86ನೇ ಕನ್ನಡ ಸಾಹಿತ್ಯ ಸಮ್ಮೇಳನ: ತಾಯಿ ಭುವನೇಶ್ವರಿದೇವಿ ಮೂರ್ತಿ ಹೊತ್ತು ಸಜ್ಜಾದ ಕನ್ನಡ ರಥ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಚಾರ

ಏಲಕ್ಕಿ ಕಂಪಿನ ನಾಡು ಹಾವೇರಿ ಜಿಲ್ಲೆಯಲ್ಲಿ ಅಕ್ಷರ ಜಾತ್ರೆ ನಡೆಸೋಕೆ ಮುಹೂರ್ತ ಕೂಡಿ ಬಂದಿದೆ. ಅಕ್ಷರ ಜಾತ್ರೆ ನಡೆಸುವುದಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನ್ನಡ ರಥ ಸಂಚಾರ ಮಾಡಲಿದೆ. ಅದಕ್ಕಾಗಿ ಇನ್ನೇನು ಕೆಲವು ದಿನಗಳಲ್ಲಿ ರಥ ರಾಜ್ಯದ ಹಲವು ಜಿಲ್ಲೆಗಳಿಗೆ ಹೋಗಿ ಸಮ್ಮೇಳನ ನಡೆಯುವ ಸಮಯಕ್ಕೆ ಹಾವೇರಿಗೆ ಬರಲಿದೆ.

86ನೇ ಕನ್ನಡ ಸಾಹಿತ್ಯ ಸಮ್ಮೇಳನ: ತಾಯಿ ಭುವನೇಶ್ವರಿದೇವಿ ಮೂರ್ತಿ ಹೊತ್ತು ಸಜ್ಜಾದ ಕನ್ನಡ ರಥ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಚಾರ
ತಾಯಿ ಭುವನೇಶ್ವರಿದೇವಿಯನ್ನು ಹೊತ್ತ ಕನ್ನಡ ರಥ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 19, 2022 | 3:07 PM

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಹಾವೇರಿಯಲ್ಲಿ ಜನವರಿ 6,7 ಮತ್ತು 8 ರಂದು ಮೂರು ದಿನಗಳ ಕಾಲ ನಡೆಯಲಿದೆ. ಕನ್ನಡ ಸಾಹಿತ್ಯ ಸಮ್ಮೇಳನ (kannada sahitya sammelana)ಕ್ಕೆ ಪೂರ್ವಭಾವಿಯಾಗಿ ಕನ್ನಡ ಜಾಗೃತಿ ಮೂಡಿಸೋಕೆ ಕನ್ನಡ ರಥ ನಿರ್ಮಾಣ ಮಾಡಲಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಗ್ರಾಮದ ಬಳಿ ಇರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕನ್ನಡ ರಥವನ್ನು ಸಜ್ಜುಗೊಳಿಸಲಾಗಿದೆ. ಕಲಾವಿದ ಶಹಜಹಾನ್ ಮುದಕವಿ ನೇತೃತ್ವದ ತಂಡದಿಂದ ಕನ್ನಡ ರಥವನ್ನು ನಿರ್ಮಾಣ ಮಾಡಲಾಗಿದೆ. ಕರ್ನಾಟಕ ವಾಯುವ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನಲ್ಲಿ ಕನ್ನಡ ರಥ ನಿರ್ಮಿಸಲಾಗುತ್ತಿದೆ. ರಥದ ಮುಂಭಾಗದಲ್ಲಿ ತಾಯಿ ಭುವನೇಶ್ವರಿದೇವಿ ಹಾಗೂ ರಥದ ಒಳಗಡೆ ಮತ್ತೊಂದು ಭುವನೇಶ್ವರಿದೇವಿಯ ಮೂರ್ತಿ ತಯಾರಿಸಲಾಗಿದೆ.

ಈಗಾಗಲೇ ಮೈಸೂರು ದಸರಾ ಸೇರಿದಂತೆ ಹಲವಾರು ಕಡೆ ಟ್ಯಾಬ್ಲೋಗಳನ್ನು ನಿರ್ಮಾಣ ಮಾಡಿರುವ ಅನುಭವ ಇರುವ ಶಹಜಹಾನ್ ಮುದಕವಿ ನೇತೃತ್ವದಲ್ಲಿ ಕನ್ನಡ ರಥ ನಿರ್ಮಾಣ ಮಾಡಲಾಗಿದ್ದು, ಕನ್ನಡ ರಥದಲ್ಲಿ ಭುವನೇಶ್ವರಿ ದೇವಿಯ ಮೂರ್ತಿ ಕೂರಿಸಿ ಬೃಹತ್ ರಥ ನಿರ್ಮಿಸಲಾಗಿದೆ. ಕನ್ನಡ ರಥ ಇನ್ನೇನು ಹೊರಡಲು ಸಜ್ಜಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಹಾಗೂ ಜಿಲ್ಲಾಧಿಕಾರಿಗಳು ರಥವನ್ನು ನೋಡಿ ಕನ್ನಡ ರಥ ಸಂಚಾರಕ್ಕೆ ಹೊರಡುವ ದಿನಾಂಕ ಅಂತಿಮಗೊಳಿಸಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರದಿಂದ ಕನ್ನಡ ರಥಕ್ಕೆ ಚಾಲನೆ ದೊರೆಯಲಿದೆ. ಅಲ್ಲಿಂದ ಭುವನೇಶ್ವರಿದೇವಿ ಮೂರ್ತಿ ಹೊತ್ತ ಕನ್ನಡ ರಥ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಚರಿಸಲಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನ್ನಡದ ರಥ ಸಂಚರಿಸಿ ಒಂದು ತಿಂಗಳ ಕಾಲ ಕನ್ನಡದ ರಥ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ದಿನ ಜನೇವರಿ 6ರ ವೇಳೆಗೆ ಕನ್ನಡ ರಥ ಯಾಲಕ್ಕಿ ಕಂಪಿನ ನಾಡು ಹಾವೇರಿಗೆ ತಲುಪಲಿದೆ. ಈಗ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಚಾರಕ್ಕೆ ಹೊರಡಲು ಸಜ್ಜಾಗಿರುವ ಕನ್ನಡ ರಥಕ್ಕೆ ಕಲಾವಿದರು ಅಂತಿಮ ಟಚ್ ಕೊಡುತ್ತಿದ್ದಾರೆ. ರಥದ ಅಕ್ಕಪಕ್ಕದಲ್ಲಿ ಕರ್ನಾಟಕದ ಭೂಪಟ, ಸಿಎಂ ಮತ್ತು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರ ಭಾವಚಿತ್ರದ ಬ್ಯಾನರ್ ಹಾಕಿದ ನಂತರ ಕನ್ನಡ ರಥ ರಾಜ್ಯ ಸಂಚಾರ ಹೊರಡಲಿದೆ. ಜಾನಪದ ಕಲೆ, ಸಂಸ್ಕೃತಿ, ಪರಂಪರೆ ಸಾರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಆವರಣದಲ್ಲಿ ಕಲಾವಿದ ಶಹಜಹಾನ್ ಮುದಕವಿ ನೇತೃತ್ವದ ತಂಡದಿಂದ ಕನ್ನಡ ರಥ ಸಜ್ಜಾಗಿರುವುದು ಜಾನಪದ ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ.

ಇದನ್ನೂ ಓದಿ:ಕಾಲುಗಳಿಗೆ ಬೊಬ್ಬೆ ಬಂದರೂ ಪುನೀತ್ ರಾಜಕುಮಾರ ಅಭಿಮಾನಿಯೊಬ್ಬರು ಹಾವೇರಿಯಿಂದ ಬೆಂಗಳೂರಿಗೆ ನಡೆದೇ ಬಂದರು!

ಕಳೆದ ಹಲವು ವರ್ಷಗಳಿಂದ ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಬೇಕು ಎಂಬ ಕೂಗು ಕೇಳಿ ಬರುತ್ತಿತ್ತು. ಆದರೆ ಕಾರಣಾಂತರಗಳಿಂದ ಅಕ್ಷರ ಜಾತ್ರೆ ನಡೆಸುವುದಕ್ಕೆ ಮುಹೂರ್ತ ಕೂಡಿ ಬಂದಿರಲಿಲ್ಲ. ಆದರೆ ಜನವರಿ 6,7 ಮತ್ತು 8ರಂದು ಮೂರು ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸೋಕೆ ದಿನಾಂಕ ಅಂತಿಮ ಆಗಿದೆ. ಸಮ್ಮೇಳನದ ಜೊತೆಗೆ ಕನ್ನಡ ಜಾಗೃತಿಗಾಗಿ ಕನ್ನಡ ರಥ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಚರಿಸಿ ಕನ್ನಡ ಡಿಂಡಿಮ ಬಾರಿಸುವುದರ ಜೊತೆಗೆ ಅಕ್ಷರ ಜಾತ್ರೆಗೆ ಕನ್ನಡ ಮನಸ್ಸುಗಳನ್ನು ಸೆಳೆಯೋ ಕೆಲಸ ಮಾಡಲಿದೆ.

ವರದಿ: ಪ್ರಭುಗೌಡ.ಎನ್.ಪಾಟೀಲ ಟಿವಿ9 ಹಾವೇರಿ‌

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:05 pm, Sat, 19 November 22

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ