Karnataka Byelection: ಹಾನಗಲ್ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ

Shivaraj Sajjanar: ಹಾನಗಲ್ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಈ ಹಿಂದೆ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದ ಶಿವರಾಜ್ ಸಜ್ಜನರ್ ಹಾನಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

Karnataka Byelection: ಹಾನಗಲ್ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ
ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್

ಹಾವೇರಿ: ಹಾನಗಲ್ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಘೋಷಿಸಿದೆ. ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶಿವರಾಜ್ ಸಜ್ಜನರ್ ಅವರನ್ನು  ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವರಾಜ್ ಅವರು 1 ಬಾರಿ ಶಾಸಕರಾಗಿದ್ದರು ಹಾಗೂ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಹಾಗೂ ಉದಾಸಿ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಆದರೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಸಿ.ಎಂ.ಉದಾಸಿ ಕುಟುಂಬಕ್ಕೆ ಟಿಕೆಟ್ ಮಿಸ್ ಆಗಿದೆ. ಸಿ.ಎಂ.ಉದಾಸಿ ಅವರ ನಿಧನದಿಂದ ಹಾನಗಲ್ ಕ್ಷೇತ್ರ ತೆರವಾಗಿತ್ತು.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಇಂದು ನಾಮಪತ್ರ ಸಲ್ಲಿಕೆ:
ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.

ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಇಂದು ನಾಮಪತ್ರ ಸಲ್ಲಿಕೆ:
ಹಾನಗಲ್ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ 11ಕ್ಕೆ ತಹಶೀಲ್ದಾರ್ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ನಿಖಿಲ್, ಎನ್.ಎಚ್. ಕೋನರೆಡ್ಡಿ ಉಪಸ್ಥಿತರಿರಲಿದ್ದಾರೆ. ಲೋಕಶಕ್ತಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಶಿವಕುಮಾರ ತಳವಾರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಅಶೋಕ ಹಣಜಿ ಈಗಾಗಲೇ ನಾಮಪತ್ರವನ್ನು ಚುನಾವಣಾಧಿಕಾರಿ ಅನ್ನಪೂರ್ಣ ಮುದುಕಮ್ಮನವರಿಗೆ ಸಲ್ಲಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸಿ.ಎಂ. ಉದಾಸಿ 2021ರ ಜೂನ್ 8ರಂದು ನಿಧನರಾಗಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ. ಹಾಗೇ, ಈ ಹಿಂದೆ ಎರಡು ಬಾರಿ ಸಿಂಧಗಿ ಕ್ಷೇತ್ರದ ಶಾಸಕರಾಗಿದ್ದ ಜೆಡಿಎಸ್​ನ ಎಂ.ಸಿ. ಮನಗೂಳಿ ಜನವರಿ 28 ರಂದು ಮೃತಪಟ್ಟಿದ್ದರು. ಇದೀಗ ಅವರ ನಿಧನದಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು,  ನವೆಂಬರ್ 2ರಂದು ಎರಡೂ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ:

Karnataka Bypolls 2021: ಹಾನಗಲ್ ಉಪಚುನಾವಣೆ: ಮೂರೂ ಪಕ್ಷಗಳಲ್ಲಿ ಸಿದ್ಧತೆ ಚುರುಕು, ತ್ರಿಕೋನ ಸ್ಪರ್ಧೆ ನಿರೀಕ್ಷಿತ

Karnataka Byelection: ಸಿಂದಗಿ, ಹಾನಗಲ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

Read Full Article

Click on your DTH Provider to Add TV9 Kannada