ಶೀಘ್ರವೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ: ಸಿಎಂ ಬೊಮ್ಮಾಯಿ ಘೋಷಣೆ
ಶೀಘ್ರದಲ್ಲೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಹಾವೇರಿ: ಶೀಘ್ರದಲ್ಲೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಣೆ ಮಾಡಿದ್ದಾರೆ. ಇಂದು (ನ. 8) ಬ್ಯಾಡಗಿಯಲ್ಲಿ ನಡೆದ ಪಕ್ಷದ ಜನಸಂಕಲ್ಪ (Jan Sankalp yatra) ಸಮಾವೇಶದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರತಿ ಮನೆಗೆ ಕುಡಿಯುವ ನೀರು ಪೂರೈಸುವ ಕೆಲಸ ಮಾಡುತ್ತಿದ್ದೇವೆ. ಯಾವುದೇ ಸರ್ಕಾರ ಇಂತಹ ಕೆಲಸ ಮಾಡಲು ಸಿದ್ಧವಿರಲಿಲ್ಲ. ಶುದ್ಧ ಕುಡಿಯುವ ನೀರು ಕೊಡುವ ತಾಕತ್ ಕಾಂಗ್ರೆಸ್ಗೆ ಇರಲಿಲ್ಲ. ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರ ಖಾತೆ ಹಣ ಹಾಕಲಾಗುತ್ತಿದೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಿದ್ದೇವೆ ಎಂದು ತಮ್ಮ ಯೋಜನೆಗಳ ಕುರಿತು ತಿಳಿಸಿದರು.
ಮುಂದುವರೆದು ಕುರಿಗಾಹಿಗಳಿಗೆ ಸಹಾಯ ಮಾಡುವ ಕೆಲಸ ಮಾಡುತ್ತಿದ್ದೇವೆ. SC, ST ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತೇವೆ. 2023ಕ್ಕೆ ಮತ್ತೊಮ್ಮೆ ಬಿಜೆಪಿಯ ಕಮಲ ಅರಳಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.
ಜನಸಂಕಲ್ಪ ಯಾತ್ರೆಯಲ್ಲೇ ಟಿಕೆಟ್ಗೆ ಬೇಡಿಕೆ ಇಟ್ಟ ಸುರೇಶಗೌಡ ಪಾಟೀಲ
ಮುಂದಿನ ಚುನಾವಣೆಗೆ ನಾನೂ ಆಕಾಂಕ್ಷಿಯಾಗಿದ್ದೇನೆ ಟಿಕೆಟ್ ನೀಡಿದ್ದೇ ಆದರೆ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವೆ ಎಂದು ಜನಸಂಕಲ್ಪ ಯಾತ್ರೆಯಲ್ಲೇ ಮಾಜಿ ಶಾಸಕ ಸುರೇಶಗೌಡ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮುಂದೆ ಟಿಕೆಟ್ಗೆ ಬೇಡಿಕೆ ಇಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:08 pm, Tue, 8 November 22