AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: 6 ನಿರ್ಣಯ ಮಂಡನೆ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನವಾಗಿದೆ. ಕೊನೆಯ ದಿನವಾದ ಇಂದು ಸಾಹಿತ್ಯ ಸಮ್ಮೇಳನದಲ್ಲಿ 6 ನಿರ್ಣಯ ಮಂಡನೆ ಮಾಡಲಾಗಿದೆ.   

ಹಾವೇರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: 6 ನಿರ್ಣಯ ಮಂಡನೆ
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿರುವ ಜನImage Credit source: deccanherald.com
TV9 Web
| Edited By: |

Updated on:Jan 08, 2023 | 5:34 PM

Share

ಹಾವೇರಿ: ಯಾಲಕ್ಕಿ ನಾಡಿನಲ್ಲಿ ಕಳೆದ ಎರಡು ದಿನಗಳಿಂದ ಕನ್ನಡ ಹಬ್ಬ ನಡೆಯುತ್ತಿದೆ. ಜಿಲ್ಲೆಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಇಂದು(ಜ. 8) ಕೊನೆಯ ದಿನವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದರು. ಪ್ರೊ. ದೊಡ್ಡರಂಗೇಗೌಡ (Prof. Doddarange Gowda) ಅವರು ಸಮ್ಮೇಳನದ ಅಧ್ಯಕ್ಷರಾಗಿದ್ದರು. ಯುವ ಸಾಹಿತ್ಯಾಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ನಿರೀಕ್ಷೆಗೂ ಮೀರಿ ಜನರು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದರು. ಇನ್ನು 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 6 ನಿರ್ಣಯ ಮಂಡನೆ ಮಂಡನೆ ಮಾಡಲಾಗಿದೆ. ಅವು ಈ ಕೆಳಗಿನಂತಿವೆ.

1.ಸಮ್ಮೇಳನ ಯಶಸ್ವಿ ಹಿನ್ನೆಲೆ ಹಾವೇರಿಯ ಸಮಸ್ತ ಜನತೆಗೆ ಧನ್ಯವಾದ.

2.ಕನ್ನಡ ಭಾಷಾ ಅಭಿವೃದ್ಧಿ ಬಿಲ್ ಸುಗ್ರೀವಾಜ್ಞೆ ಮೂಲಕ‌ ಜಾರಿಗೆ ಬರಬೇಕು.

3.ಗಡಿ ವಿವಾದದ ಮಹಾಜನ್ ವರದಿ ‘ಸುಪ್ರಿಂ’ನಲ್ಲಿ ವಿಚಾರಣೆ ಹಂತದಲ್ಲಿದೆ. ನ್ಯಾಯಾಲಯದ ತೀರ್ಪಿನಂತೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು.

4.ಕನ್ನಡ ಹೋರಾಟಗಾರರ ಮೇಲಿನ ಕೇಸ್​ಗಳನ್ನು ಹಿಂಪಡೆಯಬೇಕು.

5.ಕನ್ನಡ ಭಾಷೆಯ ಮೇಲಿನ ಹಿಂದಿ ಹೇರಿಕೆಗೆ ಖಂಡನೆ.

6. ದಾವಣಗೆರೆಯಲ್ಲಿ ನಡೆಯಲಿರುವ ವಿಶ್ವಕನ್ನಡ ಸಮ್ಮೇಳನವನ್ನು ಕಸಾಪ ಸಹಯೋಗದೊಂದಿಗೆ ನೆರವೇರಿಸಬೇಕು.

ಇದನ್ನೂ ಓದಿ: Kannada Sahitya Sammelana: ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಜನ ಮನ ಸೆಳೆದ ಫಲ ಪುಷ್ಪ ಪ್ರದರ್ಶನ: ಕಲ್ಲಂಗಡಿಯಲ್ಲಿ ಅರಳಿದ ನಟ ಅಪ್ಪು

ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ

ಇನ್ನು 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದು, ಮುಂದಿನ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್​ನ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಾವೇರಿಯಲ್ಲಿ ಕಸಾಪ ಅಧ್ಯಕ್ಷರ ನೇತೃತ್ವದಲ್ಲಿ ಇಂದು (ಜ.08) ಕಾರ್ಯಕಾರಿಣಿ ಸಮಿತಿ ಸಭೆ ನಡೆದಿದ್ದು, 9 ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ನಡೆಸುವಂತೆ ಮನವಿ ಮಾಡಿದರು. ಈ ಮನವಿಗೆ ಹೆಚ್ಚಿನ ಜನರು ಬೆಂಬಲ ಸೂಚಿಸಿದ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ (87th Kannada Sahitya Sammelana) ನಡೆಸಲು ನಿರ್ಧರಿಸಲಾಯಿತು. ಮತ ಚಲಾವಣೆಯಲ್ಲಿ ಮಂಡ್ಯಕ್ಕೆ 17 ಮತಗಳು ಬಂದಿದ್ದು, ಬಳ್ಳಾರಿಗೆ 16 ಮತಗಳು ಬಂದಿವೆ.

ಕಸಾಪ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ, 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿದೆ. ದೊಡ್ಡ ಕಾರ್ಯಕ್ರಮ ಮಾಡುವಾಗ ಸಣ್ಣ ಪುಟ್ಟ ಸಮಸ್ಯೆ ಆಗುವುದು ಸಹಜ. ಈ ಬಾರಿ ಆದ ಸಮಸ್ಯೆ ಮುಂದೆ ಪುನರಾರ್ತನೆ ಆಗದಂತೆ ನೋಡಿಕೊಳ್ಳುತ್ತೆವೆ ಎಂದರು.

ಇದನ್ನೂ ಓದಿ: Kannada Sahitya Sammelana 2023: ರಾಜ್ಯದ ಪ್ರತಿಯೊಬ್ಬ ಸಂಸದ 3 ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಿ- ಸಮ್ಮೇಳನದ ಸರ್ವಾಧ್ಯಕ್ಷ ದೊಡ್ಡರಂಗೇಗೌಡ ಕರೆ

ಕರ್ನಾಟಕದಲ್ಲಿ ಮತ್ತೊಮ್ಮೆ ಗೋಕಾಕ್ ಚಳವಳಿ ಆಗಬೇಕು: ದೊಡ್ಡರಂಗೇಗೌಡ

ಕರ್ನಾಟಕದಲ್ಲಿ ಮತ್ತೊಮ್ಮೆ ಗೋಕಾಕ್ ಚಳವಳಿ ಆಗಬೇಕಿದೆ ಎಂದು ಸಾಹಿತ್ಯ ಸಂವಾದದಲ್ಲಿ ಸರ್ವಾಧ್ಯಕ್ಷ ದೊಡ್ಡರಂಗೇಗೌಡ ಹೇಳಿದರು. ಪ್ರಸ್ತುತ ಕನ್ನಡ ವಿಶ್ವಮುಖಿ ಕೂಡ ಹೌದು. ಆಸ್ಟ್ರೇಲಿಯಾ ಸೇರಿದಂತೆ ವಿದೇಶಗಳಲ್ಲಿ ಕನ್ನಡದ ಕೆಲಸಗಳಾಗುತ್ತಿವೆ. ಅಮೆರಿಕದಲ್ಲಿ 16 ಕನ್ನಡ ಸಂಘಗಳಿವೆ‌. ಹೀಗಾಗಿ ಪ್ರಸ್ತುತ ಕನ್ನಡ ವಿಶ್ವಮುಖಿ ಆಗಿದೆ ಅಂತಾ ಹೇಳಿದ್ದೇನೆ. ಇವತ್ತು ಸಾಹಿತಿಗಳಾವವರು ಮೊದಲು ಆಲಿಸುವುದನ್ನ ಕಲಿಯಬೇಕು.

ಹಳೆಯ ಕವಿಗಳನ್ನ ಓದಬೇಕು. ಇದರಿಂದ ಪದಜ್ಞಾನ, ಭಾಷಾಜ್ಞಾನ ಹೆಚ್ಚುತ್ತದೆ. ಕನ್ನಡದಲ್ಲಿ ಬೇಂದ್ರೆ, ಕುವೆಂಪು, ಮಾಸ್ತಿ ಸೇರಿದಂತೆ ಅನೇಕರಿದ್ದಾರೆ ಅವರೆಲ್ಲರನ್ನೂ ಓದಬೇಕು ಎಂದು ಇತ್ತೀಚಿನ ಚಿತ್ರ ಸಾಹಿತಿಗಳಿಗೆ ಪ್ರೊ. ದೊಡ್ಡರಂಗೇಗೌಡ ಕಿವಿ ಮಾತು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಕ್ ಮಾಡಿ.

Published On - 5:27 pm, Sun, 8 January 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು