ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ

police constable: ಮಳಲಿ ದೇವಸ್ಥಾನದ ಬಳಿ ಗ್ರಾಮದ ಯುವಕನಿಗೆ ಗುಂಪೊಂದು ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿತ್ತು. ಅದನ್ನು ಬಿಡಿಸಲು ಕಾನ್ಸ್‌ಟೇಬಲ್ ಶರತ್​ ಮುಂದಾಗಿದ್ದಾರೆ. ಆ ವೇಳೆ ಅವರ ಮೇಲೆಯೂ ಹಲ್ಲೆ ಮಾಡಲಾಗಿದೆ. ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ
ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 17, 2023 | 8:44 AM

ಹಾಸನ : ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್‌ಟೇಬಲ್ (police constable) ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ (attack) ನಡೆಸಿರುವ ಘಟನೆ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಶರತ್ ಹಲ್ಲೆಗೊಳಗಾದ ಕಾನ್ಸ್‌ಟೇಬಲ್. ಹಾಸನ ಜಿಲ್ಲೆ ಹೊಳೇನರಸೀಪುರ (Holenarasipura) ತಾಲ್ಲೂಕಿನ ಮಳಲಿ ದೇವಸ್ಥಾನದಲ್ಲಿ ಹೊಳೆನರಸೀಪುರ ತಾಲ್ಲೂಕಿನ ಕುಂದೂರು ಹೋಬಳಿ ಎಸ್. ಹೊನ್ನೇನಹಳ್ಳಿ ಗ್ರಾಮದ ಶರತ್ ಮೇಲೆ ಹಲ್ಲೆ ನಡೆದಿದೆ. ಜೂನ್ 15 ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಶರತ್ ಬಂದಿದ್ದರು. ದೇವಸ್ಥಾನದ ಬಳಿಯಿರುವ ಕನ್ವೆನ್ಷನ್ ಹಾಲ್ ಮುಂಭಾಗ ಚೇತನ್ ಎಂಬ ಯುವಕನಿಗೆ ಗ್ರಾಮದ ಯುವಕರ ಗುಂಪು ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿತ್ತು. ಈ ವೇಳೆ ಕಾನ್ಸ್‌ಟೇಬಲ್ ಶರತ್ ಜಗಳ ಬಿಡಿಸಲು ಹೋಗಿದ್ದಾರೆ. ಪೊಲೀಸ್ ಪೇದೆ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಿಥುನ್, ಲೋಹಿತ್, ನಟರಾಜು ಹಾಗೂ ಇತರರ ಗುಂಪು ಕಾನ್ಸ್‌ಟೇಬಲ್ ಶರತ್‌ ಅವರಿಗೂ ಸಹ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದೆ. ಕಲ್ಲಿನಿಂದ ಶರತ್ ತಲೆಗೆ ಹೊಡೆದಿದ್ದಾರೆ, ಬಳಿಕ ನಟರಾಜ ಕಾರಿನಿಂದ ಲಾಂಗ್ ತಂದು ಅದರಿಂದಲೂ ಹಲ್ಲೆ ಮಾಡಿದ್ದಾನೆ. ಈ ವೇಳೆ ಕಾನ್ಸ್‌ಟೇಬಲ್ ಶರತ್ ತಮ್ಮನ್ನು ರಕ್ಷಿಸಿಕೊಳ್ಳಲು ಕನ್ವೆನ್ಷನ್ ಹಾಲ್ ಒಳಗೆ ಓಡಿ ಹೋಗಿದ್ದಾರೆ.

Also Read:  ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಡ್ರೋನ್‌ ಬಳಕೆ; ಮೂರು ತಿಂಗಳಲ್ಲಿ ಟ್ರಾಫಿಕ್ ಮುಕ್ತ ನಗರವಾಗಿಸಲು ಸೂಚನೆ

ಆದರೆ ಕನ್ವೆನ್ಷನ್ ಹಾಲ್‌ ಒಳಗೂ ನುಗ್ಗಿಬಂದ ದ ಪುಂಡರ ಗುಂಪು ಲಾಂಗ್‌ನಿಂದ ಮನಬಂದಂತೆ ಶರತ್ ಮೇಲೆ ಹಲ್ಲೆ ನಡೆಸಿದ್ದಾರೆ. ಕಾನ್ಸ್‌ಟೇಬಲ್ ಶರತ್ ಹಾಲ್‌ನಲ್ಲೇ ಕುಸಿದು ಬಿದ್ದಿದ್ದಾರೆ. ಗಾಯಾಳು ಶರತ್ ಸದ್ಯಕ್ಕೆ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಹಾಸನ ಜಿಲ್ಲಾ ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್  ಮಾಡಿ

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ