ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ಯಾಸೀರ್ ಪಠಾಣ್​ಗೆ ಶಾಕ್ ಕೊಟ್ಟ ಬಿಜೆಪಿ

ತೀವ್ರ ಕುತೂಹಲ ಮೂಡಿಸಿರುವ ಶೀಗ್ಗಾಂವಿ ವಿಧಾನಸಭಾ ಉಪಚುನಾವಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ನಾಳೆ(ನವೆಂಬರ್ 13) ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದೆ. ಆದ್ರೆ, ಮತದಾನ ಆರಂಭಕ್ಕೂ ಮುನ್ನ ಕಾಂಗ್ರೆಸ್​ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್​ಗೆ ಬಿಜೆಪಿ ಬಿಗ್ ಶಾಕ್ ಕೊಟ್ಟಿದೆ.

ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ಯಾಸೀರ್ ಪಠಾಣ್​ಗೆ ಶಾಕ್ ಕೊಟ್ಟ ಬಿಜೆಪಿ
ಯಾಸೀರ್ ಖಾನ್ ಪಠಾಣ್ ವಿರುದ್ದ ಬಿಜೆಪಿ ದೂರು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 12, 2024 | 9:26 PM

ಹಾವೇರಿ, (ನವೆಂಬರ್ 12): ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಾಳೆ(ನವೆಂಬರ್ 13) ಉಪಚುನಾವಣೆ ನಡೆಯಲಿದೆ. ಆದರೆ ಮತದಾನಕ್ಕೂ ಮುನ್ನವೇ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಹೌದು….ಕೈ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ರೌಡಿ ಶೀಟ್​ ಪ್ರಕರಣ ಇದೆ. ಆದ್ರೆ, ಅವರು ನಾಮಪತ್ರದ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಹೀಗಾಗಿ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಚುನಾವಣಾ ಏಜೆಂಟ್ ಎಸ್ ಕೆ ಅಕ್ಕಿ ಅವರು ಇ – ಮೇಲ್ ಮೂಲಕ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ.

ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿ ಶೀಟರ್ ಸ್ಟೇಟಸ್ ಇದೆ ಎಂದು ಹಾವೇರಿ ಎಸ್ ಪಿ ಹೇಳಿಕೆ ನೀಡಿದ್ದಾರೆ. ಆದ್ರೆ, ಪಠಾಣ್ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಕಳೆದ ಚುನಾವಣೆ ವೇಳೆ ಅವರ ಮೇಲೆ ಹಲವು ಕೇಸ್ ಇದ್ದವು. ಆದರೆ ಆಶ್ಚರ್ಯ ಅಂದರೆ ಉಪ ಚುನಾವಣೆಗೆ ಸಲ್ಲಿಸಿರುವ ಅಪಡವಿಟ್ ನಲ್ಲಿ ಕೇಸ್ ಗಳು ಇಲ್ಲ ಎಂದಿದ್ದಾರೆ. ಹೀಗಾಗಿ ಈ ಬಗ್ಗೆ ವಿಸ್ತೃತ ತನಿಖೆ ಆಗಲಿ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ: ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ವಿರುದ್ಧ ಗಂಭೀರ ಆರೋಪ: ಬಿಜೆಪಿಯಿಂದ ಕಾನೂನು ಹೋರಾಟ

ಯಾಸೀರ್ ಖಾನ್ ಪಠಾಣ್ 2023 ರ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ್ದ ಅಫಡವಿಟ್, ಈ ಬಾರಿ ಶಿಗ್ಗಾವಿ ಉಪಚುನಾವಣೆಗೆ ಕೈ ಅಭ್ಯರ್ಥಿಯಾಗಿ ಪಠಾಣ್​ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ್ದ ಅಫಿಡೆವಿಟ್ ಹಾಗೂ ಹಾವೇರಿ ಎಸ್ ಪಿ ಅಂಶುಕುಮಾರ್ ಸುದ್ದಿಗೋಷ್ಟಿಯಲ್ಲಿ ಪಠಾಣ್ ಮೇಲೆ ರೌಡಿ ಶೀಟರ್ ಇನ್ನೂ ಇದೆ ಎಂಬ ಹೇಳಿಕೆಯ ವಿಡಿಯೋ ಕ್ಲಿಪ್ಪಿಂಗ್ಸ್ ನೊಂದಿಗೆ ದೂರು ನೀಡಿದ್ದಾರೆ.

ಗೊಂದಲ ಮೂಡಿಸಿದ ಎಸ್ಪಿ ಹೇಳಿಕೆ

ಇನ್ನು ಪಠಾಣ್ ವಿರುದ್ಧ ರೌಡಿಶೀಟ್ ಕೇಸ್ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಪ ಮಾಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದರು. ಬಳಿಕ ಹಾವೇರಿ ಎಸ್ಪಿ ಅಂಶುಕುಮಾರ್ ಅವರು ಪಠಾಣ್ ಮೇಲೆ ರೌಡಿ ಶೀಟರ್  ಎನ್ನುವ ಹೇಳಿಕೆ ನೀಡಿದ್ದರು. ಇದಾದ ಬಳಿಕ ಕ್ಷೇತ್ರದಲ್ಲಿ ರೌಡಿಶೀಟ್ ಪ್ರಕರಣ ಭಾರೀ ಸದ್ದು ಮಾಡಲಾರಂಭಿಸಿತ್ತು.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

ಬಳಿಕ ಅದೇನಾಯ್ತೋ ಏನೋ ಏಕಾಏಕಿ ಅದೇ ಹಾವೇರಿ ಎಸ್ಪಿ, ಪಠಾಣ್ ವಿರುದ್ಧ ಯಾವುದೇ ರೌಡಿಶೀಟ್ ಪ್ರಕರಣ ಇಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು. ಹೀಗಾಗಿ ಎಸ್ಪಿ ಅವರ ಎರಡು ಹೇಳಿಕೆಗಳು ಭಾರೀ ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದ್ದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಬಿಜೆಪಿ ಆಗ್ರಹಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ