ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್​ ರಾಜಕೀಯ: ವಿಮಾನದಲ್ಲಿ ಬಂದು ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡಿಸಿದ್ರು

ಸಾಮನ್ಯವಾಗಿ ನಾವು ಎಂ.ಎಲ್.ಎ ಹಾಗೂ ಎಂ.ಪಿಗಳ ರೆಸಾರ್ಟ್ ರಾಜಕಾರಣವನ್ನು ನೋಡಿದ್ದೇವೆ. ಅದರೆ ಈಗ ಗ್ರಾಮ ಪಂಚಾಯಿತಿಗೂ ರೆಸಾರ್ಟ್​ ರಾಜಕೀಯ ಕಾಲಿಟ್ಟಿದ್ದು, ವಿಮಾನದಲ್ಲಿ ಆಗಮಿಸಿ ಪಂಚಾಯಿತಿ ಅಧ್ಯಕ್ಷ ವಿರುದ್ಧ ಅವಿಶ್ವಾಸ ನಿರ್ಣಯ ಪ್ರಕಿಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.

ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್​ ರಾಜಕೀಯ: ವಿಮಾನದಲ್ಲಿ ಬಂದು ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡಿಸಿದ್ರು
ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್​ ರಾಜಕೀಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 06, 2022 | 6:46 PM

ಹಾವೇರಿ: ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳಿಗೆ ಮಾತ್ರ ಸೀಮಿತವಾಗಿದ್ದ ರೇಸಾರ್ಟ್‌ ರಾಜಕಾರಣ(Resort Politics) ಈಗ ಗ್ರಾಮ ಪಂಚಾಯಿತಿ(gram panchayat) ಸದಸ್ಯರ ಮಟ್ಟಕ್ಕೂ ಬಂದು ನಿಂತಿದೆ. ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ(Haveri) ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡದ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನ ಶತಾಯಗತಾಯ ಕೆಳಗಿಳಿಸಲೇಬೇಕೆಂದು ಹಠಕ್ಕೆ ಬಿದ್ದು ರೆಸಾರ್ಟ್ ಮೊರೆ ಹೋಗಿದ್ದ ಸದಸ್ಯರು, ಅಂತಿಮವಾಗಿ ವಿಮಾನದಲ್ಲಿ ಬಂದು ಅವಿಶ್ವಾಸ ಮಂಡನೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಇದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಹೌದು… ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡದ ಗ್ರಾಮ ಪಂಚಾಯಿತಿ ಅಧ್ಯಕ್ಷ ಬದಲಾವಣೆ ವಿಚಾರಕ್ಕೆ ರೆಸಾರ್ಟ್ ರಾಜಕೀಯ ನಡೆದಿದ್ದು, ಸದಸ್ಯರು ವಿಮಾನದಲ್ಲಿ ಬಂದು ಅಧ್ಯಕ್ಷ ಮಾಲತೇಶ ದುರಗಪ್ಪ ನಾಯರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದರು. ಮಾತುಕತೆಯಂತೆ ಅವಧಿ ಮುಗಿದರೂ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಮಾಲತೇಶ  ಸತಾಯಿಸಿದ್ದಾರೆ. ಇದರಿಂದ ಸದಸ್ಯರು ಕಳೆದ 40 ದಿನಗಳಿಂದ ರೆಸಾರ್ಟ್ ರಾಜಕೀಯ ಮಾಡಿದ್ದಾರೆ.

ಒಟ್ಟು 13 ಜನ ಗ್ರಾ.ಪಂ ಸದಸ್ಯರಲ್ಲಿ 9 ಸದಸ್ಯರು ಸಂತೋಷ್ ಭಟ್ ಗುರೂಜಿ ಬಣದವರು, ಇನ್ನುಳಿದ ನಾಲ್ವರು ಬಿಜೆಪಿ ಸದಸ್ಯರಾಗಿದ್ರು.‌ ಮಾಲತೇಶ್ ಗ್ರಾ.ಪಂ ಸದಸ್ಯರನ್ನು ಹೈಜಾಕ್ ಮಾಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರಿನ ರೆಸಾರ್ಟ್ ಗೆ ಕಳಿಸಿಕೊಟ್ಟಿದ್ದರು. ಈಗ ರೆಸಾರ್ಟ್ ನಿಂದ ವಿಮಾನದಲ್ಲಿ ಬಂದು ಅವಿಶ್ವಾಸ ನಿರ್ಣಯ ಮಂಡನೆ ಪ್ರಕ್ರಿಯೆಯಲ್ಲಿ ಹಾವೇರಿ ಉಪ ವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಮುಂದೆ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದರು.

ಅಧ್ಯಕ್ಷರ ಆಡಳಿತಾವಧಿ ವಿಚಾರದಲ್ಲಿ ನಡೆದ ಒಪ್ಪಂದದಂತೆ 15 ತಿಂಗಳು ಅಧಿಕಾರ ಹಂಚಿಕೆಗೆ ಮಾತುಕತೆಯಾಗಿತ್ತು. ಆದ್ರೆ, 15 ತಿಂಗಳು ಪೂರ್ಣಗೊಂಡರೂ ಸಹ ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿಲ್ಲ. ಹೀಗಾಗಿ ಗ್ರಾ.ಪಂ ಅಧ್ಯಕ್ಷ ಮಾಲತೇಶ್ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧರಿಸಿದ್ದ ಸದಸ್ಯರು, ರೆಸಾರ್ಟ್​ಗೆ ಹೋಗಿದ್ದರು. ಬರೋಬ್ಬರಿ 40 ದಿನದಿಂದ ಬೆಂಗಳೂರಿನ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿ, ಕೊನೆಗೆ ವಿಮಾನದಲ್ಲಿ ಬಂದು ಅವಿಶ್ವಾಸ ಮಂಡನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:40 pm, Tue, 6 December 22