AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಮೆಡಿಕಲ್ ಕಾಲೇಜಿಗೆ ಕನಕದಾಸರ ಹೆಸರು, ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಶೇ.7.5 ಮೀಸಲಾತಿ: ಸಿಎಂ ಘೋಷಣೆ

ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ನವೆಂಬರ್ 27) ಹಾವೇರಿ ಜಿಲ್ಲೆಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠಕ್ಕೆ ಭೇಟಿ ನೀಡಿ, ಸಂತ ಶ್ರೀ ಕನಕದಾಸರ ಅಧಿಷ್ಠಾನಕ್ಕೆ ಗೌರವ ನಮನ ಸಲ್ಲಿಸಿದರು. ಅಲ್ಲದೇ ನಿರಂಜನಾನಂದಪುರಿ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಭಕ್ತಶ್ರೇಷ್ಠ ಕನಕದಾಸರ ಜಯಂತ್ಯೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ದು, ಬಳಿಕ ಮಹತ್ವದ ಘೋಷಣೆ ಮಾಡಿದರು.

ಹಾವೇರಿ ಮೆಡಿಕಲ್ ಕಾಲೇಜಿಗೆ ಕನಕದಾಸರ ಹೆಸರು, ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಶೇ.7.5 ಮೀಸಲಾತಿ: ಸಿಎಂ ಘೋಷಣೆ
Dk Shivakumar
ರಮೇಶ್ ಬಿ. ಜವಳಗೇರಾ
|

Updated on: Nov 27, 2026 | 9:58 PM

Share

ಹಾವೇರಿ, ನವೆಂಬರ್.27: ಹಾವೇರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸಂತ ಕನಕದಾಸರ ಹೆಸರಿಡಲಾಗುವುದು. ಕಾಗಿನೆಲೆಯಲ್ಲಿ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಶ್ರೀಗಳ ಭೂಮಿ ಬೇಡಿಕೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಘೋಷಿಸಿದರು.

ಹಾವೇರಿಯ ಸುಕ್ಷೇತ್ರ ಕಾಗಿನೆಲೆಯಲ್ಲಿ ಶುಕ್ರವಾರ ನಡೆದ ಭಕ್ತಶ್ರೇಷ್ಠ ಕನಕದಾಸರ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ, ಕಾಗಿನೆಲೆಯನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈಗಾಗಲೇ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದಡಿ 35 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ. ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 5 ಕೋಟಿ ರೂ. ನೀಡಲಾಗುವುದು. ಶ್ರೀಗಳ ಇತರ ಬೇಡಿಕೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ನೋಡಿ: ಸಿಎಂ ಮುಂದೆ ಬಂದೂಕಿಗೆ ಬೇಡಿಕೆ ಇಟ್ಟ ಕುರಿಗಾಹಿ, ಡಿಕೆಶಿ ರಿಯಾಕ್ಷನ್ ಹೇಗಿತ್ತು ನೋಡಿ

ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಶೇ.7.5 ಮೀಸಲಾತಿ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಪ್ರವೇಶದಲ್ಲಿ ಮೀಸಲಾತಿ ಕಲ್ಪಿಸುವುದರ ಜತೆಗೆ ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಶೇ.7.5 ಮೀಸಲಾತಿ ನೀಡಲು ಸರ್ಕಾರ ನಿರ್ಧರಿಸಿದೆ. ಹಾವೇರಿ ಜಿಲ್ಲೆಯ ಶಾಸಕರು ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದು, ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಗೆ ₹115 ಕೋಟಿಗೂ ಅಧಿಕ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು

ಕನಕದಾಸರು ಕೀರ್ತನೆಗಳ ಮೂಲಕ ಜಾತಿ ವ್ಯವಸ್ಥೆಯ ವಿಷಬೀಜವನ್ನು ಕಿತ್ತುಹಾಕಲು ಶ್ರಮಿಸಿದ ಮಹಾನ್ ಕ್ರಾಂತಿಕಾರಿಗಳು. ಭಕ್ತಿ ಅವರ ಸಾಧನವಾದರೆ, ಸಮಾನತೆ ಅವರ ಸಂದೇಶವಾಗಿತ್ತು. ಕನಕದಾಸರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು. ಬಸವಣ್ಣ, ಕನಕದಾಸರು ಹಾಗೂ ಅಂಬೇಡ್ಕರ್ ಅವರು ಇಡೀ ಸಮಾಜದ ಆಸ್ತಿಯಾಗಿದ್ದಾರೆ. ಆತ್ಮಕ್ಕೆ ಕುಲವಿಲ್ಲ ಎಂಬ ಸಂದೇಶವನ್ನು ಅವರು ಸಾರಿದ್ದಾರೆ. ಅವರ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕನಕದಾಸರ ಸಂದೇಶದಂತೆ ಹಸಿದವರಿಗೆ ಅನ್ನ ನೀಡುವ ಉದ್ದೇಶದಿಂದ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ರಾಜ್ಯದ 4.21 ಕೋಟಿ ಜನರಿಗೆ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ವಾರ್ಷಿಕ 8,500 ಕೋಟಿ ವೆಚ್ಚ ಮಾಡಲಾಗುತ್ತಿದೆ. ಜನರ ಆರ್ಥಿಕ ಹೊರೆ ತಗ್ಗಿಸಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More