Breaking: ನವೆಂಬರ್ ಒಳಗೆ ಕರ್ನಾಟಕದ ಎಲ್ಲರಿಗೂ ಮೊದಲ ಡೋಸ್ ಕೊರೊನಾ ಲಸಿಕೆ ವಿತರಣೆ: ಹಾವೇರಿಯಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ

ರಾಜ್ಯದ ಎಲ್ಲ ಸಾರ್ವಜನಿಕ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ತಾಲೂಕಿನ ಜಂಗಮನಕೊಪ್ಪ ಗ್ರಾಮದಲ್ಲಿ ಮೆಗಾ ಡೈರಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ತಿಳಿಸಿದರು.

Breaking: ನವೆಂಬರ್ ಒಳಗೆ ಕರ್ನಾಟಕದ ಎಲ್ಲರಿಗೂ ಮೊದಲ ಡೋಸ್ ಕೊರೊನಾ ಲಸಿಕೆ ವಿತರಣೆ: ಹಾವೇರಿಯಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: guruganesh bhat

Updated on:Aug 28, 2021 | 4:57 PM

ಹಾವೇರಿ:  ಹೆಚ್ಚೂ ಅಂದರೆ ನವೆಂಬರ್ ತಿಂಗಳ ಒಳಗಡೆ ಕರ್ನಾಟಕದ ಎಲ್ಲರಿಗೂ ಕೊವಿಡ್ ಮೊದಲ ಡೋಸ್ (Covid Vaccine) ನೀಡಿ ಮುಗಿಸಲಾಗುವುದು. ಸುಮಾರು ಶೇಕಡಾ 60ರಷ್ಟು ಜನರಿಗೆ 2ನೇ ಡೋಸ್ ಲಸಿಕೆಯನ್ನೂ ವಿತರಿಸಲಾಗುವುದು. ಅಲ್ಲದೇ ರಾಜ್ಯದ ಎಲ್ಲ ಸಾರ್ವಜನಿಕ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹಾವೇರಿ ತಾಲೂಕಿನ ಜಂಗಮನಕೊಪ್ಪ ಗ್ರಾಮದಲ್ಲಿ ಮೆಗಾ ಡೈರಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ತಿಳಿಸಿದರು.

ರೈತರ ಮಕ್ಕಳ ಶಿಕ್ಷಣದ ಸಮಸ್ಯೆಗಳ ಬಗ್ಗೆ ನಾನು ತಿಳಿದಿದ್ದೇನೆ. ರೈತರ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ್ದನ್ನು ಗಮನಿಸಿಯೇ ರೈತರ ಮಕ್ಕಳಿಗೆ ಶಿಷ್ಯವೇತನ ಯೋಜನೆ ಜಾರಿ ಮಾಡಿದ್ದೇವೆ. ಈ ಯೋಜನೆ ಜಾರಿ ಮಾಡಿರುವ ಮೊದಲ ರಾಜ್ಯ ನಮ್ಮದಾಗಿದ್ದು, ನನ್ನ ಆಡಳಿತದ ಅವಧಿಯಲ್ಲಿ ಮೊದಲ ಆದ್ಯತೆಯನ್ನು ರಾಜ್ಯದ ರೈತರಿಗೆ ಮತ್ತು ಬಡವರಿಗೆ ನೀಡುತ್ತೇವೆ ಎಂದು ಅವರು ತಿಳಿಸಿದರು. ಮೇಕೆದಾಟು ಯೋಜನೆ ಜಾರಿಯ ಕುರಿತೂ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜ್ಯಕ್ಕೆ ಹಿನ್ನೆಡೆಯಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಾವೇರಿಗೆ ಹೊಂದಿಕೊಂಡಂತೆ 1 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್​ಶಿಪ್ ನಿರ್ಮಿಸಲು ಕ್ರಮ‌ ಕೈಗೊಳ್ಳುತ್ತೇವೆ. ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಲು ಈಗಾಗಲೇ ಕೇಂದ್ರ ಹಣಕಾಸು ಸಚಿವರ ಜತೆ ಚರ್ಚಿಸಿದ್ದೇನೆ. ಹಾವೇರಿ ಜಿಲ್ಲೆ ಸೇರಿದಂತೆ ಮುಂಬರುವ ದಿನಗಳಲ್ಲಿ 5-6 ಜಿಲ್ಲೆಗಳಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು. ಗಡಿ ಭಾಗದ ಕನ್ನಡಿಗರಿಗೆ ಎಲ್ಲ ಅನುಕೂಲ ಮಾಡುತ್ತೇವೆ. ಗಡಿಯಲ್ಲಿನ ಕನ್ನಡಿಗರನ್ನು ಸಂಪೂರ್ಣ ರಕ್ಷಣೆ ಮಾಡುತ್ತೇವೆ ಎಂದು ಸಹ ಅವರು ಅಭಯ ನೀಡಿದರು.

ತವರು ಜಿಲ್ಲೆ ಹಾವೇರಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅವರನ್ನೇ ಹೋಲುವ ಗಂಧದಲ್ಲಿ ರಚಿಸಿದ ಮೂರ್ತಿಯನ್ನು ಉಡುಗೊರೆಯನ್ನಾಗಿ ನೀಡಲಾಗಿದೆ. 18 ಕೆಜಿ ತೂಕದ ಮೂರ್ತಿ ಸಾಕ್ಷಾತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಹೋಲುತ್ತದೆ. ರಾಣೆಬೆನ್ನೂರು ನಗರ ಸಭೆಯ ವತಿಯಿಂದ ಈ ಉಡುಗೊರೆ ನೀಡಲಾಗಿದ್ದು, ಮೂರ್ತಿ ತಯಾರಿಗೆ ಸುಮಾರು 2 ಲಕ್ಷ ವೆಚ್ಚ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಂಧಧ ಮೂರ್ತಿಯ ಹಿಂಭಾಗದಲ್ಲಿ ಕರ್ನಾಟಕ ಭೂಪಟವನ್ನು ಚಿತ್ರಿಸಲಾಗಿದೆ.

ರಾಣೆಬೆನ್ನೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದ ವೇಳೆ ಅರ್ಪಿಸಿದ ಶಾಸಕ ಅರುಣಕುಮಾರ ಪೂಜಾರ ಹಾಗೂ ನಗರಸಭೆ ಅಧಿಕಾರಿಗಳು ಗಂಧದ ಮೂರ್ತಿಯನ್ನು ಬಸವರಾಜ ಬೊಮ್ಮಾಯಿ ಅವರಿಗೆ ಅರ್ಪಿಸಿದ್ದಾರೆ.  121 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ಶಿವಕುಮಾರ ಉದಾಸಿ, ಸಚಿವರಾದ ಬಿ.ಸಿ.ಪಾಟೀಲ್, ಗೋವಿಂದ ಕಾರಜೋಳ ಹಾಗೂ ಭೈರತಿ ಬಸವರಾಜ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಾಥ್ ನೀಡಿದರು.

ಇದನ್ನೂ ಓದಿ: 

ಸಿಎಂ ಬೊಮ್ಮಾಯಿಗೆ ಅವರನ್ನೇ ಹೋಲುವ ಗಂಧದ ಮೂರ್ತಿ ಉಡುಗೊರೆ; ಅಂದಾಜು 2 ಲಕ್ಷ ಮೌಲ್ಯದ ಕೊಡುಗೆ ನೀಡಿದ ರಾಣೆಬೆನ್ನೂರು ಪಾಲಿಕೆ

ಹಾವೇರಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ತನಿಖೆಗೆ ಎಬಿವಿಪಿ ಒತ್ತಾಯ

(CM Basavaraj Bommai announce will distribute 1st dose covid vaccine by November)

Published On - 4:43 pm, Sat, 28 August 21

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ