ಹಾವೇರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. 51 ವರ್ಷದ ವೀರನಗೌಡ ಪಾಟೀಲ ನೇಣಿಗೆ ಶರಣಾಗಿದ್ದಾನೆ.
ಆರು ಎಕರೆ ಜಮೀನು ಹೊಂದಿದ್ದ ರೈತ ವೀರನಗೌಡ, ಬ್ಯಾಂಕ್ ಮತ್ತು ಕೈಸಾಲ ಅಂತಾ ಸುಮಾರು 11 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ. ಇತ್ತೀಚೆಗೆ ಮೆಕ್ಕೆಜೋಳ ಬೆಳೆ ಹಾಳಾಗಿದ್ದರಿಂದ ಬೇಸತ್ತು ಯಾರು ಇಲ್ಲದ ವೇಳೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ಪತ್ರೆಗೆ ಶಾಸಕ ಬಿ.ಸಿ.ಪಾಟೀಲ್ ಭೇಟಿ ನೀಡಿ ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಘಟನೆ ಸಂಬಂಧ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 7:14 pm, Tue, 21 January 20