ಶುಲ್ಕ ಬಾಕಿ ಆರೋಪ: ವಿದ್ಯಾರ್ಥಿನಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಲ್ ಟಿಕೆಟ್ ನಿರಾಕರಿಸಿದ ಕಾಲೇಜು

Updated on: Feb 28, 2026 | 2:04 PM

ಹಾವೇರಿಯ ರಾಣೆಬೆನ್ನೂರಿನ ಬಿಎಜಿಎಸ್ಎಸ್ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿದೆ. 30 ಸಾವಿರ ರೂಪಾಯಿ ಶುಲ್ಕ ಬಾಕಿ ಇರುವ ಕಾರಣ ಕಾಲೇಜು ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದ್ದು, ಇದರಿಂದ ವಿದ್ಯಾರ್ಥಿನಿಯ ಭವಿಷ್ಯವು ಅತಂತ್ರವಾಗಿರುವ ಆರೋಪ ಕೇಳಿಬಂದಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಹಾವೇರಿ, ಫೆಬ್ರವರಿ 28: ಶುಲ್ಕ ಬಾಕಿ ಇರುವ ಕಾರಣ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಬಿಎಜಿಎಸ್ಎಸ್ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿರುವ ಆರೋಪ ಕೇಳಿಬಂದಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಸಾರಾ, 30 ಸಾವಿರ ರೂಪಾಯಿ ಶುಲ್ಕ ಬಾಕಿ ಉಳಿಸಿಕೊಂಡಿದ್ದಾರೆ. ಶುಲ್ಕ ಪಾವತಿಸಿದರೆ ಮಾತ್ರ ಹಾಲ್ ಟಿಕೆಟ್ ನೀಡುವುದಾಗಿ ಕಾಲೇಜು ಆಡಳಿತ ಮಂಡಳಿ ಹೇಳಿದೆ. ಈ ನಿರ್ಧಾರದಿಂದ ವಿದ್ಯಾರ್ಥಿನಿಯ ಭವಿಷ್ಯ ಅತಂತ್ರಗೊಂಡಿದ್ದು, ಒಂದು ವರ್ಷ ನಷ್ಟವಾಗುವ ಭೀತಿ ಎದುರಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 28, 2026 02:03 PM
Loading...
Unable to load recommendations.
Follow Us