AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hangal By Election Winner: ಹಾನಗಲ್​ನಲ್ಲಿ ಬಿಜೆಪಿಗೆ ಹೀನಾಯ ಸೋಲು; ಕಾಂಗ್ರೆಸ್​​ನ ಶ್ರೀನಿವಾಸ ಮಾನೆಗೆ ಮಣೆ ಹಾಕಿದ ಮತದಾರ

Srinivas Mane: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ (Srinivas Vishnurav Mane) ಜಯಭೇರಿ ಬಾರಿಸಿದ್ದಾರೆ. 46 ವರ್ಷದ ಶ್ರೀನಿವಾಸ ವಿಷ್ಣುರಾವ್ ಮಾನೆ ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ.

Hangal By Election Winner: ಹಾನಗಲ್​ನಲ್ಲಿ ಬಿಜೆಪಿಗೆ ಹೀನಾಯ ಸೋಲು; ಕಾಂಗ್ರೆಸ್​​ನ ಶ್ರೀನಿವಾಸ ಮಾನೆಗೆ ಮಣೆ ಹಾಕಿದ ಮತದಾರ
ಶ್ರೀನಿವಾಸ ಮಾನೆ
TV9 Web
| Edited By: |

Updated on:Nov 03, 2021 | 11:16 AM

Share

ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ (Srinivas Vishnurav Mane) ಜಯಭೇರಿ ಬಾರಿಸಿದ್ದಾರೆ. 46 ವರ್ಷದ ಶ್ರೀನಿವಾಸ ವಿಷ್ಣುರಾವ್ ಮಾನೆ ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ. ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಫಲಿತಾಂಶದಲ್ಲಿ ಜಯ ಸಾಧಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರೂರಿನಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ಸೋಲನುಭವಿಸಿರುವುದು ಬಿಜೆಪಿಗೆ ಆತಂಕ ತಂದಿದೆ. ಕರ್ನಾಟಕ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆದಿತ್ತು. ಮತ ಎಣಿಕೆ ಆರಂಭದಿಂದಲೂ ಮುಂಚೂಣಿಯಲ್ಲಿದ್ದ ಶ್ರೀನಿವಾಸ ಮಾನೆ 7,598 ಮತಗಳ ಅಂತದಿಂದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ಸೋಲಿಸಿ ಗೆಲುವಿನ ಪತಾಕೆ ಹಾರಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ್‌ ಮಾನೆ 87 ,490 ಮತ ಪಡೆದ್ರೆ ಬಿಜೆಪಿ ಅಭ್ಯರ್ಥಿ ಶಿವರಾಜ್‌ ಸಜ್ಜನರ್‌ 80,117 ವೋಟ್‌ ಪಡೆದಿದ್ದಾರೆ. ಇನ್ನೂ ಜೆಡಿಎಸ್‌ ಅಭ್ಯರ್ಥಿ ಇಲ್ಲಿ ಮೂರಂಕಿ ದಾಟಿಲ್ಲ . ಕೇವಲ927 ಮತ ಪಡೆದು ಠೇವಣಿ ಕಳೆದುಕೊಂಡಿದ್ದಾರೆ . ಅಂತಿಮವಾಗಿ ಕಾಂಗ್ರೆಸ್‌ನ ಮಾನೆ 7373 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.

ಕಾಂಗ್ರೆಸ್​ನ ಶ್ರೀನಿವಾಸ ಮಾನೆಗೆ 7,598 ಮತಗಳ ಅಂತದಿಂದ ಜಯ ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ 87,113 ಮತಗಳು, ಬಿಜೆಪಿಯ ಶಿವರಾಜ್ ಸಜ್ಜನರಗೆ 79,515 ಮತಗಳು ಹಾಗೂ ಜೆಡಿಎಸ್​ ಅಭ್ಯರ್ಥಿ ನಿಯಾಜ್ ಶೇಖ್​ಗೆ 921 ಮತಗಳು ಸಿಕ್ಕಿವೆ. ಇನ್ನು ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ, ಹಾನಗಲ್ ಕ್ಷೇತ್ರದಲ್ಲಿ ಜನಬಲ ಗೆದ್ದಿದೆ, ಹಣ ಬಲ ಸೋತಿದೆ. ಹಾನಗಲ್‌ನ ಸ್ವಾಭಿಮಾನಿ ಜನರು ನನಗೆ ಮತ ನೀಡಿದ್ದಾರೆ. ಯಾವುದೇ ತಂತ್ರಗಳಿಗೆ ಮಣಿಯದೆ ನನಗೆ ಮತ ನೀಡಿದ್ದಾರೆ. ಮಾನವೀಯತೆಗೆ ಮತ ಹಾಕಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ಇತ್ತು. ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ಗೆದ್ದಿದೆ ಎಂದು ಶ್ರೀನಿವಾಸ ಮಾನೆ ಸಂತೋಷ ಹಂಚಿಕೊಂಡಿದ್ದಾರೆ.

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಶ್ರೀನಿವಾಸ ಮಾನೆ ಗೆದ್ದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿರೋ ಮಾಲತೇಶ ದೇವಸ್ಥಾನದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಎಪ್ಪತ್ತೈದು ತೆಂಗಿನಕಾಯಿ ಒಡೆದು ಸಂಭ್ರಮ ಆಚರಿಸಿದ್ದಾರೆ.

ಇದನ್ನೂ ಓದಿ: Sindagi By Election Winner: ಸಿಂದಗಿ ಅಸೆಂಬ್ಲಿ ಗದ್ದುಗೆ ಬಿಜೆಪಿಗೆ, ರಮೇಶ ಭೂಸನೂರ ಜಯಭೇರಿ -ಅಧಿಕೃತ ಘೋಷಣೆ ಬಾಕಿ

Published On - 12:57 pm, Tue, 2 November 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ