Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವು

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿ ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್‌ ಬಳಿ ಅಪಘಾತ ಸಂಭವಿಸಿದ್ದು, ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದ್ದಾಗ ಘಟನೆ ಅವಘಡ ಸಂಭವಿಸಿದೆ.

ಹಾವೇರಿ: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವು
ಹಾವೇರಿ: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವು
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 21, 2024 | 8:52 PM

ಹಾವೇರಿ, ಸೆಪ್ಟೆಂಬರ್ 21: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (died) ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್‌ ಬಳಿ ನಡೆದಿದೆ. ಸಿದ್ದು(24) ಹಾಗೂ ಪ್ರೀತಮ್‌(25) ಮೃತ ಕೂಲಿ ಕಾರ್ಮಿಕರು. ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದ್ದಾಗ ರೋಲರ್ ಹರಿದು ಸಾವನ್ನಪ್ಪಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲೇ ಶವವಿಟ್ಟು ಕುಟುಂಬಸ್ಥರು, ಜನರಿಂದ ಪ್ರತಿಭಟನೆ ಮಾಡಲಾಗಿದೆ. ಸ್ಥಳಕ್ಕೆ ಗುತ್ತಿಗೆದಾರರು ಬರುವವರೆಗೂ ಶವ ಸ್ಥಳಾಂತರಿಸದಿರಲು ನಿರ್ಧಾರ ಮಾಡಲಾಗಿದೆ. ಸ್ಥಳದಲ್ಲಿಯೇ ಪರಿಹಾರ ಘೋಷಣೆ ಮಾಡಲು ಒತ್ತಾಯಿಸಲಾಗಿದೆ. ಸದ್ಯ ಬಿಗುವಿನ ವಾತಾವರಣ ಹಿನ್ನೆಲೆ ಸ್ಥಳಕ್ಕೆ ಎಸ್​ಪಿ ಭೇಟಿ ನೀಡಿದ್ದಾರೆ.

ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸರಿಂದ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಸಂದೀಪ್(23), ಅಖಿಲ್(22), ಆಕಾಶ್(21) ಬಂಧಿತ ಗಾಂಜಾ ಪೆಡ್ಲರ್ಸ್‌. 6 ಕೆ.ಜಿಗೂ ಹೆಚ್ಚು ಗಾಂಜಾ, 20 ಗ್ರಾಂ ಹೈಡ್ರೋ ಗಾಂಜಾ, ನಗದು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ಕೇರಳದಿಂದ ರೈಲಿನ ಮುಖಾಂತರ ಬೆಂಗಳೂರಿಗೆ ಗಾಂಜಾ ತರುತ್ತಿದ್ದ ಗ್ಯಾಂಗ್, ಹೊರ ರಾಜ್ಯದವರನ್ನೇ ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದರು. ಮತ್ತೊಬ್ಬ ಪ್ರಮುಖ ಅರೋಪಿ ಅಲ್ತಾಫ್ ಪತ್ತೆಗಾಗಿ ಪೊಲೀಸರಿಂದ ಶೋಧ ಮಾಡಲಾಗುತ್ತಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾರ್​ನಲ್ಲಿ ಕುಳಿತ ವ್ಯಕ್ತಿಗೆ ಚಾಕು ಇರಿತ: ಸಾವು

ದಾವಣಗೆರೆ: ನಿಟವಳ್ಳಿ ರಸ್ತೆಯ ಕೆಟಿಜೆ ನಗರದಲ್ಲಿರುವ ಪ್ರಕಾಶ್ ಬಾರ್​ನಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಕುಮಾರ (35) ಎಂಬಾತ ಸಾವನ್ನಪ್ಪಿದ್ದಾನೆ. ಬಾರ್​ನಲ್ಲಿ ಕುಳಿತಿದ್ದಾಗ ಹಿಂದಿನಿಂದ ಬಂದು ಗೌತಮ್ ಎಂಬಾತ ಚಾಕು ಚುಚ್ಚಿದ್ದ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದರೂ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ.

ಇದನ್ನೂ ಓದಿ: ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಪೊಲೀಸರು ತಮ್ಮ ಜೀಪ್​ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಕುಮಾರ ಕೊನೆಯುಸಿರೆಳೆದಿದ್ದಾರೆ. ಕೊಲೆ ಆರೋಪಿ ಗೌತಮ್​​ನನ್ನ ಕೆಟಿಜೆ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:43 pm, Sat, 21 September 24

ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ