ಶಾಸಕ ನೆಹರು ಓಲೇಕಾರ ಕುಟುಂಬದಿಂದ ದಬ್ಬಾಳಿಕೆ ಆರೋಪ: ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು

| Updated By: ವಿವೇಕ ಬಿರಾದಾರ

Updated on: Jun 14, 2022 | 3:56 PM

ಶಾಸಕ ನೆಹರು ಓಲೇಕಾರ ಕುಟುಂಬದ ವಿರುದ್ಧ ಜಮೀನಿಗಾಗಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದ ನಿವಾಸಿಗಳ ಮೇಲೆ ದಬ್ಬಾಳಿಕೆ ನಡೆಸಿರುವ ಆರೋಪ ಕೇಳಿಬಂದಿದ್ದು, ಕಿರುಕುಳ ತಾಳಲಾರದೆ  ನಾಲ್ವರು ಗ್ರಾಮಸ್ಥರು ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಶಾಸಕ ನೆಹರು ಓಲೇಕಾರ ಕುಟುಂಬದಿಂದ ದಬ್ಬಾಳಿಕೆ ಆರೋಪ: ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು
ಶಾಸಕ ನೆಹರು ಓಲೆಕಾರ
Image Credit source: Vartha Bharthi
Follow us on

ಹಾವೇರಿ: ಶಾಸಕ ನೆಹರು ಓಲೇಕಾರ (MLA Neharu Olekar) ಕುಟುಂಬದ ವಿರುದ್ಧ ಜಮೀನಿಗಾಗಿ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ (Byadagi) ತಾಲೂಕಿನ ಶಿಡೇನೂರು ಗ್ರಾಮದ ನಿವಾಸಿಗಳ ಮೇಲೆ ದಬ್ಬಾಳಿಕೆ ನಡೆಸಿರುವ ಆರೋಪ ಕೇಳಿಬಂದಿದ್ದು, ಕಿರುಕುಳ ತಾಳಲಾರದೆ  ನಾಲ್ವರು ಗ್ರಾಮಸ್ಥರು ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಪಾಂಡಪ್ಪ ಲಮಾಣಿ (70), ಗುರುಚಪ್ಪ ಲಮಾಣಿ (72), ಗಂಗವ್ವ ಕಬ್ಬೂರು (65) ಮತ್ತು ಹನುಮಂತಪ್ಪ ಬಡಿಗೇರ (41) ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು ನಾಲ್ವರಿಗೆ   ಬ್ಯಾಡಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಾಲ್ವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನು ಓದಿ: ರಾಹುಲ್, ಸೋನಿಯಾ ಗಾಂಧಿಯ ಆತ್ಮವಿಶ್ವಾಸ ಕುಗ್ಗಿಸಲು ಇಡಿ ದಾಳಿ; ಮಲ್ಲಿಕಾರ್ಜುನ ಖರ್ಗೆ ಆರೋಪ

ಗ್ರಾಮದ 29 ಕುಟುಂಬಗಳು ಅಕ್ರಮ ಸಕ್ರಮ ಜಮೀನು ಸಾಗುವಳಿ ಮಾಡುತ್ತಿದ್ದವು, ಈ ಸಂಬಂಧ ಎಲ್ಲರೂ ತಲಾ 15 ಗುಂಟೆ ಜಮೀನು ಬಿಟ್ಟುಕೊಡುವಂತೆ ಬಿಜೆಪಿ ಶಾಸಕ ನೆಹರು ಓಲೇಕಾರ ಮತ್ತು ಮಕ್ಕಳಿಂದ ದಬ್ಬಾಳಿಕೆ ನಡೆಯುತ್ತಿತ್ತು.  ಈ 29 ಕುಟುಂಬಗಳ ಕೃಷಿಗೆ ಗ್ರಾಮದ ಜನರು ಸಹಕಾರ ಕೊಡದಂತೆ ಓಲೇಕಾರ ಕುಟುಂಬಸ್ಥರು ಮಾಡಿದ್ದರು ಎಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬಸ್ಥರ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಆದರೆ ಈ ಆರೋಪವನ್ನು ಹಾವೇರಿ ಶಾಸಕ ನೆಹರು ಓಲೇಕಾರ ಅಲ್ಲೆಗೆಳದಿದ್ದಾರೆ.

ಈ ಸಂಬಂಧ ಮಾತನಾಡಿದ ಶಾಸಕ ನೆಹರು ಓಲೇಕಾರ ನಾವೆ ಹೊಲ ಕೊಡಿಸಿದ್ವಿ, ನಾವ್ಯಾಕೆ ಅವರಿಗೆ ಕೇಳೋಣ. ನಾವ್ಯಾರಿಗೂ ಬಿಟ್ಟು ಕೊಡಲು ಹೇಳಿಲ್ಲ. ‘ಕೈ’ ಮುಖಂಡರೊಬ್ಬರ ಕುಮ್ಮಕ್ಕಿನಿಂದ ಹೀಗೆ ಹೇಳುತ್ತಿದ್ದಾರೆ. ಊರಿನ ಅಭಿವೃದ್ಧಿ ಸಲುವಾಗಿ ಇಟ್ಟಿರುವ ಜಮೀನು ಒತ್ತುವರಿ ಮಾಡಲಾಗಿದೆ. ಅದಕ್ಕೆ ಊರಿನವರು ಅವಕಾಶ ಕೊಡುತ್ತಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Tue, 14 June 22