ಪೆನ್​ಡ್ರೈವ್​ ಹಂಚಿಕೆ ಆರೋಪ ಕೇಸ್​, ತಪ್ಪದ ಬಂಧನ ಭೀತಿ: ಹೈಕೋರ್ಟ್ ಮೊರೆಹೋದ ಆರೋಪಿಗಳು

ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಹಂಚಿಕೆ ಆರೋಪ ಪ್ರಕರಣದಲ್ಲಿ ಆರೋಪಿಗಳಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಬಂಧನ ಭೀತಿಯಿಂದ ಪಾರಾಗಲು ನಾಲ್ವರು ಆರೋಪಿಗಳು ಹೈಕೋರ್ಟ್ ಮೊರೆಹೋಗಿದ್ದಾರೆ. ಮೇ 8ರಂದು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆ ಆರೋಪಿಗಳು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಮೇ 28ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. 

ಪೆನ್​ಡ್ರೈವ್​ ಹಂಚಿಕೆ ಆರೋಪ ಕೇಸ್​, ತಪ್ಪದ ಬಂಧನ ಭೀತಿ: ಹೈಕೋರ್ಟ್ ಮೊರೆಹೋದ ಆರೋಪಿಗಳು
ಪೆನ್​ಡ್ರೈವ್​ ಹಂಚಿಕೆ ಆರೋಪ ಕೇಸ್​, ತಪ್ಪದ ಬಂಧನ ಭೀತಿ: ಹೈಕೋರ್ಟ್ ಮೊರೆಹೋದ ಆರೋಪಿಗಳು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: May 25, 2024 | 3:05 PM

ಹಾಸನ, ಮೇ 25: ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್ (pen drive) ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ಪಾರಾಗಲು ನಾಲ್ವರು ಆರೋಪಿಗಳು ಹೈಕೋರ್ಟ್ (High Court) ಮೊರೆಹೋಗಿದ್ದಾರೆ. ಸದ್ಯ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನು ಕೋರಿ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ನವೀನ್ ಗೌಡ, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್, ಕಾಂಗ್ರೆಸ್​ ಮುಖಂಡ ಪುಟ್ಟಿ ಅಲಿಯಾಸ್ ಪುಟ್ಟರಾಜ್, ಚೇತನ್​​ರಿಂದ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಹಾಸನದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೇ 8ರಂದು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆ ನಾಲ್ವರು ಆರೋಪಿಗಳು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ತಕರಾರು ಅರ್ಜಿ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿ ಮೇ 28ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ: ಪ್ರಜ್ವಲ್​​ನನ್ನು ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು ಎಂದಿದ್ದ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ತಿರುಗೇಟು

ಏ.23ರಂದು ಜೆಡಿಎಸ್​ ಚುನಾವಣಾ ಏಜೆಂಟ್ ಪೂರ್ಣಚಂದ್ರ ದೂರು ನೀಡಿದ್ದರು. ನವೀನ್ ಗೌಡ, ಪುಟ್ಟರಾಜ್, ಚೇತನ್, ಕಾರ್ತಿಕ್, ಶರತ್ ವಿರುದ್ಧ ಹಾಸನದ ಸೈಬರ್ ಕ್ರೈಮ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: ಅತ್ಯಾಚಾರ ಆರೋಪ ಪ್ರಕರಣ; ವಕೀಲ ದೇವರಾಜೇಗೌಡ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ಕೋರ್ಟ್

ಎಸ್​ಐಟಿ ವಿಚಾರಣೆ ಹಿನ್ನೆಲೆಯಲ್ಲಿ ಪ್ರಕರಣ ಎಸ್​​ಐಟಿಗೆ ಹಸ್ತಾಂತರ ಮಾಡಲಾಗಿತ್ತು. ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡರೂ ಆರೋಪಿಗಳ ಬಂಧನಕ್ಕೆ ಎಸ್​ಐಟಿ ಪೊಲೀಸರು ಮುಂದಾಗಿರಲಿಲ್ಲ. ಆದರೆ ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಇದೀಗ ಆರೋಪಿಗಳು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ವೈರಲ್ ಪ್ರಮುಖ ಆರೋಪಿ ನವೀನ್ ಗೌಡ ಹಾಗೂ ಬೇಲೂರು ಮಾಜಿ ಶಾಸಕ ಲಿಂಗೇಶ್ ಅವರದ್ದು ಎನ್ನಲಾದ ಆಡಿಯೊ ವೈರಲ್ ಆಗಿದೆ. ನವೀನ್ ಗೌಡ ಕಾಂಗ್ರೆಸ್​ ಕಾರ್ಯಕರ್ತ‌ ಎನ್ನಲಾಗುತ್ತಿದೆ. ಬೇಲೂರು ಜೆಡಿಎಸ್ ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಮತ್ತು ನವೀನ್ ಗೌಡ ಮಾತಾಡಿದ್ದಾರೆನ್ನಲಾದ ಆಡಿಯೋ ಈಗ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ