Haveri News: ಟಿಪ್ಪರ್​ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಟಿಪ್ಪರ್​ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ ನಡೆದಿದೆ.

Haveri News: ಟಿಪ್ಪರ್​ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಅಪಘಾತ
Follow us
ವಿವೇಕ ಬಿರಾದಾರ
|

Updated on:Jun 05, 2023 | 9:21 AM

ಹಾವೇರಿ: ರಾಣೆಬೆನ್ನೂರು (Ranebennur) ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ ಟಿಪ್ಪರ್​ ಹಾಗೂ ಕಾರು (Car) ಮುಖಾಮುಖಿ ಡಿಕ್ಕಿಯಾದ (Accident) ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ. ಮಾಲತೇಶ್​ ಕುಂದ್ರಳ್ಳಿ (21), ಮಾಲತೇಶ್​(24) ಮೃತ ದುರ್ದೈವಿಗಳು. ಘಟನೆಯಲ್ಲಿ ರಾಣೆಬೆನ್ನೂರಿನ ಲಲಿತಾ ಪಾಟೀಲ್​​, ನಾಗರಾಜ್ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಲಲಿತಾ ಪಾಟೀಲ್​​ ಅವರಿಗೆ ಗಂಭೀರ ಗಾಯಗಳಾದ ಹಿನ್ನೆಲೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅನುಮಾನಸ್ಪದವಾಗಿ ಯುವತಿಯ ಶವ ಕೆರೆಯಲ್ಲಿ ಪತ್ತೆ

ಮಂಡ್ಯ: ಮಂಡ್ಯ ತಾಲ್ಲೂಕಿನ ಬೂದನೂರು ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಅನುಮಾನಸ್ಪದವಾಗಿ ಯುವತಿಯ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ (22) ಮೃತ ಯುವತಿ.

ನಿನ್ನೆ (ಜೂ.04) ಮಧ್ಯಾಹ್ನ ಯುವಕನೊಬ್ಬನೊಂದಿಗೆ ಬೈಕ್​​ನಲ್ಲಿ ಬಂದ ಯುವತಿ ಕೆಲಕಾಲ ಕೆರೆಯ ಬಳಿ ಕುಳಿತುರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಯುವತಿ ತನ್ನ ಬ್ಯಾಗು, ಚಪ್ಪಲಿ ಕೆರೆ ದಡದ ಮೇಲಿರಿಸಿ‌ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಕೆರೆ ದಡದಲ್ಲಿದ್ದ ಬ್ಯಾಗನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಯುವತಿಯ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನೆ ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:13 am, Mon, 5 June 23

Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್