ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ: ಮೂವರು ಸೇರಿ 20 ಕುರಿಗಳು ಸಾವು

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ನಡೆದಿದೆ. ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ದುರಂತ ಸಂಭವಿಸಿದೆ.

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ: ಮೂವರು ಸೇರಿ 20 ಕುರಿಗಳು ಸಾವು
ಮೃತರು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Apr 02, 2024 | 7:43 PM

ಹಾವೇರಿ, ಮಾರ್ಚ್​ 02: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ (collides) ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41), ಶಿವರಾಜ್ ಹೊಳೆಪ್ಪನವರ(22) ಮೃತರು. ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ದುರಂತ ಸಂಭವಿಸಿದೆ. ಬೀರಪ್ಪ ದೊಡ್ಡಚಿಕ್ಕಣ್ಣನವರ, ನಿಂಗರಾಜ್ ಹಿತ್ತಲಮನಿ ಮತ್ತಯ ನಿಂಗಪ್ಪ ಕೊರಗುಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಣ್ಣೆ ಮತ್ತಿನಲ್ಲಿ ಗುರಾಯಿಸಿದ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ

ಬೆಂಗಳೂರು ಗ್ರಾಮಾಂತರ: ನೆಲಮಂಗಲದ ವಿಜಯಬಾರ್​ನಲ್ಲಿ ಎಣ್ಣೆ ಮತ್ತಿನಲ್ಲಿ ಗುರಾಯಿಸಿದ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿರುವಂತಹ ಘಟನೆ ನಡೆದಿದೆ. ಪಾಂಡುರಂಗ, ಆಕಾಶ್, ಚಿಕ್ಕಣ್ಣ ಎಂಬುವವರ ಮೇಲೆ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ: ಬೀದರ: ಪೊಲೀಸ್ ವೇಷ ಧರಿಸಿ ವಿದೇಶಿ ಹಣ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

ವಕೀಲ ಮಂಜುನಾಥ್, ರೌಡಿಶೀಟರ್ ಜಯಂತ್, ದೇವರಾಜ್ ವಿರುದ್ಧ ಆರೋಪ ಮಾಡಲಾಗಿದೆ. ಎಲ್ಲರನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ಮಾಡಲಾಗಿದೆ. ಹಲ್ಲೆ ನಡೆಸಿದ ರೌಡಿಶೀಟರ್ ಜಯಂತ್ ಗಡಿಪಾರಿಗೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಲಾಗಿದೆ.

32 ಆರೋಪಿಗಳ ಬಂಧನ: 65 ಲಕ್ಷ 29 ಸಾವಿರ ರೂ. ಮೌಲ್ಯದ ವಸ್ತುಗಳು ಜಪ್ತಿ

ಬೀದರ್: ಕಳ್ಳತನದಲ್ಲಿ ಭಾಗಿಯಾದವರನ್ನು ಬಂಧಿಸುವ ಮೂಲಕ ಬೀದರ್ ಪೊಲೀಸ್ ಹೆಡೆಮುರಿ ಕಟ್ಟಿದ್ದಾರೆ. 16 ಪೊಲೀಸ್ ‌ಠಾಣೆಯ 31 ಕಳ್ಳತನ ಪ್ರಕರಣ ಭೇದಿಸಿದ್ದು, 32 ಆರೋಪಿಗಳನ್ನು ಬಂಧಿಸಲಾಗಿದೆ. 65 ಲಕ್ಷ 29 ಸಾವಿರ ರೂ. ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ: ತನ್ನ ಇಚ್ಛೆಯಂತೆ ನಡೆಯದ ಪ್ರೇಯಸಿಗೆ ಚಾಕುವಿನಿಂದ ಇರಿದ ಪ್ರಿಯಕರ

ನಗದು, ವಿದೇಶಿ ಕರೆನ್ಸಿ, ಬಂಗಾರ, ಜಾನುವಾರು, ಆಕಳು, ಎತ್ತು, ಬೈಕ್, ಮೊಬೈಲ್, ಫೋನ್ ಜೀಪ್, ಆಟೋ ಕದ್ದು ಕಳ್ಳರ ಗ್ಯಾಂಗ್ ಪರಾರಿಯಾಗಿದ್ದರು. ಒಂದು ತಿಂಗಳ ಅವಧಿಯಲ್ಲಿ 65 ಲಕ್ಷ 29 ಸಾವಿರ ರೂ. ಮೌಲ್ಯದ‌ ವಸ್ತು ಕಳ್ಳತನ ಮಾಡಿದ್ದರು. ಅಂತರ್ ರಾಜ್ಯ ಕಳ್ಳರ ಗ್ಯಾಂಗ್​​ನ್ನು ಬಂಧಿಸುವಲ್ಲಿ ಪೊಲೀಸ್​​ರು ಯಶಸ್ವಿ ಆಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:07 pm, Tue, 2 April 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!