AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATMA Scheme Recruitment: ಹಾವೇರಿ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; ಪರೀಕ್ಷೆಯಿಲ್ಲದೆ ನೇರ ನೇಮಕಾತಿ

ಹಾವೇರಿ ಕೃಷಿ ಇಲಾಖೆಯು ATMA ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಸಂಬಂಧಿತ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಅನುಭವ ಇರುವವರು ಜುಲೈ 25ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಇಲ್ಲ, ವಿದ್ಯಾರ್ಹತೆ ಮತ್ತು ಅನುಭವ ಆಧರಿಸಿ ಆಯ್ಕೆ ನಡೆಯುತ್ತದೆ.

ATMA Scheme Recruitment: ಹಾವೇರಿ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; ಪರೀಕ್ಷೆಯಿಲ್ಲದೆ ನೇರ ನೇಮಕಾತಿ
ಹಾವೇರಿ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶImage Credit source: Getty Images
ಅಕ್ಷತಾ ವರ್ಕಾಡಿ
|

Updated on: Jun 24, 2026 | 3:27 PM

Share

ಮುಖ್ಯಾಂಶಗಳು

  • ಹಾವೇರಿ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ
  • ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ನೇಮಕಾತಿ
  • ಜುಲೈ 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ಕೃಷಿ ಇಲಾಖೆಯು ಹಾವೇರಿ ಜಿಲ್ಲೆಯಲ್ಲಿ ‘ಆತ್ಮ’ (ATMA) ಯೋಜನೆಯಡಿ ಕಾರ್ಯನಿರ್ವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಹಾವೇರಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯು ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ, ಬದಲಿಗೆ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ವಿವರ ಮತ್ತು ಶೈಕ್ಷಣಿಕ ಅರ್ಹತೆ:

ಒಟ್ಟು 7 ಹುದ್ದೆಗಳನ್ನು ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಹುದ್ದೆಗಳ ವಿವರ ಈ ಕೆಳಗಿನಂತಿದೆ:

  • ತಾಲೂಕು ತಾಂತ್ರಿಕ ವ್ಯವಸ್ಥಾಪಕರು (01 ಹುದ್ದೆ): ಅಭ್ಯರ್ಥಿಗಳು ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ (Post Graduation) ಹೊಂದಿರಬೇಕು ಹಾಗೂ ಕೃಷಿ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
  • ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (06 ಹುದ್ದೆಗಳು): ಅಭ್ಯರ್ಥಿಗಳು ಕೃಷಿ ಮತ್ತು ತೋಟಗಾರಿಕೆ ವಿಷಯಗಳಲ್ಲಿ ಪದವಿ (Graduation) ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು:

ಆಯ್ಕೆಯಾಗುವ ಅಭ್ಯರ್ಥಿಗಳು ಹಾವೇರಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 25ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿಳಾಸ:

ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ನೇರವಾಗಿ ಅಥವಾ ಅಂಚೆ (Post) ಮೂಲಕ ಕೆಳಗಿನ ವಿಳಾಸಕ್ಕೆ ತಲುಪಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಇಲಾಖೆ, ಜಿಲ್ಲಾಡಳಿತ ಭವನ, ದೇವಗಿರಿ, ಹಾವೇರಿ – 581110.

ಅಧಿಕೃತ ಅಧಿಸೂಚನೆ ಮತ್ತು ಹೆಚ್ಚಿನ ವಿವರಗಳಿಗಾಗಿ ಈ ಲಿಂಕ್ ಬಳಸಿ:shorturl.at/xMmba

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us