ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ; ಜ.6, 7ರಂದು ಐದು ಪಿಯು ಕಾಲೇಜುಗಳಿಗೆ ರಜೆ

ಜನವರಿ 6, 7, 8ರಂದು‌ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹೀಗಾಗಿ ಜನವರಿ 6 ಮತ್ತು 7ರಂದು ಹಾವೇರಿಯ ಐದು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ; ಜ.6, 7ರಂದು ಐದು ಪಿಯು ಕಾಲೇಜುಗಳಿಗೆ ರಜೆ
86th Kannada Sahitya Sammelan
Follow us
TV9 Web
| Updated By: ಆಯೇಷಾ ಬಾನು

Updated on:Jan 02, 2023 | 12:03 PM

ಹಾವೇರಿ: ಜಿಲ್ಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೆಳನ (Kannada Sahitya Sammelana) ಪ್ರಯುಕ್ತ ಹಾವೇರಿ ಪಟ್ಟಣದ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜನವರಿ 6, 7, 8ರಂದು‌ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹೀಗಾಗಿ ಜನವರಿ 6 ಮತ್ತು 7ರಂದು ಹಾವೇರಿಯ ಐದು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜು ಹಾವೇರಿ, ಗುಡ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್ ಜೆ.ಎಂ ಪದವಿ ಪೂರ್ವ ಕಾಲೇಜು, ಎಸ್​ಎಂಎಸ್ ಪದವಿ ಪೂರ್ವ ಕಾಲೇಜು ಸೇರಿ ಒಟ್ಟು ಐದು ಕಾಲೇಜಿಗೆ ರಜೆ ನೀಡಲಾಗಿದೆ. ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸುವಂತಾಗಳು ರಜೆ ನೀಡಲಾಗಿದೆ.

ಇದನ್ನೂ ಓದಿ: ಏಲಕ್ಕಿ ಕಂಪಿನ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ: ತಯಾರಾಗುತ್ತಿವೆ ಸಾವಿರಾರು ಯಾಲಕ್ಕಿ ಹಾರಗಳು!

ಹಾವೇರಿ ಸಾಹಿತ್ಯ ಸಮ್ಮೇಳನ; ಪಾರ್ಕಿಂಗ್​, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಿಲ್ಲಾ ಟ್ರಾಫಿಕ್ ಪೋಲಿಸರಿಂದ ವಿನೂತನ ಪ್ರಯೋಗ

ಹಾವೇರಿ: ಜನವರಿ 6, 7 ಹಾಗೂ 8 ರಂದು ದಾಸಶ್ರೇಷ್ಠ ಕನಕದಾಸರ ನಾಡು ಹಾವೇರಿಯಲ್ಲಿ ಸಾಮರಸ್ಯದ ಭಾವ ಕನ್ನಡದ ಜೀವ ಎಂಬ ಧ್ಯೆಯದೊಂದಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನಕ್ಕೆ ಬರುವ ವಾಹನ ನಿಲುಗಡೆಗಾಗಿ ಜಿಲ್ಲಾ ಸಂಚಾರಿ ಪೋಲಿಸ್ ವಿನೂತನ ಪ್ರಯೋಗ ಮಾಡಿದೆ. ಹೌದು ಹಾವೇರಿ (Haveri) ಜಿಲ್ಲಾ ಸಂಚಾರಿ ಪೋಲಿಸರು ವಾಹನ ನಿಲುಗಡೆ ಮತ್ತು ಸಂಚಾರ ನಿಯಂತ್ರಣಕ್ಕೆ ಕ್ಯು ಆರ್​ ಕೋಡ್ ಜೊತೆಗೆ ಸಂಚಾರದ ನೀಲಿನಕ್ಷೆ ಬಿಡುಗಡೆ ಮಾಡಿದ್ದಾರೆ.

ಸಮ್ಮೇಳನಕ್ಕೆ ಬರುವವರಿಗಾಗಿ ಸುಲಲಿತ ಸಂಚಾರ ವ್ಯವಸ್ಥೆಗಾಗಿ ಜಿಲ್ಲಾ ಸಂಚಾರ ಪೋಲಿಸರು ಕ್ಯು ಆರ್​ ಕೋಡ್ ಜೊತೆಗೆ ಸಂಚಾರದ ನೀಲಿನಕ್ಷೆ ಬಿಡುಗಡೆ ಮಾಡಿದ್ದು, ಸಂಚಾರ ಮಾರ್ಗಸೂಚಿಯನ್ನು ಗುಗಲ್ ಮ್ಯಾಪ್​ನಲ್ಲಿ ಅತಿ ಸರಳವಾಗಿ ತಿಳಿಯಬಹುದಾಗಿದೆ. ಇದರಿಂದ ಜನರು ಟ್ರಾಫಿಕ್ ಜ್ಯಾಮ್ ಸಮಸ್ಯೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:03 pm, Mon, 2 January 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ