Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಗ್ಯಾರಂಟಿಯೂ ಇದೆ: ಮಾಜಿ ಸಚಿವ ಬಿಸಿ ಪಾಟೀಲ್

ಹಾವೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಿಸಿ ಪಾಟೀಲ್, ಕಾಂಗ್ರೆಸ್​ನವರು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದಾರೆ. ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಗ್ಯಾರಂಟಿನೂ  ಇದೆ. ಇದು ಸರ್ಕಾರದ ಆರನೇ ಗ್ಯಾರಂಟಿ ಅನಿಸುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ. ಓಟ್ ಒಂದು ಕೊಟ್ಟು ಬಿಡಿ ಎನ್ನುವ ತರ ಕಾಂಗ್ರೆಸ್ ಸರ್ಕಾರದ ಸ್ಥಿತಿ ಇದೆ ಎಂದಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಗ್ಯಾರಂಟಿಯೂ ಇದೆ: ಮಾಜಿ ಸಚಿವ ಬಿಸಿ ಪಾಟೀಲ್
ಮಾಜಿ ಸಚಿವ ಬಿಸಿ ಪಾಟೀಲ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 13, 2024 | 4:32 PM

ಹಾವೇರಿ, ಜನವರಿ 13: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಗ್ಯಾರಂಟಿಯೂ ಇದೆ. ಇದು ಸರ್ಕಾರದ ಆರನೇ ಗ್ಯಾರಂಟಿ ಅನಿಸುತ್ತದೆ ಎಂದು ಮಾಜಿ ಸಚಿವ ಬಿಸಿ ಪಾಟೀಲ್ (BC Patil) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದಾರೆ. ಕೃತ್ಯ ಆಗಿ ಇಷ್ಟು ದಿನ ಆದರೂ ಜಿಲ್ಲಾ ಉಸ್ತುವಾರಿ ಸಚಿವರು ಬಂದಿಲ್ಲ. ಇದು ದುರ್ದೈವದ ಸಂಗತಿ. ಆರೋಪಿಗಳನ್ನು ಭೇಟಿಯಾಗಲು ಮುಖಂಡರನ್ನು ಬಿಡುತ್ತಾರೆ ಅಂದರೆ ಪೊಲೀಸರು ಶಾಮೀಲಿದಾರೆ ಎಂದು ಕಿಡಿಕಾರಿದ್ದಾರೆ.

ಯಾರು ಏನು ಮಾಡಿ, ಓಟ್ ಒಂದು ಕೊಟ್ಟು ಬಿಡಿ ಎನ್ನುವ ತರ ಕಾಂಗ್ರೆಸ್ ಸರ್ಕಾರದ ಸ್ಥಿತಿ ಇದೆ. ಎಲ್ಲಿ ಬೇಕಾದರೂ ಗಾಂಜಾ, ಸಾರಾಯಿ ಸಿಗುತ್ತಿದೆ. ಯುವಕರು ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ ಎಂದಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನಾಲ್ಕರ ಕ್ರಾಸ್ ಬಳಿ ಸುಮಾರು 7 ಜನ ಲಾಡ್ಜ್​ಗೆ ನುಗ್ಗಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದಾರೆ ಅಂತ ಆರೋಪ ಮಾಡಿದ್ದಾರೆ. ಗೂಂಡಾಗಿರಿ ಹತ್ತಿಕ್ಕುವುದಾಗಿ ಸಿಎಂ ಹೇಳುತ್ತಾರೆ. ಮುಸ್ಲಿಂ ಮಹಿಳೆ ಮೇಲೆ ಅತ್ಯಾಚಾರ ನಡೆದರೂ ಮುಚ್ಚಿ ಹಾಕುವ ಕೆಲಸ ಪೊಲೀಸರು ಮಾಡಿದಾರೆ. ಈ‌ ದುಷ್ಕೃತ್ಯಗಳಿಗೆ ಕಾಂಗ್ರೆಸ್ ಪಕ್ಷ ನಾಯಕರು ಸಪೋರ್ಟ್ ಮಾಡಿದಾರೆ. ಇನ್ನೂ ಮೂರು ಜನ ಆರೋಪಿಗಳನ್ನು ಅರೆಸ್ಟ್ ಮಾಡಿಲ್ಲ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ಸಂಸದ ಪ್ರತಾಪ್​ ಸಿಂಹನಿಗೆ ಸೋಲುತ್ತೇನೆ ಎಂಬ ಭಯ ಕಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮಲ್ಲಿಗಾರ್​ದಲ್ಲಿ ಒಂದು ಪ್ರಕರಣವಾಗಿ ಮಾತನಾಡಿ, ದೀಪಾ ನಿಂಗಪ್ಪ ಲಮಾಣಿ ಅನ್ನುವ ಹುಡುಗಿ ಕಿಡ್ನಾಪ್ ಕೇಸ್ ಆಗಿದೆ. ಹಾನಗಲ್ ಬಳಿ ಮಕರವಳ್ಳಿ ಹುಡುಗಿ ಬಟ್ಟೆ ಖರೀದಿ ಮಾಡಲು ಹೋದಾಗ ಟ್ರಯಲ್ ನೋಡಲು ಹೋದಾಗ ವಿಡಿಯೋ ರೆಕಾರ್ಡ್ ಮಾಡಿದ ಕೇಸ್ ಆಗಿತ್ತು. ಪುಷ್ಪಾ ಅನ್ನುವ ಹುಡುಗಿಗೆ ಬ್ಲಾಕ್ ಮೇಲ್ ಮಾಡುವ ಪ್ರಯತ್ನ ಮಾಡಿದಾರೆ. ಒಟ್ಟು ನಾಲ್ಕು ಪ್ರಕರಣ ಹಾನಗಲ್​ನಲ್ಲೇ ನಡೆದಿದೆ ಎಂದಿದ್ದಾರೆ.

ಸಂತ್ರಸ್ಥೆಗೆ 25 ಸಾವಿರ ರೂ. ಪರಿಹಾರ

ಇಂಥ ಪ್ರಕರಣದಲ್ಲಿ ರಾಜಿ ಮಾಡಲು ಬಂದವರನ್ನೂ ಆರೋಪಿಗಳನ್ನಾಗಿ ಮಾಡಬೇಕು. ಇದು ಕಾಂಗ್ರೆಸ್ ಸರ್ಕಾರದ ಮುಖವಾಡ. ಆರೋಪಿಗಳಿಗೆ ಕುಮ್ಮಕ್ಕು ನೀಡುವ ಸರ್ಕಾರ. ಇಲಾಖೆ ಏನು ಮಾಡುತ್ತಿದೆ? ಸರ್ಕಾರ ಸತ್ತು ಹೋಗಿದೆ. ಪಿಎಫ್​ಐ ಜೊತೆ ಆರೋಪಿಗಳ ಲಿಂಕ್ ಇದೆ ಅಂತ ಮಾಹಿತಿ ಇದೆ. ಮೊದಲು ತನಿಖೆ ಆಗಲಿ ಪರಿಹಾರ ಯಾರನ್ನ ಕೇಳಬೇಕು? ಜಿಲ್ಲಾ ಉಸ್ತುವಾರಿನೇ ಬಂದಿಲ್ಲ. ಆ ಸಹೋದರಿನ ಭೇಟಿ ಮಾಡಿ ಸಾಂತ್ವನ ಹೇಳುತ್ತೇವೆ. ನಮ್ಮ ಜಿಲ್ಲೆಯ ಬಿಜೆಪಿ ವತಿಯಿಂದ ಸಂತ್ರಸ್ಥೆಗೆ 25 ಸಾವಿರ ರೂ. ಪರಿಹಾರ ಕೊಡುತ್ತೇವೆ ಎಂದು ಹೇಳಿದ್ದಾರೆ.

ವರದಿ: ರವಿ ಹೂಗಾರ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:42 pm, Sat, 13 January 24