ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸಹೋದ್ಯೋಗಿಗಳ ಜೊತೆ ಫೋಟೋ ತೆಗೆಸಿಕೊಂಡು ಸಾರ್ವಜನಿಕರ ಟೀಕೆಗೆ ಗುರಿಯಾದ ಹಾವೇರಿ ಜಿಲ್ಲಾಧಿಕಾರಿ

ಕೊರೊನಾ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹೀಗೆ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಜಿಲ್ಲಾಧಿಕಾರಿಗಳೇ ಹತ್ತು ಹಲವು ಕ್ರಮಗಳ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸಹೋದ್ಯೋಗಿಗಳ ಜೊತೆ ಫೋಟೋ ತೆಗೆಸಿಕೊಂಡು ಸಾರ್ವಜನಿಕರ ಟೀಕೆಗೆ ಗುರಿಯಾದ ಹಾವೇರಿ ಜಿಲ್ಲಾಧಿಕಾರಿ
ಜಿಲ್ಲಾಧಿಕಾರಿ ಜೊತೆ ನಿಂತು ಫೋಟೋ ತೆಗೆಸಿಕೊಂಡ ಸಹೋದ್ಯೋಗಿಗಳು
Follow us
sandhya thejappa
|

Updated on: May 01, 2021 | 10:57 AM

ಹಾವೇರಿ: ಜಿಲ್ಲಾಧಿಕಾರಿಗಳು ಎಂದರೆ ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೆ ಪಾಲನೆ ಮಾಡುವ ಮೂಲಕ ಸಾರ್ವಜನಿಕರಿಗೆ ಮಾದರಿ ಆಗಿರಬೇಕು. ಆದರೆ ಜನ್ಮದಿನದ ಸಂಭ್ರಮದಲ್ಲಿದ್ದ ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತು ತಮ್ಮ ಇಲಾಖೆಯ ಸಿಬ್ಬಂದಿಗಳ ಜೊತೆ ನಿಂತು ಪೋಟೋ ತೆಗೆಸಿಕೊಂಡಿದ್ದಾರೆ. ಇದರಿಂದ ಜಿಲ್ಲಾಧಿಕಾರಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ.

ಈಗ ಎಲ್ಲೆಲ್ಲೂ ಕೊರೊನಾ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹೀಗೆ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಜಿಲ್ಲಾಧಿಕಾರಿಗಳೇ ಹತ್ತು ಹಲವು ಕ್ರಮಗಳ ಬಗ್ಗೆ ಆದೇಶ ಹೊರಡಿಸಿದ್ದಾರೆ. ಅದರಲ್ಲೂ ಮೂರು ದಿನಗಳಿಂದ ಸರ್ಕಾರ ಜಾರಿಗೊಳಿಸಿದ ಕಠಿಣ ನಿಯಮಗಳು ಜಾರಿಯಲ್ಲಿವೆ. ಆದರೆ ಜಿಲ್ಲಾಧಿಕಾರಿಗಳೆ ನಿಯಮ ಉಲ್ಲಂಘನೆ ಮಾಡಿದ್ದು, ಜಿಲ್ಲೆಯ ಜನರು ಟೀಕೆ ಮಾಡುವಂತಾಗಿದೆ.

ನಿನ್ನೆ (ಏಪ್ರಿಲ್ 30) ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರ ಜನ್ಮದಿನವಿತ್ತು. ಜನ್ಮದಿನದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಸಹೋದ್ಯೋಗಿಗಳು ಜಿಲ್ಲಾಧಿಕಾರಿಗಳಿಗೆ ಶುಭ ಕೋರಲು ಅವರ ಮನೆಗೆ ತೆರಳಿದ್ದರು. ಕೆಲವು ಸಿಬ್ಬಂದಿ ಮಾಸ್ಕ್ ಧರಿಸಿಕೊಂಡು ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲೂ ಜಿಲ್ಲಾಧಿಕಾರಿಗಳು ಮಾಸ್ಕ್ ಧರಿಸಿರಲಿಲ್ಲ. ನಂತರ ತಮ್ಮ ಕಚೇರಿಯ ಇಪ್ಪತ್ತಕ್ಕೂ ಅಧಿಕ ಸಿಬ್ಬಂದಿ ಮನೆಗೆ ಆಗಮಿಸಿ ಶುಭ ಕೋರಿದ್ದಾರೆ. ನಂತರ ಎಲ್ಲರೂ ಸೇರಿಕೊಂಡು ಜಿಲ್ಲಾಧಿಕಾರಿಗಳ ಜೊತೆಗೆ ಗ್ರೂಪ್ ಫೋಟೋ ತೆಗೆಸಿಕೊಂಡಿದ್ದಾರೆ.

ಮಾಸ್ಕ್​ ಹಾಕದೆ ಹೂಗುಚ್ಚ ಸ್ವೀಕರಿಸಿದ ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಜೊತೆಗೆ ಫೋಟೋ ತೆಗೆಸಿಕೊಂಡ ಸಿಬ್ಬಂದಿಗಳಲ್ಲಿ ಕೆಲವೇ ಕೆಲವರು ಮಾಸ್ಕ್ ಧರಿಸಿದ್ದಾರೆ ಹೊರತು ಬಹುತೇಕರು ಮೂಗು, ಬಾಯಿ ಮುಚ್ಚದಂತೆ ಮಾಸ್ಕ್ ಹಾಕಿಕೊಂಡಿದ್ದರು. ಜಿಲ್ಲಾಧಿಕಾರಿಗಳಂತೂ ಬರ್ತ್ ಡೇ ಬಾಯ್ ಆಗಿದ್ದರಿಂದ ಎಲ್ಲರ ನಡುವೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಎಲ್ಲರ ನಡುವೆ ನಿಂತಿದ್ದ ಜಿಲ್ಲಾಧಿಕಾರಿಗಳು ಮಾಸ್ಕ್ ಧರಿಸದೆ, ಅಂತರವನ್ನೂ ಕಾಯ್ದುಕೊಳ್ಳದೆ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ನಿಯಮಗಳನ್ನು ಪಾಲನೆ ಮಾಡಬೇಕಾದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೆ ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದೆ ಫೋಟೋ ತೆಗೆಸಿಕೊಂಡಿದ್ದು ಸಾರ್ವಜನಿಕರಲ್ಲಿ ಜಿಲ್ಲಾಡಳಿತದ ಬಗ್ಗೆ ಅಸಮಾಧಾನ ಮೂಡುವಂತೆ ಮಾಡಿದೆ.

ನಾವೇನು ಕಾರ್ಯಕ್ರಮ ಮಾಡಿಲ್ಲ, ಏನಿಲ್ಲ. ಮನೆಯೆದುರು ನಮ್ಮ ಆಫೀಸರ್ಸ್ ವಿಶ್ ಮಾಡಲು ಬಂದಿದ್ದರು. ನಮ್ಮ ಮನೆಯ ಬಾಗಿಲಲ್ಲಿ ಡಿಸಿಯವರ ಜೊತೆ ಒಂದು ಫೋಟೋ ಹೊಡೆದುಕೊಳ್ಳುತ್ತೇವೆ ಅಂದು ಹೊಡೆದುಕೊಂಡರು. ಫಂಕ್ಷನ್ ಇಲ್ಲ, ಪಾರ್ಟಿ ಇಲ್ಲ, ಏನೂ ಇಲ್ಲ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವಿಲ್ಲ ಅಂತಾರೆ. ಅವರೆಲ್ಲ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಇದನ್ನೂ ಓದಿ

ಬೆಳಗಾವಿ: ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬಿದರಿ ವಿರುದ್ಧ ರೊಚ್ಚಿಗೆದ್ದ ದಲಿತರು; ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಆರೋಪ

ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​

(Haveri District Collector taken photo with colleagues without wearing mask and forgetting about social distance)

ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!