ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿ: ಸಿಎಂ ಬೊಮ್ಮಾಯಿ ಘೋಷಿಸಿದ ಏನಿದು ಯೋಜನೆ, ಯಾರಿಗೆ ಅನುಕೂಲ?
ಚೆನ್ನಮ್ಮನ ಶಕ್ತಿಯೊಂದಿಗೆ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ ಎಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಹಾವೇರಿ: ಚೆನ್ನಮ್ಮನ ಶಕ್ತಿಯೊಂದಿಗೆ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು (Stri samarthya yojana) ಜಾರಿ ಮಾಡುತ್ತಿದ್ದೇವೆ ಎಂದು ಶಿವಮೊಗ್ಗದಲ್ಲಿ (Shivamogga) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ಪಟ್ಟಣದ ಸಂತೆ ಮೈದಾನದಲ್ಲಿ ಮಾತೋಶ್ರೀ ಗಂಗಮ್ಮ ಬೊಮ್ಮಾಯಿ ಪ್ರತಿಷ್ಠಾನದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸಂಗೀತ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡೆರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರುಪಾಯಿ ಸಾಲ ಮತ್ತು ಅನುದಾನ ಕೊಡುತ್ತಿದ್ದೇವೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡೋ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುತ್ತೇವೆ ಎಂದು ಭರವಸೆ ನೀಡಿದರು.
ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುತ್ತಿದ್ದೇವೆ. ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರುಪಾಯಿ ಅನುದಾನ ಕೊಡುತ್ತಿದ್ದೇವೆ. 5 ಲಕ್ಷ ಯುವಕರಿಗೆ ಕೊಡೋ ಯೋಜನೆ ಇದಾಗಿದೆ. ಎರಡೂ ಯೋಜನೆಗಳನ್ನು ಡಿಸೆಂಬರ್ನಲ್ಲಿ ಪ್ರಾರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಎಸ್.ಸಿ ಮತ್ತು ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದಿಂದ ಸಂತೋಷ ಆಗುತ್ತಿದೆ.
ಎಸ್.ಸಿ ಮತ್ತು ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ ವಿಚಾರವಾಗಿ ಮಾತನಾಡಿದ ಅವರು ಈಗಾಗಲೆ ಗೆಜೆಟ್ ನೊಟಿಫಿಕೇಷನ್ ಆಗಿದೆ. ಬರುವ ವಿಧಾನಸಭೆ ಅಧಿವೇಶದನಲ್ಲಿ ಅನುಮೋದನೆ ಪಡೆದುಕೊಳ್ಳುತ್ತೇವೆ. ನನಗೆ ಈ ವಿಚಾರದಲ್ಲಿ ಬಹಳ ಸಂತೋಷ ಆಗುತ್ತಿದೆ. ಡಾ.ನಾಗಮೋಹನ ದಾಸ್ ವರದಿಯನ್ನು ಅನುಷ್ಠಾನ ಮಾಡಿಸೋ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಆ ಎಲ್ಲ ಜನಾಂಗದ ಮಕ್ಕಳಿಗೆ ನಾನು ಶುಭಾಶಯಗಳನ್ನು ಹೇಳುತ್ತೇನೆ. ಈ ವಿಚಾರದಲ್ಲಿ ಸಿದ್ದರಾಮಯ್ಯನವರ ಹೇಳಿಕೆ ಬಗ್ಗೆ ನಾನು ಮಾತನಾಡೋದಿಲ್ಲ. ಅದರ ಬಗ್ಗೆ ನಾನು ಚರ್ಚೆ ಮಾಡೋಕೆ ಹೋಗೋದಿಲ್ಲ. ನನ್ನ ಕರ್ತವ್ಯ, ಬದ್ಧತೆ ಏನಿದೆ ಅದನ್ನು ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ