AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತದಿಂದ ರೊಚ್ಚಿಗೆದ್ದ ರೈತರು: ಎಪಿಎಂಸಿ ಕಚೇರಿಗೆ ಕಲ್ಲುತೂರಿ, ಕಾರಿಗೆ ಬೆಂಕಿ

ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ. ಕಳೆದ ವಾರ ಪ್ರತಿ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ವಿತ್ತು. ಈಗ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 12 ಸಾವಿರ ರೂ. ಕುಸಿತ ಹಿನ್ನೆಲೆ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿದ್ದಾರೆ.

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತದಿಂದ ರೊಚ್ಚಿಗೆದ್ದ ರೈತರು: ಎಪಿಎಂಸಿ ಕಚೇರಿಗೆ ಕಲ್ಲುತೂರಿ, ಕಾರಿಗೆ ಬೆಂಕಿ
ರೈತರಿಂದ ಕಲ್ಲುತೂರಾಟ
ಗಂಗಾಧರ​ ಬ. ಸಾಬೋಜಿ
|

Updated on:Mar 11, 2024 | 7:07 PM

Share

ಹಾವೇರಿ, ಮಾರ್ಚ್​ 11: ಒಣ ಮೆಣಸಿನಕಾಯಿ (Byadagi chilli) ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ದರ ದಿಢೀರ್ ಇಳಿಕೆಯಿಂದ ಆಕ್ರೋಶಗೊಂಡಿರುವ ರೈತರು ರೊಚ್ಚಿಗೆದ್ದು ಮೆಣಸಿನಕಾಯಿಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್​ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಇಷ್ಟೇ ಅಲ್ಲದೆ ಕಾರಿಗೆ ಬೆಂಕಿ ಹಚ್ಚಿ, ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಕಳೆದ ವಾರ ಪ್ರತಿ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ವಿತ್ತು. ಈಗ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 12 ಸಾವಿರ ರೂ. ಕುಸಿತ ಹಿನ್ನೆಲೆ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮಳೆ ಕೊರತೆಯ ಮಧ್ಯೆ ದಿಢೀರ್ ಕುಸಿದ ಮೆಣಸಿನಕಾಯಿ ದರ, ರೈತ ಹೈರಾಣ

ಇದುವರೆಗೆ 12 ವಾಹನ ಸುಟ್ಟು ಹಾಕಿದ್ದಾರೆ. 1 ಅಗ್ನಿಶಾಮಕ ವಾಹನ ಸಹ ಬೆಂಕಿಗೆ ಆಹುತ್ತಿ ಆಗಿದೆ. ಒಟ್ಟು 3 ಅಗ್ನಿಶಾಮಕ ವಾಹನ ಸ್ಥಳದಲ್ಲಿ ಇದೆ. APMC ಖಡತ ಎಲ್ಲಾ ಬೆಂಕಿಗೆ ಆಹುತಿಯಾಗಿವೆ. ಸ್ಥಳದಿಂದ ಹೊಗಲು ರೈತರು ಪಟ್ಟುಬಿಡುತ್ತಿಲ್ಲ.

ದಿಢೀರ್ ಬೆಲೆ ಕುಸಿತಕ್ಕೆ ಕಾರಣ ತಿಳಿಯಲು ಸಿಎಂ ಸೂಚಿಸಿದ್ದಾರೆ: ಡಾ.ಜಿ.ಪರಮೇಶ್ವರ್

ಈ ವಿಚಾರವಾಗಿ ವಿಧಾನಸೌಧದಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಪ್ರತಿಕ್ರಿಯಿಸಿದ್ದು, ಬೆಲೆ ಕುಸಿತ ಹಿನ್ನೆಲೆಯಲ್ಲಿ ಬ್ಯಾಡಗಿ ಎಪಿಎಂಸಿಯಲ್ಲಿ ಗಲಾಟೆ ಆಗಿದೆ. 20 ಸಾವಿರದಿಂದ 8 ಸಾವಿರ ರೂ. ಮೆಣಸಿನಕಾಯಿ ಬೆಲೆ ಕುಸಿತ ಕಂಡಿದೆ. ಇದು ಒಂದೇ ಎಪಿಎಂಸಿಯಲ್ಲಿ ಆಗಿದೆಯೋ ಅಥವಾ ಬೇರೆ ಕಡೆ ಆಗಿದೆಯೋ ಎಂಬ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷಾಂತರ ಪ್ರೇಕ್ಷಕರ ಸಮ್ಮುಖದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ತಿವಿದು ಯುವಕ ಸಾವು, ಹತ್ತಾರು ಮಂದಿಗೆ ಗಾಯ

ಬೆಲೆ ಕುಸಿತ ಹಿನ್ನೆಲೆಯಲ್ಲಿ ಗಲಾಟೆ ಆಗಿದೆ. ರೈತರು ಎಪಿಎಂಸಿ ಕಚೇರಿಗೆ ನುಗ್ಗಿ ಕುರ್ಚಿ, 2 ವಾಹನ ಸುಟ್ಟಿದ್ದಾರೆ. ತಕ್ಷಣ ಪೊಲೀಸರನ್ನು ಕಳಿಸಿದ್ದೇವೆ. ಸದ್ಯ ನಿಯಂತ್ರಣದಲ್ಲಿದೆ. ದಿಢೀರ್ ಬೆಲೆ ಕುಸಿತಕ್ಕೆ ಕಾರಣ ತಿಳಿಯಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Mon, 11 March 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ