ಹಾವೇರಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ವಿದ್ಯುತ್​ ತಂತಿ ತಗುಲಿ ತಾಯಿ-ಮಗಳು ಕೊನೆಯುಸಿರೆಳೆದಿದ್ದರು. ಇದಾದ ಮೇಲೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖೆಗಳಿಂದ ಮತ್ತೊಂದು ಅವಘಡ ನಡೆದಿದೆ. ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಹೆಸ್ಕಾಂ(Hescom) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ.

ಹಾವೇರಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕ ಬಲಿ
ಕಂಬದಲ್ಲಿಯೇ ನೇತಾಡುತ್ತಿರುವ ಶವ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 17, 2024 | 9:03 PM

ಹಾವೇರಿ, ಫೆ.17: ನಗರದ ಮಣಿಗಾರ ಓಣಿಯಲ್ಲಿ ಹೆಸ್ಕಾಂ(Hescom) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕನೋರ್ವ ಬಲಿಯಾದ ಘಟನೆ ನಡೆದಿದೆ. ಸುರೇಶ್ (38) ಮೃತ ದುರ್ದೈವಿ. ಮತ್ತೋರ್ವನಿಗೆ ಲೈನ್​ಮನ್ ನಿಂಗಪ್ಪನಿಗೆ ಗಂಭಿರ ಗಾಯವಾಗಿದ್ದು, ಹಾವೇರಿ(Haveri) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯುತ್ ಖಡಿತಗೊಳಿಸಿ ಇಬ್ಬರು ಯುವಕರು ಹೊಸ ಲೈನ್ ಎಳೆಯುವ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಸಿಬ್ಬಂದಿ ಏಕಾಏಕಿ ವಿದ್ಯುತ್ ಕನೆಕ್ಟ್ ಮಾಡಿದ್ದಾನೆ. ಇನ್ನು ಲೈನ್ ಮನ್ ಶವ ಕಂಬದಲ್ಲಿಯೇ ನೇತಾಡುತ್ತಿದೆ.

ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ ಸಚಿವ ಶಿವಾನಂದ ಪಾಟೀಲ್

ಇನ್ನು ಘಟನೆ ಹಿನ್ನಲೆ ಮೃತ ಲೈನ್​ಮೆನ್ ಸುರೇಶ್ ಕುಟುಂಬಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್  5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳು ನಿಂಗಪ್ಪ ಆರೋಗ್ಯ ವಿಚಾರಿಸಿದ ಸಚಿವ ಶಿವಾನಂದ ಪಾಟೀಲ್, ‘ಗಾಯಾಳು ನಿಂಗಪ್ಪಗೆ 1 ಲಕ್ಷ ರೂ. ಪರಿಹಾರ ಕೊಡುತ್ತೇವೆ. ಜೊತೆಗೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತದೆ. ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಗಾಯಾಳುವಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸ್ತೇವೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ. ಹೆಸ್ಕಾಂ ಎಂಡಿ ನೇತೃತ್ವದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಟ್ಯಾಕ್ಟರ್ ಚಾಲಕನ ನಿರ್ಲಕ್ಷ್ಯ; ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗದ ಹಳೆ ಮಂಡ್ಲಿ ಬಳಿ ಟ್ರ್ಯಾಕ್ಟರ್ ಹಾಗೂ ಬೈಕ್​ ನಡುವೆ​ ಅಪಘಾತವಾಗಿದ್ದು, ಬೈಕ್ ಸವಾರ ವಾಸೀಂ (22) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೇಗವಾಗಿ ಬಂದ ಟ್ರ್ಯಾಕ್ಟರ್ ಚಾಲಕ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್​ ಆಗಿದ್ದಾನೆ. ಮೃತ ಯುವಕ ಬೈಕ್​ನಲ್ಲಿ ಮನೆಯಿಂದ ಶಿವಮೊಗ್ಗಕ್ಕೆ ನಗರಕ್ಕೆ ಹೋಗುವ ಸಂದರ್ಭದಲ್ದಿ ಈ ದುರ್ಘಟನೆ ನಡೆದಿದೆ. ಇನ್ನು ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಟ್ರ್ಯಾಕ್ಟರ್ ಚಾಲಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವಿದ್ಯುತ್​ ತಂತಿ ತುಳಿದು ತಾಯಿ-ಮಗು ಸಾವು: ಜನರ ಕಣ್ಣಿಗೆ ಮಂಕು ಬೂದಿ ಎರಚಿತೆ ಬೆಸ್ಕಾಂ? ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಬಯಲು

ಮುಂಡವಿಲ್ಲದ ಅಪರಿಚಿತ ರುಂಡ ಪತ್ತೆ

ಬೆಂಗಳೂರು: ಆನೇಕಲ್ ತಾಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಪೋಡು ಬಳಿ ಕೊಳೆತ ಸ್ಥಿತಿಯಲ್ಲಿ ಮುಂಡವಿಲ್ಲದ ರುಂಡ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ರುಂಡವನ್ನ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಬನ್ನೇರುಘಟ್ಟ ಪೊಲೀಸರು ದೌಡಾಯಿಸಿದ್ದಾರೆ. ಸದ್ಯಕ್ಕೆ​​ ಪುರುಷ ಅಥವಾ ಮಹಿಳೆ ಎನ್ನುವ ಚಹರೆ ಪತ್ತೆಗಾಗಿ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಈ ಕುರಿತು ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 7:54 pm, Sat, 17 February 24