ಬೊಮ್ಮಾಯಿರಿಂದ 2 ದಿನ ಹಾವೇರಿ, ಹುಬ್ಬಳ್ಳಿ ಪ್ರವಾಸ; ನೂತನ ಕಟ್ಟಡ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಸಿಎಂ

| Updated By: sandhya thejappa

Updated on: Sep 01, 2021 | 9:59 AM

ಸಿಎಂ ಬೊಮ್ಮಾಯಿ ಬೆಳಗ್ಗೆ 11.30ಕ್ಕೆ ರಾಜೀವ ಗ್ರಾಮದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾರೆ. ಮಧ್ಯಾಹ್ನ 12 ಗಂಟೆಗೆ ಬಾಡ ಗ್ರಾಮದಲ್ಲಿ ಕಟ್ಟಡ ಉದ್ಘಾಟನೆ ಮಾಡುತ್ತಾರೆ.

ಬೊಮ್ಮಾಯಿರಿಂದ 2 ದಿನ ಹಾವೇರಿ, ಹುಬ್ಬಳ್ಳಿ ಪ್ರವಾಸ; ನೂತನ ಕಟ್ಟಡ ಉದ್ಘಾಟನೆ, ವಿವಿಧ ಅಭಿವೃದ್ಧಿ  ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಸಿಎಂ
ಬಸವರಾಜ ಬೊಮ್ಮಾಯಿ
Follow us on

ಹಾವೇರಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಸೆಪ್ಟೆಂಬರ್ 1) ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಾರೆ. ಬೆಳಗ್ಗೆ 10 ಗಂಟೆಗೆ ತಡಸ ಗ್ರಾಮಕ್ಕೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ರಸ್ತೆ ಕಾಮಗಾರಿ, ನೂತನ ಪ್ರವಾಸಿ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಬಳಿಕ 39 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.

ಸಿಎಂ ಬೊಮ್ಮಾಯಿ ಬೆಳಗ್ಗೆ 11.30ಕ್ಕೆ ರಾಜೀವ ಗ್ರಾಮದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾರೆ. ಮಧ್ಯಾಹ್ನ 12 ಗಂಟೆಗೆ ಬಾಡ ಗ್ರಾಮದಲ್ಲಿ ಕಟ್ಟಡ ಉದ್ಘಾಟನೆ ಮಾಡುತ್ತಾರೆ. ಅಟಲ್ ಬಿಹಾರಿ ವಾಜಪೇಯಿ ವಸತಿ ಕಟ್ಟಡದ ಉದ್ಘಾಟನೆ ಮಾಡಲಿರುವ ಅವರು, ಮಧ್ಯಾಹ್ನ 1ಕ್ಕೆ ಬಂಕಾಪುರದಲ್ಲಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುತ್ತಾರೆ.

ಕಾರವಾರ-ಇಳಕಲ್ ರಸ್ತೆ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಮಾಡುತ್ತಾರೆ. ಬಳಿಕ ಶಾದಿ ಮಹಲ್ ಕಟ್ಟಡದ ಉದ್ಘಾಟನೆ ಮಾಡಲಿರುವ ಬಸವರಾಜ ಬೊಮ್ಮಾಯಿ, ಮಧ್ಯಾಹ್ನ 3ಕ್ಕೆ ದೊಡ್ಡಹುಣಸೆ ಕಲ್ಮಠದಲ್ಲಿ ಕೆಸಿಸಿ ಬ್ಯಾಂಕ್ ಕಟ್ಟಡ ಮತ್ತು ಚನ್ನಬಸವೇಶ್ವರ ಮಂಗಲ ಭವನವನ್ನು ಉದ್ಘಾಟಿಸುತ್ತಾರೆ. ಸಂಜೆ 4.30ಕ್ಕೆ ಶಿಗ್ಗಾಂವಿ ಪಟ್ಟಣದಲ್ಲಿ ನೂತನ ಪ್ರವಾಸಿ ಮಂದಿರ, ಸಿಪಿಐ, ಡಿವೈಎಸ್ಪಿ ಕಚೇರಿಯ ನೂತನ ಕಟ್ಟಡದ ಶಂಕುಸ್ಥಾಪನೆ, ಪುರಸಭೆಯ ನೂತನ ಕಟ್ಟಡ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಸಂಜೆ 6.30ಕ್ಕೆ ಶಿಗ್ಗಾಂವಿ ಪಟ್ಟಣದಿಂದ ಹುಬ್ಬಳ್ಳಿಯತ್ತ ರಸ್ತೆ ಮೂಲಕ ಪ್ರಯಾಣ ಬೆಳೆಸಲಿರುವ ಸಿಎಂ, 7.30ಕ್ಕೆ ಹುಬ್ಬಳ್ಳಿಗೆ ತಲುಪುತ್ತಾರೆ. ರಾತ್ರಿ 8 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ಸ್ ಹೊಟೇಲ್ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಪುತ್ರಿಯ ವಿವಾಹ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ, ಇವತ್ತು ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ದೇಶ ವಿರೋಧಿ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ ನಿಗಾ ಇಟ್ಟಿದೆ. ಈಗಾಗಲೇ ಎನ್‌ಐಎ ಕೆಲವರ ಹೆಸರು ಪಟ್ಟಿ ಮಾಡಿದೆ. ಎನ್‌ಐಎ ಜತೆ ನಮ್ಮ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ನಾಯಕರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಕೇಂದ್ರ ನಾಯಕರ ಜತೆ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಅಂತ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ನಾಳೆ ದಾವಣಗೆರೆಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ
ಕೇಂದ್ರ ಸಚಿವ ಅಮಿತ್ ಶಾ ನಾಳೆ ದಾವಣಗೆರೆಗೆ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ 5 ಕಡೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಮಧ್ಯಾಹ್ನ 2.50ಕ್ಕೆ ಜಿಎಂಐಟಿ ಹೆಲಿಪ್ಯಾಡ್‌ಗೆ ಆಗಮಸುತ್ತದೆ. 3.05ಕ್ಕೆ ಗಾಂಧಿ ಭವನ ಉದ್ಘಾಟನೆ ಮಾಡಲಿರುವ ಅಮಿತ್ ಶಾ, 3.25ಕ್ಕೆ ಸ್ಕೌಟ್ಸ್ ಅಂಡ್ ಗೈಡ್ಸ್ ಆವರಣದಲ್ಲಿರುವ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವಾರ್ಪಣೆ ಮಾಡಲಿದ್ದಾರೆ. ನಂತರ 4.35ಕ್ಕೆ ಜಿಎಂಐಟಿ ಕಾಲೇಜು ಅವರಣದಲ್ಲಿ ನಿರ್ಮಾಣವಾದ ಜಿಎಂಐಟಿ ಕೇಂದ್ರ‌‌ ಗ್ರಂಥಾಲಯವನ್ನು7 ಉದ್ಘಾಟಿಸಿ, ಸಂಜೆ 5 ಗಂಟೆಗೆ ಜಿಎಂಐಟಿ ಹೆಲಿಪ್ಯಾಡ್​ನಿಂದ ಹುಬ್ಬಳಿಗೆ ಪ್ರಯಾಣ ಬೆಳೆಸುತ್ತಾರೆ.

ಇದನ್ನೂ ಓದಿ

ಈ 5 ರಾಶಿಯ ಜನ ಪ್ರಾಮಾಣಿಕರು ಮತ್ತು ಅತ್ಯಂತ ವಿಶ್ವಾಸಾರ್ಹರು; ಹಾಗಾದರೆ ನಿಮ್ಮ ರಾಶಿ ಯಾವುದು?

ಹೆಲಿಕಾಪ್ಟರನ್ನು ಜೀಪಿಗೆ ಟೋ ಮಾಡಿಕೊಂಡು ಬೇರೆ ಸ್ಥಳಕ್ಕೆ ಸಾಗಿಸಿದ ತಾಲಿಬಾನಿಗಳು ಯುದ್ದ ವಿಮಾನಗಳನ್ನೂ ಏನು ಮಾಡುತ್ತಾರೋ?

(Basavaraja Bommai tours Haveri and Hubli for 2 days and CM drives for various development work)

Published On - 8:44 am, Wed, 1 September 21