Haveri Road Accident: ಹಾವೇರಿ ಅಪಘಾತ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣಡ ಮಾಡಿದ್ದಾರೆ.

Haveri Road Accident: ಹಾವೇರಿ ಅಪಘಾತ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Jun 28, 2024 | 2:26 PM

ಹಾವೇರಿ, ಜೂನ್​ 28: ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು.

ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.

ಇದನ್ನೂ ಓದಿ: ಅಪಘಾತಕ್ಕೀಡಾದ ಟಿಟಿಯನ್ನು ಆದರ್ಶ್ ಕೇವಲ 15ದಿನಗಳ ಹಿಂದೆ ಖರೀದಿಸಿದ್ದ: ಸುಮಂತ್, ಅದರ್ಶ್ ಸೋದರ

ಸಂತಾಪ ಸೂಚಿಸಿದ ಕೇಂದ್ರ ಸಚಿವ ಜೋಶಿ

ಮುಂಜಾನೆ ಹಾವೇರಿ ಜಿಲ್ಲೆ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ 13 ಜನರು ಸಾವೀಗಿಡಾದ ಸುದ್ದಿ ತಿಳಿದು ಬಹಳ ದುಃಖವಾಗಿದೆ. ರಾಜ್ಯ ಸರ್ಕಾರ ಕೂಡಲೇ ಮೃತರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ.

ಸಂಸದ ಬೊಮ್ಮಾಯಿ ಸಂತಾಪ

ಇಂದು (ಜೂ.28) ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂಸದ ಬಸವರಾಜ್​ ಬೊಮ್ಮಾಯಿ ಸಂತಾಪ ಸೂಚಿಸಿದರು.

ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪತಿಹಾರ ನಿಧಿಯಿಂದ ಸೂಕ್ತ ಪರಿಹಾರ‌ ನೀಡಬೇಕು. ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಬಿವೈ ವಿಜಯೇಂದ್ರ ಸಂತಾಪ

ಹಾವೇರಿ ಜಿಲ್ಲೆಯ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ವರ್ಷ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸೇರಿ 13 ಜನ ಮೃತಪಟ್ಟ ಘಟನೆ ಮಮ್ಮಲ ಮರುಗುವಂತೆ ಮಾಡಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರಾಗಿದ್ದು ಮೃತರ ಕುಟುಂಬಕ್ಕೆ ಆಘಾತ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಅಗಲಿದ ಆತ್ಮಗಳಿಗೆ ಚಿರಶಾಂತಿ ದೊರೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂತಾಪ ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Fri, 28 June 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ