ಹಾವೇರಿ, ಸೆ.29: ಇಂದು ಕರ್ನಾಟಕ ಬಂದ್ ಹಿನ್ನಲೆ ಊರಿಗೆ ತೆರುಳಲು ಬಸ್ ಗಾಗಿ ಕಾಯುತ್ತಿದ್ದ ಯುವತಿಯ ಮೊಬೈಲ್ ಕದ್ದು ಓಡುತ್ತಿದ್ದ ಕಳ್ಳನನ್ನು ಸ್ವತಃ ತಾನೇ ಬೆನ್ನತ್ತಿ ಹಿಡಿದ ಘಟನೆ ಹಾವೇರಿ(Haveri) ನಗರದ ಬಸ್ ನಿಲ್ದಾಣದಲ್ಲಿ ನಿನ್ನೆ(ಸೆ.28) ರಾತ್ರಿ ನಡೆದಿದೆ. ಇನ್ನು ಖದೀಮನನ್ನು ಯುವತಿ ಹಿಡಿಯುತ್ತಿದ್ದಂತೆ ಸಹಾಯಕ್ಕೆ ಬಂದ ಜನರು, ಆತನಿಗೆ ತಾನೊಂದು, ನೀನೊಂದು ಎಂಬಂತೆ ಧರ್ಮದೇಟು ಕೊಟ್ಟಿದ್ದಾರೆ. ಬಳಿಕ ಖದೀಮನ ಕತ್ತುಪಟ್ಟಿ ಹಿಡಿದು ಜನರು ಪೋಲಿಸರಿಗೆ ಒಪ್ಪಿಸಿದ್ದು, ಮೊಬೈಲ್ ಕದ್ದು ಸಿಕ್ಕಿಬಿದ್ದವನು ರಾಜು ಎಂದು ಗುರುತಿಸಲಾಗಿದೆ. ಆತನನ್ನು ಠಾಣೆಗೆ ಕರೆದೊಯ್ಯದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಯುವತಿಯ ಧೈರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕಾವೇರಿ ನೀರಿಗಾಗಿ ಇಂದು(ಸೆ.29) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈ ಮಧ್ಯೆ ಬೆಳ್ಳಂಬೆಳಗ್ಗೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಮುಖ್ಯರಸ್ತೆಯಲ್ಲಿ ಮುಂಜಾನೆ ಅತಿ ವೇಗದಿಂದ ಬಂದ ಥಾರ್ ಜೀಪ್ವೊಂದು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ಥಾರ್ ಕಾರು ಪಲ್ಟಿಯಾಗಿದ್ದು ಘಟನೆಯಲ್ಲಿ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:ವರುಣಾದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ: ಮಲಗಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಖದೀಮರು
ಮೈಸೂರು: ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆಯ ಮೇಲೆ ನಾಯಿಗಳು ದಾಳಿ ಮಾಡಿದ್ದು, ಗಾಯಗೊಂಡಿದ್ದ ಜಿಂಕೆಯನ್ನು ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಉಪ ಪೊಲೀಸ್ ಠಾಣೆಯ ಪೊಲೀಸರು ರಕ್ಷಣೆ ಮಾಡಿದ್ದಾರೆ. ಇನ್ನ ಬೀದಿ ನಾಯಿಗಳು ದಾಳಿಯಿಂದ ಜಿಂಕೆಯ ಕುತ್ತಿಗೆ ಭಾಗದಲ್ಲಿ ಗಾಯವಾಗಿದೆ. ನಾಯಿಗಳು ಜಿಂಕೆಯನ್ನ ಅಟ್ಟಾಡಿಸುತ್ತಿದ್ದನ್ನು ಕಂಡ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಉಪ ಪೊಲೀಸ್ ಠಾಣೆಯ ಪೊಲೀಸರು ತಕ್ಷಣ ಜಿಂಕೆಯ ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪಶು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ನಗರದ ಸಸ್ಯಕಾಶಿಯ ಅರಣ್ಯಕ್ಕೆ ಜಿಂಕೆಯನ್ನು ರವಾನೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ