AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಸವಾರರ ಮೇಲೆ ಬಿದ್ದ ಬೃಹತ್ ಬೇವಿನಮರ: ಸ್ಥಳದಲ್ಲೇ ಇಬ್ಬರು ಅಪ್ಪಚ್ಚಿ

ಹಿರೇಕೇರೂರು ಪಟ್ಟಣದಿಂದ ಮಾಸೂರು ಕಡೆಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೃಹತ್​ ಬೇವಿನಮರ ಬಿದ್ದು ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ದಾರುಣ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ. ಮೃತರು ಹಿರೇಕೆರೂರು ತಾಲೂಕಿನ ನಿವಾಸಿಗಳು. ಹಿರೇಕೆರೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೈಕ್ ಸವಾರರ ಮೇಲೆ ಬಿದ್ದ ಬೃಹತ್ ಬೇವಿನಮರ: ಸ್ಥಳದಲ್ಲೇ ಇಬ್ಬರು ಅಪ್ಪಚ್ಚಿ
ಬೈಕ್ ಸವಾರರ ಮೇಲೆ ಬಿದ್ದ ಬೃಹತ್ ಬೇವಿನಮರ, ಸ್ಥಳದಲ್ಲೇ ಇಬ್ಬರು ಅಪ್ಪಚ್ಚಿ
ಗಂಗಾಧರ​ ಬ. ಸಾಬೋಜಿ
|

Updated on: Jul 22, 2024 | 8:13 PM

Share

ಹಾವೇರಿ, ಜುಲೈ 22: ಬೃಹತ್​ ಬೇವಿನಮರ ಬಿದ್ದು ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ಹಿರೇಕೆರೂರು-ಮಾಸೂರು ಮಾರ್ಗಮಧ್ಯೆ ನಡೆದಿದೆ. ಹಿರೇಕೇರೂರು ತಾಲೂಕು ಯತ್ತಿನಹಳ್ಳಿ ಗ್ರಾಮದ ನಿವಾಸಿ ಹನುಮಂತ (28) ಮತ್ತು ಚಿನ್ನಮುಳಗುಂದ ಗ್ರಾಮದ ನಿವಾಸಿ ಮಂಜುನಾಥ್ (29) ಮೃತರು. ಹಿರೇಕೇರೂರು ಪಟ್ಟಣದಿಂದ ಮಾಸೂರು ಕಡೆಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹಿರೇಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಯಾದಗಿರಿ: ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಜರಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಂಡುಬಂದಿದೆ. ಒಂದು ವಾರದ ಹಿಂದೆ ಮೃತಪಟ್ಟ ರೀತಿಯಲ್ಲಿ ಶವ ಪತ್ತೆ ಆಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಧರ್ಮಾಧಿಕಾರಿಯ ಹೊಟ್ಟೆ ಬಗೆದ ದುಷ್ಕರ್ಮಿಗಳು: ಕೊಲೆಗೆ ಕಾರಣವಾಯ್ತಾ ಮಾಟ, ಮಂತ್ರ?

ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವೃದ್ಧನ ಶವವಾಗಿದ್ದು, ಗುರುತು ಪತ್ತೆಯಾಗಿಲ್ಲ. ಗುರುಮಠಕಲ್ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಎಂಟು ದಿನಗಳ ಹಿಂದಷ್ಟೇ ನಿಶ್ಚಿತಾರ್ಥ: ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಚಿಕ್ಕೋಡಿ: ನದಿಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವಂತ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ರೋಹನ್ ಪಾಟೀಲ್(35) ಮೃತ ವ್ಯಕ್ತಿ. ದುರಾದೃಷ್ಟವೆಂದರೆ ಎಂಟು ದಿನಗಳ ಹಿಂದಷ್ಟೇ ರೋಹನ್​ಗೆ ನಿಶ್ಚಿತಾರ್ಥವಾಗಿತ್ತು.

ಇದನ್ನೂ ಓದಿ: ರಾಮನಗರ: ಗೀಸರ್‌ನಿಂದ ವಿಷಾನಿಲ ಸೋರಿಕೆ, ಉಸಿರುಗಟ್ಟಿ ತಾಯಿ, ಮಗ ಸಾವು

ಕೃಷ್ಣಾ ನದಿ ತುಂಬಿರುವ ಹಿನ್ನೆಲೆ ಮಧ್ಯಾಹ್ನ ಪೂಜೆ ಸಲ್ಲಿಸಿ ಬಾಗಿನ ಬಿಡಲು ಹೋದಾಗ ಘಟನೆ ಸಂಭವಿಸಿದೆ. ನದಿ ಮಧ್ಯದಲ್ಲಿ ಹೋಗುತ್ತಿದ್ದಂತೆ ಪಿಡ್ಸ್​ ಬಂದು ರೋಹನ್ ಮುಳುಗಲಾರಂಭಿಸಿದ್ದಾರೆ. ಈ ವೇಳೆ ನಾಲ್ಕೈದು ಜನರಿಂದ ತಕ್ಷಣ ಬೋಟ್ ತೆಗೆದುಕೊಂಡಿ ಹೋಗಿ ರೋಹನ್ ಬದುಕಿಸಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಿ ಮೃತಪಟ್ಟಿದ್ದರು. ಯುವಕರು ರೋಹನ್ ಬದುಕಿಸುವ ವಿಡಿಯೋ ಸ್ಥಳೀಯರೊಬ್ಬರು ಮೊಬೈಲ್​​ನಲ್ಲಿ ಸೆರೆ ಹಿಡಿದಿದ್ದಾರೆ. ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರದಿ: ಅಣ್ಣಪ್ಪ ಬಾರ್ಕಿ

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ