ಹಾವೇರಿ: ಗಣಪತಿ ಹಬ್ಬಕ್ಕೆಂದು ಪಟಾಕಿ ತಂದು ದಾಸ್ತಾನು ಮಾಡಿದ್ದ ಗೋಡೌನ್​ಗೆ ಬೆಂಕಿ; 1 ಕೋಟಿ ರೂ. ಅಧಿಕ ಮೌಲ್ಯದ ಪಟಾಕಿ ಭಸ್ಮ

ಹಾವೇರಿ ಪಟಾಕಿ ಅವಘಡ ಸ್ಥಳಕ್ಕೆ ಜಿಲ್ಲಾಧಿಕಾರಿ ರಘುನಂದಮೂರ್ತಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ‌ಗೋಡಾನ್​ಗೆ ಪರವಾನಗೆ ನೀಡಿದ್ದಾರೆಯೇ ಎಂಬ ತನಿಖೆ ನಡೆಯುತ್ತಿದ್ದು, ಪರವಾನಗೆ ಇರದೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಘುನಂದಮೂರ್ತಿ ಹೇಳಿದರು. ಇನ್ನು ಬೆಂಕಿ ಅವಘಡದಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವೇರಿ: ಗಣಪತಿ ಹಬ್ಬಕ್ಕೆಂದು ಪಟಾಕಿ ತಂದು ದಾಸ್ತಾನು ಮಾಡಿದ್ದ ಗೋಡೌನ್​ಗೆ ಬೆಂಕಿ; 1 ಕೋಟಿ ರೂ. ಅಧಿಕ ಮೌಲ್ಯದ ಪಟಾಕಿ ಭಸ್ಮ
ಹಾವೇರಿಯ ಪಟಾಕಿ ಗೋದಾಮಿಗೆ ಬೆಂಕಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 29, 2023 | 3:22 PM

ಹಾವೇರಿ, ಆ.29: ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ (Ganesh Chaturthi)ಬರುತ್ತಿದೆ. ಅದಕ್ಕೊಸ್ಕರ ಅದ್ದೂರಿ ಸಿದ್ಧತೆ ಕೂಡ ಮಾಡಿಕೊಳ್ಳಲಾಗುತ್ತಿದೆ. ಹೌದು, ಕೊರೊನಾ ಬಳಿಕ ಇದೀಗ ಗಣಪತಿ ಹಬ್ಬವನ್ನು ವಿಜೃಂಭಣೆಯಿಂದ ಮಾಡಲಾಗುತ್ತಿದೆ. ಅದರಂತೆ ಹಬ್ಬಕ್ಕೆಂದು ಹಾವೇರಿ (Haveri) ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್​ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಇದೀಗ ಏಕಾಎಕಿ ಅದಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದೆ.

ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಬೆಂಕಿ ಕಿಡಿ ತಗುಲಿರುವ ಶಂಕೆ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಪಟಾಕಿ ಇಟ್ಟಿದ್ದ ಕಟ್ಟಡದ ಬಳಿ ವೆಲ್ಡಿಂಗ್​ ಕಾರ್ಯ ನಡೆಯುತ್ತಿತ್ತು. ಪರಿಣಾಮ ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಬೆಂಕಿ ಕಿಡಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೂರು ಗಂಟೆಗಳಿಂದ ಬೆಂಕಿ ನಂದಿಸಲು ನಿರಂತರ ಪ್ರಯತ್ನ ಮಾಡುತ್ತಿದ್ದು, ಆದರೆ, ಬೆಂಕಿ ಮಾತ್ರ ಆರುತ್ತಿಲ್ಲ. ನಿರಂತರವಾಗಿ ಪಟಾಕಿ ಸಿಡಿಯುತ್ತಿದೆ. ಇದುವರೆಗೂ ಎಂಟು ಆಗ್ನಿಶಾಮಕ ವಾಹನದಿಂದ ಬೆಂಕಿ ನಂದಿಸಲು ಪ್ರಯತ್ನ ಮಾಡಲಾಗಿದೆ. ಅದೃಷ್ಟವಶಾತ್​ ಒಳಗಡೆ ಇದ್ದ ಸಿಲಿಂಡರ್ ತಂದಿದ್ದಕ್ಕೆ. ಯಾವುದೇ ಅವಘಡ ಸಂಭವಿಸಿಲ್ಲ. ಆಗ್ನಿಶಾಮಕ ದಳ ಸಿಬ್ಬಂದಿಯವರು ಹರಸಾಹಸ ಪಟ್ಟು ಬೆಂಕಿ ನಂದಿಸುವ ಕೆಲಸ ಮುಂದುವರೆಸಿದ್ದಾರೆ. ಈ ಘಟನೆ ಹಾವೇರಿ ಗ್ರಾಮಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಉಡುಪಿ: ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವದಲ್ಲಿ ಅವಘಡ, ಪಟಾಕಿ ರಾಶಿಗೆ ಬೆಂಕಿ ಹತ್ತಿ ವೃದ್ಧ ಸೇರಿ ನಾಲ್ವರಿಗೆ ಗಾಯ

ಪಟಾಕಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನಾಪತ್ತೆ

ಹಾವೇರಿ ಹೊರವಲಯದ ಪಟಾಕಿ ಗೋಡಾನ್ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಟಾಕಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನಾಪತ್ತೆಯಾದ ಬಗ್ಗೆ ಮಾಹಿತಿ ಬಂದಿದ್ದು, ಪೋನ್ ಸ್ವಿಚ್ ಅಪ್ ಆದ ಹಿನ್ನಲೆ ಆತಂಕ ಹೆಚ್ಚಾಗಿದೆ. ಬೆಂಕಿ ಬಿದ್ದ ತಕ್ಷಣ ಸ್ಥಳದಿಂದ ಓಡಿ ಹೋದರಾ? ಅಥವಾ ಒಳಗಡೆ ಇದ್ದರೆ ಎನ್ನುವ ಆತಂಕ ಎದುರಾಗಿದೆ. ದ್ಯಾಮಪ್ಪ ಓಲೇಕಾರ, ರಮೇಶ ಬಾರ್ಕಿ, ಶಿವಲಿಂಗ ಅಕ್ಕಿ ಕೆಲಸ ಮಾಡುತ್ತಿದ್ದ ಕಾರ್ಮಿಕರು. ಸತತ 4 ಗಂಟೆಯಿಂದ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಪಟಾಕಿ ಅವಘಡ ಸ್ಥಳಕ್ಕೆ ಹಾವೇರಿ ಜಿಲ್ಲಾಧಿಕಾರಿ ರಘುನಂದಮೂರ್ತಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ‌ಗೋಡಾನ್​ಗೆ ಪರವಾನಗೆ ನೀಡಿದ್ದಾರೆಯೇ ಎಂಬ ತನಿಖೆ ನಡೆಯುತ್ತಿದ್ದು, ಪರವಾನಗೆ ಇರದೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಘುನಂದಮೂರ್ತಿ ಹೇಳಿದರು. ಇನ್ನು ಅಗ್ನಿ ಅವಘಡ ವೇಳೆ ಓರ್ವ ಕಾರ್ಮಿಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ವಾಸಿಮ್ ಹರಿಹರ್(32) ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Tue, 29 August 23