಮನೆಗೆ ಆಗಮಿಸಿದ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಬಗ್ಗೆ ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದರು. ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ಖಂಡಿತ ಇದು ನನಗೆ ಖುಷಿ ವಿಚಾರ. ಇದನ್ನ ನಾವು ಹಲವು ಪ್ರಭೇದಗಳಲ್ಲಿ ನೋಡಬಹುದು. ನೀವು ಚಾಮುಂಡೇಶ್ವರಿ ತಾಯಿ ಅಂತಿರಿ ನಿಮ್ಮ ಭಾವವನ್ನು ಗೌರವಿಸುತ್ತೇನೆ. ಅನೇಕರು ಇದನ್ನ ನಾಡಹಬ್ಬ ಅಂತಾರೆ. ಅದನ್ನು ಸಹ ಗೌರವಿಸುತ್ತೇನೆ. ನಾಡ ಹಬ್ಬ, ಚಾಮುಂಡೇಶ್ವರಿ ತಾಯಿ ಅಂತಾ ಪ್ರೀತಿ ಅಭಿಮಾನದಿಂದ ಕರೀತೀರಿ . ಇದು ನಮ್ಮ ಸಂಸ್ಕೃತಿಯ ಭಾಗವೇ ಆಗಿದೆ. ಹಾಗಾಗಿ ಇದು ನನಗೂ ಪ್ರಿಯವಾಗಿದೆ ಎಂದರು.

ಇದನ್ನೂ ಓದಿ: ಹೈದರಾಲಿ, ಟಿಪ್ಪು ಸುಲ್ತಾನ್ ದಸರಾ ಮುನ್ನಡೆಸಿಕೊಂಡು ಹೋಗಿದ್ದರು: ತನ್ವೀರ್ ಸೇಠ್

ನಾನು ಗೌರವಿಸುವ ಹಬ್ಬವಾಗಿದೆ. ಪ್ರೀತಿಯಿಂದ ಬಾಗಿಯಾಗುವ ಹಬ್ಬವಾಗಿದೆ. ನಾನು ತಂದೆ ತಾಯಿ ಜೊತೆ ಹಲವು ಬಾರಿ ಜಂಬು ಸವಾರಿ ನೋಡಲು ಹೋಗುತ್ತಿದ್ದೆ. ಈಗ ನಾನೇ ದಸರಾ ಉದ್ಘಾಟನೆ ಮಾಡಲು ಆಹ್ವಾನ ಬಂದಿದೆ. ಹಾಗಾಗಿ ನನಗೆ ಸಂತೋಷ ವಾಗಿದೆ ಎಂದು ಹೇಳಿದರು.

ಇದನ್ನೂ ಓದಿ
Image
ದಸರಾ ಉದ್ಘಾಟನೆಗೆ ಆಯ್ಕೆಯಾದ ಬಾನು ಮುಷ್ತಾಕರ ವಿಡಿಯೋ ಹರಿಬಿಟ್ಟ ಸಚಿವೆ ಶೋಭಾ
Image
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಪ್ರತಾಪ್ ಸಿಂಹ ಆಕ್ಷೇಪ
Image
ಗೊಂಬೆಯಾಟ ಭೀಮವ್ವರಿಂದ ದಸರಾ ಉದ್ಘಾಟನೆ ಮಾಡಿಸಿ: ವಿಡಿಯೋ ವೈರಲ್​
Image
ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪ್ರಶಸ್ತಿ ಪುರಸ್ಕೃತೆ

ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ

ಇನ್ನು ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಬಾನು ಮುಷ್ತಾಕ್ ಅವರು ಈ ಹಿಂದೆ ಭುವನೇಶ್ವರಿ ಬಗ್ಗೆ ಮಾತನಾಡಿದ್ದ ವಿಡಿಯೋ ಹಂಚಿಕೊಂಡು ಟೀಕಿಸಿದ್ದಾರೆ. ಕನ್ನಡವನ್ನ ಭುವನೇಶ್ವರಿಯಾಗಿ ಮಾಡಿಬಿಟ್ರಿ. ಬಾವುಟವನ್ನ ಹರಿಶಿನಿ ಕುಂಕುಮವಾಗಿ ಮಾಡಿಬಿಟ್ರಿ. ನಾನು ಎಲ್ಲಿ ನಿಲ್ಲಬೇಕು ಎಂದು ಬಾನು ಮುಷ್ತಾಕ್ ಮಾತನಾಡಿದ್ದರು. ಇದೇ ಹೇಳಿಕೆ ವಿಡಿಯೋವನ್ನ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದು, ಕನ್ನಡವನ್ನ ಭುವನೇಶ್ವರಿಯಾಗಿ ಒಪ್ಪದ ಬಾನು ಮುಷ್ತಾಕ್, ತಾಯಿ ಚಾಮುಂಡೇಶ್ವರಿ ಒಪ್ಪಿ ಪುಷ್ಪಾರ್ಚನೆ ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗರಿಗೆ ಸಲಹೆ ನೀಡಿದ ರೇವಣ್ಣ

ಅತ್ತ ಬಿಜೆಪಿ ವಿರೋಧ ಮಾಡುತ್ತಿದ್ದರೆ ಇತ್ತ ಮಿತ್ರ ಪಕ್ಷದ ನಾಯಕ ಎಚ್​​ ಡಿ ರೇವಣ್ಣ ಸರ್ಕಾರದ ಆಯ್ಕೆಯನ್ನು ಸ್ವಾಗತಿಸಿದ್ದಾರೆ. ಹಾಸನ ಭಾನು ಮುಷ್ತಾಕ್ ನಮ್ಮ ಜಿಲ್ಲೆಯ ಮಹಿಳೆ . ಅವರೊಬ್ಬ ಹೋರಾಟಗಾರ್ತಿ. ಹಾಗಾಗಿ ಅವರು ದಸರಾ ಉದ್ಘಾಟನೆ ಮಾಡಿದ್ರೆ ಸಂತೋಷ. ಪಕ್ಷ ಯಾವುದೇ ಇರಲಿ ಧರ್ಮ ಅಂತಾ ಬೇರ್ಪಡಿಸುವುದು ಬೇಡ. ನಾವೆಲ್ಲಾ ಒಂದು. ಸಮಾಜದಲ್ಲಿ ಹಿಂದು ಮುಸ್ಲಿಮ್ ಎಲ್ಲಾ ಒಂದೆ. ಎಲ್ಲರೂ ಭಾರತೀಯರು. ಎಲ್ಲರೂ ಒಂದಾಗಿ ದೇಶ ಉಳಿಸಬೇಕು. ರಾಜಕೀಯ ಬಿಟ್ಟಾಕಿ. ಅವರಿಗೆ ವಿರೋಧ ಮಾಡಬಾರದು ಎಂದು ಸಲಹೆ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!