ಹಾವೇರಿ, ಸೆಪ್ಟೆಂಬರ್ 04: ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾವೇರಿ ನಗರಸಭೆ ಚುನಾವಣೆ ಬಿಜೆಪಿ (bjp) ತೆಕ್ಕೆಗೆ ಬಿದಿದ್ದು, ಕಾಂಗ್ರೆಸ್‌ಗೆ (congress) ಮುಖಭಂಗವಾಗಿದೆ. ಆ ಮೂಲಕ ಬಹುಮತ ಇದ್ದರು ಗದ್ದಿಗೆ ಕಾಂಗ್ರೆಸ್ ಪಡೆ ಚೆಲ್ಲಿದೆ. ಮತದಾನ ಪ್ರಕ್ರಿಯಲ್ಲಿ ಕಾಂಗ್ರೆಸ್ನ 6 ಸದಸ್ಯರು ಗೈರಾಗಿದ್ದರು. ಒಟ್ಟು 34 ಸದಸ್ಯರ ಸಂಖ್ಯೆಯನ್ನು ಹಾವೇರಿ ನಗರಸಭೆ ಹೊಂದಿದೆ.
ಕಾಂಗ್ರೆಸ್ ಅಭ್ಯರ್ಥಿ ರೇಣುಕಾ 11 ಮತ ಪಡೆದು ಪರಾಜಿತಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶಶಿಕಲಾ ರಾಮು ಮಾಳಗಿ 17 ಮತ ಪಡೆದು ನಗರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ನಗರಸಭೆ ಮುಂದೆ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ ಮಾಡಲಾಗಿದೆ.
ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಕ್ರಿಯಿಸಿದ್ದು, ರಾಜ್ಯ ರಾಜಕಾರಣದಲ್ಲಿ ಎಲ್ಲ ಹಂತದಲ್ಲೂ ಬದಲಾವಣೆ ಆಗಲಿದೆ. ರಾಜ್ಯ ಚುಕ್ಕಾಣಿ ಬದಲಾವಣೆಯಾದರೂ ಆಶ್ಚರ್ಯ ಪಡಬೇಕಿಲ್ಲ. ರಾಜ್ಯ ರಾಜಕಾರಣದಲ್ಲಿ ಪರಿವರ್ತನೆ ಕಾಲ, ಎಲ್ಲ ಬದಲಾಗಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಚುಕ್ಕಾಣಿ ಬದಲಾವಣೆ ಆಗಲಿದೆ. ಆಪರೇಷನ್ ಕಮಲ ಮಾಡುವ ಅವಶ್ಯಕತೆ ನಮಗೆ ಇಲ್ಲ. ಆದರೆ ದೊಡ್ಡಪ್ರಮಾಣದ ರಾಜಕೀಯ ಬದಲಾವಣೆ ಆಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ, ಅಂತದೇನಿದೆ?
ನಮ್ಮವರೇ ನಮಗೆ ಶತ್ರುಗಳ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ನಾವು ಹಿಂದೆಯೇ ಹೇಳಿದ್ವಿ, ಸಿಎಂಗೆ ತಡವಾಗಿ ಅನುಭವಕ್ಕೆ ಬಂದಿದೆ. ಎಲ್ಲವೂ ಸರಿ ಇದೆ ಅಂತಾ ದೋಣಿಯಲ್ಲಿ ಕುಳಿತಿದ್ದರು. ಈಗ ಕುಂತ ದೋಣಿಯಲ್ಲಿ ತೂತು ಕೊರೆಯುವ ಕೆಲಸ ನಡೆಯುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣ ಆರೋಪಿತ ಅಧಿಕಾರಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ!
ನೋಡೋಣ ರಾಜಕೀಯ ಅನುಭವ ಬಳಸಿಕೊಂಡು ಯಾವ ರೀತಿ ಹೋರಾಟ ಮಾಡುತ್ತಾರೆ ಎಂದು. ಕಾನೂನು ಹೋರಾಟ ಬಹಳ ಪ್ರಾಮುಖ್ಯತೆ ಹೊಂದಿದ್ದು, ಅದರ ಜೊತೆಗೆ ರಾಜಕೀಯ ಹೋರಾಟ ಇದೆ. ಸಿದ್ದರಾಮಯ್ಯ ಮುಂದೆ ಏನು ಮಾಡುತ್ತಾರೆ ಕಾದು ನೋಡೊಣ ಎಂದಿದ್ದಾರೆ.
ವರದಿ: ಅಣ್ಣಪ್ಪ ಬಾರ್ಕಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.