AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಪರೀಕ್ಷಾ ವೇಳಾಪಟ್ಟಿ ಪ್ರಕಟ

ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಿಕ್ಷಕ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 21 ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಪರೀಕ್ಷೆಗಳು 2027ರ ಜನವರಿ 18 ಮತ್ತು 19ರಂದು ನಡೆಯಲಿವೆ. ಕೊನೆಯ ಕ್ಷಣದವರೆಗೆ ಕಾಯದೆ, ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಹಾವೇರಿ: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಪರೀಕ್ಷಾ ವೇಳಾಪಟ್ಟಿ ಪ್ರಕಟ
ಶಾಲಾ ಶಿಕ್ಷಕರ ನೇಮಕಾತಿImage Credit source: Getty Images
ಅಕ್ಷತಾ ವರ್ಕಾಡಿ
|

Updated on:Nov 24, 2026 | 11:44 AM

Share

ಹಾವೇರಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮಹತ್ವದ ಸುದ್ದಿ. 2026-27ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹಾವೇರಿ ಜಿಲ್ಲಾ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರವು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ. ಇದರ ಜೊತೆಗೆ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿಯನ್ನೂ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ?

ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರು (1ರಿಂದ 5ನೇ ತರಗತಿ) ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-II (1ರಿಂದ 8ನೇ ತರಗತಿ) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಈ ಹಿಂದೆ 2026ರ ಆಗಸ್ಟ್ 11ರಂದು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿ ಸೇರ್ಪಡೆ ಅಧಿಸೂಚನೆ ಪ್ರಕಟಿಸಲಾಗಿದೆ.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ:

2026ರ ನವೆಂಬರ್ 23ರಂದು ಪ್ರಕಟವಾದ ವಿಶೇಷ ರಾಜ್ಯಪತ್ರಿಕೆಯ (ಗೆಜೆಟ್) ಪ್ರಕಾರ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನವೆಂಬರ್ 23ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 21, 2026 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಶುಲ್ಕ ಪಾವತಿಸಿರುವುದನ್ನು ಖಚಿತಪಡಿಸಿಕೊಳ್ಳಲು ಡಿಸೆಂಬರ್ 23ರವರೆಗೆ ಅವಕಾಶ ನೀಡಲಾಗಿದೆ.

ಪರಿಷ್ಕೃತ ಅರ್ಜಿ ಸಲ್ಲಿಕೆ ವೇಳಾಪಟ್ಟಿ:

  • ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: 23-11-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2026
  • ಶುಲ್ಕ ಪಾವತಿ ಖಚಿತಪಡಿಸಿಕೊಳ್ಳಲು ಕೊನೆಯ ದಿನಾಂಕ: 23-12-2026

ಜನವರಿಯಲ್ಲಿ ನೇಮಕಾತಿ ಪರೀಕ್ಷೆ:

ಅರ್ಜಿ ಸಲ್ಲಿಕೆ ದಿನಾಂಕದ ಜೊತೆಗೆ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿಯನ್ನೂ ಪ್ರಾಧಿಕಾರ ಪ್ರಕಟಿಸಿದೆ. 2027ರ ಜನವರಿ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳು ಪರೀಕ್ಷೆಯ ದಿನಾಂಕ ಮತ್ತು ಸಮಯವನ್ನು ಗಮನದಲ್ಲಿಟ್ಟುಕೊಂಡು ಸಿದ್ಧತೆ ಮಾಡಿಕೊಳ್ಳಬೇಕಿದೆ.

ಇದನ್ನೂ ಓದಿ: ಮೊದಲ ಉದ್ಯೋಗ ಪಡೆಯುವುದು ಹೇಗೆ? ಫ್ರೆಶರ್‌ಗಳು ತಿಳಿದುಕೊಳ್ಳಬೇಕಾದ ಪ್ರಮುಖ ವಿಚಾರಗಳಿವು

ಜನವರಿ 18, 2027 (ಸೋಮವಾರ):

  • ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ: ಪತ್ರಿಕೆ-1 (ಸಾಮಾನ್ಯ)
  • ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ: ಪತ್ರಿಕೆ-2 (ಗಣಿತ, ಪರಿಸರ ಅಧ್ಯಯನ, ಸಮಾಜ ವಿಜ್ಞಾನ)

ಜನವರಿ 19, 2027 (ಮಂಗಳವಾರ):

  • ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ: ಪತ್ರಿಕೆ-2 (ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-II)

ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ:

ಹಾವೇರಿ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರದ ಅಧಿಕಾರಿಗಳು ಈ ಸೇರ್ಪಡೆ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ನೇಮಕಾತಿಗೆ ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ವಿಸ್ತರಿತ ಅರ್ಜಿ ಸಲ್ಲಿಕೆ ಅವಧಿಯ ಸದುಪಯೋಗ ಪಡೆದುಕೊಳ್ಳಬೇಕು. ಕೊನೆಯ ಕ್ಷಣದವರೆಗೆ ಕಾಯದೆ ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳು, ಅರ್ಹತಾ ಮಾನದಂಡಗಳು ಹಾಗೂ ಇತರ ಷರತ್ತುಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವುದು ಸೂಕ್ತ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:40 am, Tue, 24 November 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ