ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಮತದಾನ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ ಮುಗಿದ ಬೆನ್ನಲ್ಲೇ ಹಾವೇರಿ ತಾಲ್ಲೂಕಿನಲ್ಲಿ 10 ಬಳಕೆಯಾಗದ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆಯಾಗಿವೆ. ಇದು ಅನುಮಾನಕ್ಕೆ ಕಾರಣವಾಗಿದ್ದರೂ, ಜಿಲ್ಲಾಡಳಿತವು ಈ ಬಾಕ್ಸ್‌ಗಳು ಹಳೆಯದಾಗಿದ್ದು, ಉಪಚುನಾವಣೆಯೊಂದಿಗೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಮತದಾನ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ
ಬ್ಯಾಲೆಟ್ ಬಾಕ್ಸ್‌ಗಳು
Follow us
ವಿವೇಕ ಬಿರಾದಾರ
|

Updated on: Nov 14, 2024 | 1:07 PM

ಹಾವೇರಿ, ನವೆಂಬರ್​ 14: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Shiggaon Assembly Election Polls) ನಡೆದು ಮರುದಿನವೇ ಹಾವೇರಿ (Haveri) ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್​ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿವೆ. ಬುಧವಾರವಷ್ಟೇ ಶಿಗ್ಗಾಂವಿ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಿದೆ.

ಈ ವಿಚಾರವಾಗಿ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಶಿಗ್ಗಾಂವಿ ಉಪಚುನಾವಣೆಗೂ ಮತ್ತು ಈ ಬ್ಯಾಲೆಟ್​ ಬಾಕ್ಸ್​ಗಳಿಗೂ ಸಂಬಂಧ ಇಲ್ಲ. ಉಪಚುನಾವಣೆಯಲ್ಲಿ ಇವಿಎಂ ಬಳಸಲಾಗಿದೆ. ಈ ಬ್ಯಾಲೆಟ್ ಬಾಕ್ಸಗಳು ನಿರುಪಯಕ್ತವಾಗಿದ್ದವು. ಹಲವು ವರ್ಷಗಳಿಂದ ಬಳಕೆಯಾಗಿರಲಿಲ್ಲ. ಹೀಗಾಗಿ, ಎಪಿಎಂಸಿಯಲ್ಲಿರುವ ಒಂದು ಹಳೆ ಗೋದಾಮಿನಲ್ಲಿ ಇಡಲಾಗಿದೆ ಎಂದು ತಿಳಿಸಿದರು.

ಹಲವು ವರ್ಷಗಳ ಹಿಂದೆಯೇ ಗೋದಾಮಿನಲ್ಲಿ ತಂದಿಡಲಾಗಿತ್ತು. ಕಿಡಿಗೇಡಿಗಳು ಬಾಕ್ಸ್​ಗಳನ್ನು ಮಾರುವ ಉದ್ದೇಶದಿಂದ ಕಳ್ಳತನ ಮಾಡಿದ್ದಾರೆ. ಆದರೆ, ಸಾಗಿಸಲು ಸಾಧ್ಯವಾಗದೇ, ಕಿಡಿಗೇಡಿಗಳು ನ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಉಪಚುನಾವಣೆ ಅಂತ್ಯ: ಸಂಡೂರು, ಶಿಗ್ಗಾಂವಿ-ಚನ್ನಪಟ್ಟಣದಲ್ಲಿ ಎಷ್ಟು ಮತದಾನ?

ಇನ್ನು, ಬಳಕೆಯಲ್ಲಿ ಇಲ್ಲದ ಬ್ಯಾಲೆಟ್ ಬಾಕ್ಸ್​ಗಳನ್ನು ಇಟ್ಟಿದ್ದ ಗೋದಾಮಿಗೆ ಭೇಟಿ ನೀಡಿದ ಪೊಲೀಸರು ಮತ್ತು ಹಾವೇರಿ ತಹಶೀಲ್ದಾರ್ ಶರಣಮ್ಮ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪೊಲೀಸರು ಕಂದಾಯ ಇಲಾಖೆಯವರಿಂದ ದೂರು ಪಡೆದು ತನಿಖೆ ಮುಂದುವರೆಸಿದ್ದಾರೆ.

ಶಿಗ್ಗಾವಿ ಉಪಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಬಳಕೆಯಲ್ಲಿದ್ದ ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ