2004ರಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ರಾಜಶೇಖರ ಸಿಂಧೂರ ಆಯ್ಕೆಯಾಗಿದ್ದರು. ಸಂಜೆ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ, ಭೇಟಿ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಮಾಜಿ ಶಾಸಕ ರಾಜಶೇಖರ ಸಿಂಧೂರ ನಿಧನ ಹಿನ್ನೆಲೆ ಇಂದು ಮಧ್ಯಾಹ್ನ 2.30ಕ್ಕೆ ಹಾವೇರಿಗೆ ತೆರಳಲಿರುವ ಸಿಎಂ ಬೊಮ್ಮಾಯಿ ಅವರು ಸಂಜೆ 4.30ಕ್ಕೆ ಹಾವೇರಿ ಜಿಲ್ಲೆಯ ಸವಣೂರಿಗೆ ಭೇಟಿ ನೀಡಲಿದ್ದು, ಅಂತಿಮ ದರ್ಶನ ಪಡೆಯಲಿದ್ದಾರೆ.