ಹಾವೇರಿ: ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿ

ತನ್ನ ಅಣ್ಣನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮೈದುನ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿ
ಅತ್ತಿಗೆ ಮತ್ತು ಅವರ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಆರೋಪಿ ಮೈದುನ ಕುಮಾರಗೌಡ್
Edited By:

Updated on: Nov 04, 2023 | 7:54 AM

ಹಾವೇರಿ, ಅ.4: ತನ್ನ ಅಣ್ಣನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮೈದುನ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಹಾವೇರಿ (Haveri) ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೀತಾ ಮರಿಗೌಡ (32) ಮತ್ತು ಇವರ ಮಕ್ಕಳಾದ ಅಕುಲ್ (10), ಅಂಕಿತಾ (7) ಕೊಲೆಯಾದ ದುರ್ದೈವಿಗಳು. ಕುಮಾರಗೌಡ್ (35) ಮೂವರನ್ನು ಕೊಲೆ ಮಾಡಿ ಪರಾರಿಯಾಗಿರುವ ಮೈದುನ.

ಇದನ್ನೂ ಓದಿ: ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ: ಪತಿಯೇ ಕೊಲೆಗೈದಿರುವ ಶಂಕೆ

ಮೃತ ಗೀತಾಳ ಪತಿ ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಟುಂಬದಲ್ಲಿನ ಜಗಳವೇ ಕೊಲೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದ್ದು, ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಾನಗಲ್ ಠಾಣಾ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ