AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ ಎಂದು ದುರ್ಗಾದೇವಿ ಕೆರೆಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

ಜಿಲ್ಲೆಯ ಹಿರೇಕೆರೂರು ಪಟ್ಟಣದ ದುರ್ಗಾದೇವಿ ಕೆರೆಗೆ ಬಂದು ಕೆರೆ ತುಂಬಿಸುವ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು.

ಹಾವೇರಿಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ ಎಂದು ದುರ್ಗಾದೇವಿ ಕೆರೆಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ ಕೆರೆಗೆ ಬಾಗಿನ ಅರ್ಪಿಸಿದರು
TV9 Web
| Edited By: |

Updated on:Aug 28, 2021 | 1:51 PM

Share

ಹಾವೇರಿ: ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಹಲವು ಏತ ನೀರಾವರಿ ಯೋಜನೆಗಳನ್ನ ಪೂರ್ಣಗೊಳಿಸುತ್ತೇವೆ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳನ್ನ ಆದಷ್ಟು ಬೇಗ ಕೈಗೆತ್ತಿಕೊಳ್ಳುತ್ತೇವೆ. ಉನ್ನತ ಶಿಕ್ಷಣದಲ್ಲಿ ಪ್ರಾರಂಭ ಮಾಡುತ್ತೇವೆ. ಅಕ್ಟೋಬರ್ ಒಂದರಿಂದ ಪ್ರಾರಂಭ ಆಗುತ್ತದೆ. ಟಾಸ್ಕ್ ಫೋರ್ಸ್ ಅಧ್ಯಯನ ವರದಿ ಆಧಾರದ ಮೇಲೆ ಪ್ರಾರಂಭ ಮಾಡುತ್ತೇವೆ. ಭದ್ರಾ ಮೇಲ್ದಂಡೆ ಯೋಜನೆ ಅಧಿಸೂಚನೆ ಬಗ್ಗೆ ಕೇಂದ್ರದ ಜಲಸಂಪನ್ಮೂಲ ಸಚಿವರ ಜತೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದರು.

ನಂತರ ಜಿಲ್ಲೆಯ ಹಿರೇಕೆರೂರು ಪಟ್ಟಣದ ದುರ್ಗಾದೇವಿ ಕೆರೆಗೆ ಬಂದು ಕೆರೆ ತುಂಬಿಸುವ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ದುರ್ಗಾದೇವಿ ಕೆರೆಗೆ ಪೂಜೆ ಸಲ್ಲಿಸಿದ ಅವರು, ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗೆ ಸಚಿವರಾದ ಬಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಸಂಸದ ಶಿವಕುಮಾರ ಉದಾಸಿ ಸಾಥ್ ನೀಡಿದರು.

ದುರ್ಗಾದೇವಿಗೆ ಪೂಜೆ ಸಲ್ಲಿಸಿದ ಸಿಎಂ

ಮಾಸ್ಕ್​ಗಾಗಿ ನೂಕುನುಗ್ಗಲು ಜಿಲ್ಲೆಯ ಹಿರೇಕೆರೂರು ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಮಾಸ್ಕ್ಗಾಗಿ ನೂಕುನುಗ್ಗಲು ಉಂಟಾಗಿತ್ತು. ಹಿರೇಕೆರೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದ ವೇದಿಕೆ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಹೆಸರಿನ ಮಾಸ್ಕ್ಗಾಗಿ ಜನ ನಾ ಮುಂದೆ ತಾ ಮುಂದೆ ಅಂತ ನುಗ್ಗಿದ್ದರು.

ಇದನ್ನೂ ಓದಿ

ಬಳ್ಳಾರಿ: ಹಸಿದವರಿಗಾಗಿಯೇ ಸಿದ್ಧವಾಗಿದೆ ರೋಟಿ ಘರ್, ಒಂದು ರೂಪಾಯಿಗೆ ಹೊಟ್ಟೆ ತುಂಬಾ ಊಟ!

ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ; ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಅನ್ನದಾತರು

(CM Basavaraja Bommai said that development has begun in Haveri)

Published On - 1:49 pm, Sat, 28 August 21

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್