ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಲು ಕಂದಾಯ ಸಚಿವ ಅಶೋಕ್ ನೇತೃತ್ವದಲ್ಲಿ ಕಂದಾಯ ಕ್ರಾಂತಿ: ಸಿಎಂ ಬೊಮ್ಮಾಯಿ ಶ್ಲಾಘನೆ

ಈಗ ಅಧಿಕಾರಿಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ದಾಖಲೆಗಳನ್ನು ಕೊಡುವ ಕಾರ್ಯಕ್ರಮವನ್ನು ನಮ್ಮ ಸರಕಾರ ರೂಪಿಸಿದೆ. ಸರಕಾರ ಮನೆ ಬಾಗಿಲಿಗೆ ಬರುತ್ತೆ ಎಂಬುದನ್ನು ಯಾರೂ ಯೋಚನೆ ಮಾಡಿರಲಿಲ್ಲ. ಅಂತಹ ಕೆಲಸವನ್ನು ನಮ್ಮ ಸರಕಾರ ಮಾಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಲು ಕಂದಾಯ ಸಚಿವ ಅಶೋಕ್ ನೇತೃತ್ವದಲ್ಲಿ ಕಂದಾಯ ಕ್ರಾಂತಿ: ಸಿಎಂ ಬೊಮ್ಮಾಯಿ ಶ್ಲಾಘನೆ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 26, 2022 | 2:24 PM

ಹಾವೇರಿ: ಕಂದಾಯ ದಾಖಲೆಗಳು ಮನೆಮನೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಹಾವೇರಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮಾತನಾಡಿದ್ದಾರೆ. ಭ್ರಷ್ಟಾಚಾರ (Corruption ), ದಾಖಲೆಗಳ ವಿತರಣೆ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳ ನಿವಾರಣೆಗೆ ಕಂದಾಯ ಸಚಿವ ಅಶೋಕರ (R Ashoka) ನೇತೃತ್ವದಲ್ಲಿ ಕಂದಾಯ ಕ್ರಾಂತಿ ನಡೆಸಲಾಗುತ್ತಿದೆ. ದಾಖಲೆಗಳಿಗೆ ಅಧಿಕಾರಿಗಳ ಮುಂದೆ ಹೋಗಿ ಕೈಕಟ್ಟಿಕೊಂಡು ನಿಲ್ಲುವ ಪರಿಸ್ಥಿತಿ ಇತ್ತು. ಈಗ ಅಧಿಕಾರಿಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ದಾಖಲೆಗಳನ್ನು ಕೊಡುವ ಕಾರ್ಯಕ್ರಮವನ್ನು ನಮ್ಮ ಸರಕಾರ ರೂಪಿಸಿದೆ. ಸರಕಾರ ಮನೆ ಬಾಗಿಲಿಗೆ ಬರುತ್ತೆ ಎಂಬುದನ್ನು ಯಾರೂ ಯೋಚನೆ ಮಾಡಿರಲಿಲ್ಲ. ಅಂತಹ ಕೆಲಸವನ್ನು ನಮ್ಮ ಸರಕಾರ ಮಾಡಿದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು,ಈ ವರ್ಷ ಮಳೆ ಹೆಚ್ಚಾಗಿ ಬೆಳೆ ಹಾನಿಯಾದ ಸಂದರ್ಭದಲ್ಲಿ ಕೇಂದ್ರದ ಪರಿಹಾರ ಹಣದ ಜೊತೆಗೆ ನಮ್ಮ ಬಿಜೆಪಿ ಸರಕಾರ ಕೇಂದ್ರದ ಜೊತೆ ರಾಜ್ಯದ ಹಣವನ್ನೂ ಸೇರಿಸಿ ಪರಿಹಾರ ಕೊಟ್ಟಿದ್ದೇವೆ. ಇದು ಜನಪರವಾದ, ಜೀವಂತವಾಗಿರುವ ಸರಕಾರ. ಜನರ ಅಲೆದಾಟ ತಪ್ಪಿಸಲು ಗ್ರಾಮ ಒನ್ ಕೇಂದ್ರಗಳನ್ನು ನಮ್ಮ ಸರಕಾರ ಆರಂಭಿಸಿದೆ. ನಮ್ಮ ಸರಕಾರ ಜನಪರ ಮಾತ್ರವಲ್ಲ ಜನರಿಗೋಸ್ಕರ, ಜನರಿಗೆ ಹತ್ತಿರವಿರುವ ಸರಕಾರ ಎಂಬುದನ್ನು ಮಾಡಿ ತೋರಿಸಿದ್ದೇವೆ. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ, ಕೈಗಾರಿಕೆ, ದುಡಿಯುವ ಕೈಗಳಿಗೆ ಕೆಲಸ ಕೊಡುವ ಹೀಗೆ ರಾಜ್ಯದ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಪೂರಕವಾದ ವಿಶಿಷ್ಟಪೂರ್ಣವಾದ ಬಜೆಟ್ ಕೊಟ್ಟಿದ್ದೇವೆ. ಎಲ್ಲ ರಂಗದ ಜನರೂ ಬಜೆಟ್ ಅನ್ನು ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಾಲು ಉತ್ಪಾದನೆ ಮಾಡುವ ರೈತರಿಗೆ ಅವರದೆಯಾದ ಬ್ಯಾಂಕ್ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ: ಸಿಎಂ ಬೊಮ್ಮಾಯಿ

ಕೇಂದ್ರದ ಗೃಹ ಮತ್ತು ಸಹಕಾರಿ ಸಚಿವ ಅಮೀತ್ ಷಾರವರು ಏಪ್ರೀಲ್ ಒಂದರಂದು ಬ್ಯಾಂಕ್​ನ ಲೋಗೋ ಉದ್ಘಾಟನೆ ಮಾಡಲಿದ್ದಾರೆ. ಬ್ಯಾಂಕ್​ಗಾಗಿ ಒಂದು ನೂರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇಂತಹ ಕೆಲಸಗಳಿಗೆ ಬಹಳಷ್ಟು ಜನರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಜನರ ಈ ಬೆಂಬಲ, ಪ್ರತಿಕ್ರಿಯೆ ನನಗೆ ಸೇರಿದ್ದಲ್ಲ. ನಮ್ಮ ಕ್ಷೇತ್ರದ ಜನರಿಗೆ ಸೇರಿದ್ದು. ಯಡಿಯೂರಪ್ಪ, ಪ್ರಧಾನಿ, ಅಮೀತ್ ಷಾರ ಆಶೀರ್ವಾದದಿಂದ ಸಿಎಂ ಆಗಿದ್ದೇನೆ. ನಿಮ್ಮ ಒಂದು ಮತ ಕೇವಲ ಶಾಸಕ ಅಲ್ಲ ಮಂತ್ರಿ ಎಂದು ಹೇಳುತ್ತಿದ್ದೆ. ಈ ಬಾರಿ ತ್ರಿಬಲ್ ಧಮಾಕಾ ರೀತಿ ಶಾಸಕ, ಮಂತ್ರಿ, ಸಿಎಂ ಸ್ಥಾನ ಸಿಗುವಂತೆ ಮಾಡಿದೆ. ನಿಮ್ಮ ಮತದಲ್ಲಿ ಆ ಶಕ್ತಿ ಇದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗ್ರಾಮ ಒನ್ ಮೂಲಕ ಬಡವರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಲಾಗಿದೆ: ಸಿಎಂ ಬೊಮ್ಮಾಯಿ

ಮಾತು ಕೊಟ್ಟಂತೆ ಶಿಗ್ಗಾಂವಿ, ಸವಣೂರು ಕೆರೆ ತುಂಬಿಸುವ ಯೋಜನೆ ಮಾಡಿದ್ದೇನೆ. ಶಿಗ್ಗಾಂವಿಗೆ ಬಸ್ ಡಿಪೋ, ಆಸ್ಪತ್ರೆ, ಜಿಟಿಟಿಸಿ ಮಂಜೂರು ಮಾಡಿದ್ದೇನೆ. ಸವಣೂರಿಗೆ ಆಯುರ್ವೇದಿಕ ಕಾಲೇಜು ಮಾಡಿದ್ದೇನೆ. ಸವಣೂರಿನ ಪಾಲಿಟೆಕ್ನಿಕ್ ಕಾಲೇಜನ್ನು ಇಂಜನೀಯರಿಂಗ ಕಾಲೇಜಿಗೆ ಮೇಲ್ದರ್ಜೆಗೆ ಏರಿಸುವ ಯೋಜನೆ ಮಾಡಿದ್ದೇನೆ. ರೈತರಿಗೆ ತೊಂದರೆ ಆಗಬಾರದು ಎಂದು ಸರ್ವೇ ಇಲಾಖೆ ನೇಮಕಾತಿ ಕೂಡ ಮಾಡಲಾಗುತ್ತಿದೆ. ಇದೊಂದು ದೊಡ್ಡ ಬದಲಾವಣೆ, ಕ್ರಾಂತಿ. ಬಡವರಿಗೆ ಆರೋಗ್ಯ ಬಹಳ ಮುಖ್ಯ. ಗ್ರಾಮ ಒನ್ ಮೂಲಕ ಬಡವರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಲಾಗಿದೆ. ಜನರಿಂದ ಜನರಿಗೋಸ್ಕರ ಇರುವ ಸರಕಾರ ನಮ್ಮದು. ಇನ್ನು ಬರುವ ದಿನಗಳಲ್ಲಿ ಹಲವಾರು ಬದಲಾವಣೆಗಳನ್ನು ತರುತ್ತೇವೆ. ಹಾಲು ಉತ್ಪಾದಕರ ಸಂಘಕ್ಕಾಗಿ ಹೋರಾಟ‌ ಮಾಡಿದ್ದೆ. ಅದನ್ನೂ ಕೂಡ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದ್ದು, ಏಪ್ರಿಲ್ 1ರಿಂದ ಅದು ಆರಂಭ ಆಗುತ್ತದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು, ನಮ್ಮ ಜಿಲ್ಲೆಗೆ ಮೆಗಾ ಡೈರಿ ಮಾಡಿದ್ದೇವೆ. ಬಹುಮುಖ ಆರ್ಥಿಕ ಅಭಿವೃದ್ಧಿ ಮುಂಬರುವ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಆಗುತ್ತದೆ. ತಿಮ್ಮಾಪುರ ಗ್ರಾಮದ ಜನರು ರಾಜಕೀಯವಾಗಿ ಬಹಳ ಬೆಳೆದಿರುವ ಜನ. ಚುನಾವಣೆ ಹತ್ತಿರ ಬಂದಾಗ ಸ್ವಲ್ಪ ಜಿನುಗು ಆಗುತ್ತಾರೆ. ನನ್ನ ಕೈಗೆ ಸಿಕ್ಕಿಲ್ಲ, ಯಾರ ಕೈಗೆ ಸಿಗುತ್ತೀರಿ ನೀವು ಎಂದು ಸಿಎಂ ಬೊಮ್ಮಾಯಿ ಹಾಸ್ಯ ಮಾಡಿದ್ದಾರೆ.

ಮನೆ ಮನೆಗೆ ತೆರಳಿ ಕಂದಾಯ ದಾಖಲೆ ವಿತರಿಸಿದ ಸಿಎಂ

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮನೆ ಮನೆಗೆ ತೆರಳಿ ಕಂದಾಯ ದಾಖಲೆ ವಿತರಿಸಿದ್ದಾರೆ. ಈ ವೇಳೆ ಸಿಎಂ ಜೊತೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನ ಅವಾಚ್ಯ ಶಬ್ದಗಳಿಂದ ನಿಂದನೆ! ಆರೋಪಿಯನ್ನು ಬಂಧಿಸಲು ಆಗ್ರಹ

ಇಂದು ಸಿಎಂ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ; ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ

Published On - 2:08 pm, Sat, 26 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್