ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧ; ಸಿಎಂ ಸಿದ್ದರಾಮಯ್ಯ

ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧ; ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Nov 29, 2023 | 5:37 PM

ಹಾವೇರಿ, ನ.29: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನ(Session) ದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದರು. ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು.

ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ‘ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದಿದ್ದಾರೆ.

ಹಾವೇರಿ ಜಿಲ್ಲೆಗೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.

ಇನ್ನು ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ:ಚಳಿಗಾಲದ ಅಧಿವೇಶನ ಇಲ್ಲಿಯೇ ಯಾಕಾದರೂ ನಡೆಯುತ್ತದೋ ಎಂದು ಇಲ್ಲಿನ ರೈತರಿಗೆ ಧುತ್ತನೆ ಎದುರಾಗಿದೆ ಟೆನ್ಷನ್! ಏನದು ವಿಷಯ?

ಎನ್.ಆರ್.ಜಿ.ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವಂತೆ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವರೆಗೆ ಈ ಅನುಮತಿಯನ್ನು ನೀಡಿಲ್ಲ. ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ.

ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಗೆ ಸಮ್ಮತಿಸುತ್ತಿದ್ದೆ ಎಂದು ಟ್ವೀಟ್​ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​