AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್​ ಇಸ್ಲಾಂ ಧರ್ಮಕ್ಕೆ ಸೇರಲು ಮುಂದಾಗಿದ್ರು: ಕಾಂಗ್ರೆಸ್ ಮುಖಂಡ ಖಾದ್ರಿ ಅಚ್ಚರಿ ಹೇಳಿಕೆ

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಯಲ್ಲಿ ಅಬ್ಬರದ ಭಾಷಣಕ್ಕೆ ತೆರೆ ಬಿದ್ದಿದೆ. ಆದರೆ, ಬಹಿರಂಗ ಪ್ರಚಾರಕ್ಕೆ ಕೊನೆದಿನವಾದ ಇಂದು ಎಲ್ಲಾ ಪಕ್ಷದ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ. ಇದರ ಮಧ್ಯ ಕಾಂಗ್ರೆಸ್​ ಮುಖಂಡರೊಬ್ಬರು ಡಾ. ಬಿಆರ್ ಅಂಬೇಡ್ಕರ್​ ಅವರ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮುಸ್ಲಿಂ ಧರ್ಮ ಸ್ವೀಕರಿಸಲು ಸಿದ್ದತೆ ಮಾಡಿಕೊಂಡಿದ್ದರು ಎಂದು ಮಾಜಿ ಶಾಸಕ ಹೇಳಿದ್ದಾರೆ.

ಅಂಬೇಡ್ಕರ್​ ಇಸ್ಲಾಂ ಧರ್ಮಕ್ಕೆ ಸೇರಲು ಮುಂದಾಗಿದ್ರು: ಕಾಂಗ್ರೆಸ್ ಮುಖಂಡ ಖಾದ್ರಿ ಅಚ್ಚರಿ ಹೇಳಿಕೆ
TV9 Web
| Edited By: |

Updated on: Nov 11, 2024 | 9:39 PM

Share

ಹಾವೇರಿ, (ನವೆಂಬರ್ 11): ಡಾ.ಅಂಬೇಡ್ಕರ್​ ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಭೌದ್ಧ ಧರ್ಮ ಸ್ವೀಕರಿಸಿದರೆಂದು ನಾನು ಓದಿದ್ದೆ. ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸದಿದ್ರೆ ದಲಿತರು ಮುಸ್ಲಿಂ ಆಗುತ್ತಿದ್ದರು. ಎಂದು ಕಾಂಗ್ರೆಸ್ ಮುಖಂಡ ಸಯ್ಯದ್ ಅಜ್ಜಂಪೀರ ಖಾದ್ರಿ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿಂದು ಆದಿಜಾಂಬವ ಸಮಾಜದ ಸಮಾವೇಶದಲ್ಲಿ ಮಾತನಾಡುವ ವೇಳೆ ಈ ಮಾತನ್ನು ಹೇಳಿದ್ದು, ಇದು ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಶಿಗ್ಗಾಂವಿಯಲ್ಲಿಂದು ನಡೆದ ಆದಿಜಾಂಬವ ಸಮಾಜದ ಸಮಾವೇಶದಲ್ಲಿ ಮಾತನಾಡಿದ ಖಾದ್ರಿ, ಅಂಬೇಡ್ಕರ್ ಮುಸ್ಲೀಂ ಧರ್ಮ ಸ್ವೀಕರಿಸಲು ಎಲ್ಲ ಸಿದ್ದತೆ ಆಗಿತ್ತು. ಆದರೆ ಕೊನೆ ಕ್ಷಣದಲ್ಲಿ ಬೌದ್ದ ಧರ್ಮ ಸ್ವೀಕರಿಸಿದರು ಎಂದು ನಾನು ಓದಿದ್ದೇನೆ ತಿಳಿದುಕೊಂಡಿದ್ದೇನೆ. ಆದ್ರೆ, ಕೊನೆ ಕ್ಷಣದಲ್ಲಿ ಅಂಬೇಡ್ಕರ್ ಬೌದ್ದ ಧರ್ಮ ಸ್ವೀಕರಿಸಿದರು. ಒಂದು ವೇಳೆ ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸದಿದ್ರೆ ದಲಿತರು ಮುಸ್ಲಿಂ ಆಗುತ್ತಿದ್ದರು. ಆರ್​.ಬಿ.ತಿಮ್ಮಾಪುರ ಹೋಗಿ ರಹೀಮ್ ಖಾನ್ ಆಗುತ್ತಿದ್ದರು. ಡಾ.ಜಿ.ಪರಮೇಶ್ವರ್​ ಹೋಗಿ ಪೀರ್​ ಸಾಹೇಬ್ ಆಗುತ್ತಿದ್ರು. ಎಲ್​​.ಹನುಮಂತಪ್ಪ ಹೋಗಿ ಹಸನ್ ಸಾಬ್ ಆಗುತ್ತಿದ್ದರು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಿದ್ದರೆ ಎಲ್ ಹನುಮಂತಯ್ಯ ಹೋಗಿ ಹಸನ್ ಸಾಬ್ ಆಗುತ್ತಿದ್ದರು. ಮಂಜುನಾಥ್ ತಿಮ್ಮಾಪುರ್ ಹೋಗಿ ಬಾಬೂಸಾಬ್ ಆಗುತ್ತಿದ್ದರು. ಆದರೆ ಈಗಲೂ ಎಲ್ಲೆಲ್ಲಿ ದಲಿತ ಕೇರಿ ಇದೆಯೋ ಅಲ್ಲೆಲ್ಲ ಪಕ್ಕದಲ್ಲೇ ಮುಸ್ಲಿಂ ದರ್ಗಾ ಇದೆ. ದಲಿತರಿಗೂ ಮುಸ್ಲಿಮರಿಗೂ ಇರುವ ಬಾಂಧವ್ಯ ಹಾಗೆ ಇದೆ ಎಂದರು.

ಅಂಬೇಡ್ಕರ್ ಬಗ್ಗೆ ಖಾದ್ರಿ ಅವರು ನೀಡುವ ಈ ಹೇಳಿಕೆ ಅಚ್ಚರಿಗೆ ಕಾರಣವಾಗಿದ್ದು, ಇದು ಮುಂದೆ ಯಾವ ರೀತಿಯಾಗಿ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್