AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿ: 4 ಎಕರೆ ಜಮೀನಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮ

ಕಬ್ಬಿನ ಗದ್ದೆಗೆ ಬೆಂಕಿ ತಗುಲಿ 4 ಎಕರೆ ಕಬ್ಬು ಬೆಂಕಿಗಾಹುತಿಯಾಗಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ಮೌಲ್ಯದ ಕಬ್ಬು ಬೆಳೆ ನಾಶವಾಗಿರುವಂತಹ ಘಟನೆ ಹಾವೇರಿ ತಾಲ್ಲೂಕಿನ ಎಂ.ಎ. ತಿಮ್ಮಾಪುರ ಗ್ರಾಮದ ಬಳಿ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿ: 4 ಎಕರೆ ಜಮೀನಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮ
ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಗದ್ದೆಗೆ ಬೆಂಕಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 16, 2023 | 8:39 PM

Share

ಹಾವೇರಿ: ಕಬ್ಬಿನ ಗದ್ದೆಗೆ (sugarcane field) ಬೆಂಕಿ ತಗುಲಿ 4 ಎಕರೆ ಕಬ್ಬು ಬೆಂಕಿಗಾಹುತಿಯಾಗಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ಮೌಲ್ಯದ ಕಬ್ಬು ಬೆಳೆ ನಾಶವಾಗಿರುವಂತಹ ಘಟನೆ ಹಾವೇರಿ ತಾಲ್ಲೂಕಿನ ಎಂ.ಎ. ತಿಮ್ಮಾಪುರ ಗ್ರಾಮದ ಬಳಿ ನಡೆದಿದೆ. ವೀರಬಸಪ್ಪ ಕರೇಗೌಡರ ಎಂಬ ರೈತನಿಗೆ ಕಬ್ಬಿನ ಗದ್ದೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿ ಕಬ್ಬಿನ ಗದ್ದೆ ಸುಟ್ಟುಭಸ್ಮವಾಗಿದೆ ಎನ್ನಲಾಗುತ್ತಿದೆ. ಬೆಂಕಿ ನಂದಿಸಲು ರೈತರು ಹರಸಾಹಸ ಪಟ್ಟಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದರು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ರೀತಿ ಕಬ್ಬಿನ ಗದ್ದೆಗೆ ಬೆಂಕಿ ತಗುಲಿರುವುದು ಇದೇ ಮೊದಲೇನಲ್ಲ ಅನೇಕ ಘಟನೆಗಳು ಈ ಹಿಂದೆ ಕೂಡ ನಡೆದಿವೆ. ಇತ್ತೀಚೆಗೆ ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿಬಿದ್ದಿದ್ದು, ನಾಲ್ಕು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿತ್ತು. ಚಡಚಣ ತಾಲ್ಲೂಕಿನ ಉಮರಜ ಗ್ರಾಮದಲ್ಲಿ ದುರ್ಘಟನೆ ನಡೆದಿತ್ತು. ರೈತರಿಗೆ ಸುಮಾರು 8 ಲಕ್ಷ ರೂಪಾಯಿ ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಚಡಚಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Hangal: ಮೆಕ್ಕೆಜೋಳ ರಾಶಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು: 3 ಲಕ್ಷಕ್ಕೂ ಅಧಿಕ ಮೌಲ್ಯದ ತೆನೆರಾಶಿ ಬೆಂಕಿಗಾಹುತಿ

ಚಲಿಸುತ್ತಿದ್ದ ಲಾರಿ ಹಿಂದೆ ಬಂದು ಅವಾಂತರ 

ಚಿಕ್ಕಬಳ್ಳಾಫುರ: ಚಲಿಸುತ್ತಿದ್ದ ಲಾರಿ ಇದ್ದಕ್ಕಿದ್ದಂತೆ ಹಿಂದಕ್ಕೆ ಚಲಿಸಿದ ಹಿನ್ನಲೆ ಹಿಂದೆ ಬರ್ತಿದ್ದ ಕಾರಿನ ಮೇಲೆ ಹರಿದು ಅವಾಂತರ ಸೃಷ್ಟಿಸಿರುವಂತಹ ಘಟನೆ ಚಿಕ್ಕಬಳ್ಳಾಫುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಕಣಿವೆ ಪ್ರದೇಶದಲ್ಲಿ ನಡೆದಿದೆ.  ಕಾರಿನಲ್ಲಿದ್ದ ಇಬ್ಬರು ನರ್ಸಗಳು ಹಾಗೂ ಚಾಲಕ ಪ್ರಾಣಾಪಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಓರ್ವ ವೈದ್ಯಕೀಯ ಸಿಬ್ಬಂದಿ ಸ್ಥಿತಿ ಗಂಭೀರವಾಗಿದ್ದು, ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಸೇರಿದ ಕಾರು ಹಾಗೂ ಸಿಬ್ಬಂದಿಗಳು ಎಂದು ಗುರುತಿಸಲಾಗಿದೆ. ಲಾರಿ ಹಾಗೂ ಬೆಟ್ಟದ ಮದ್ಯೆ ಸಿಲುಕಿದ್ದ ಕಾರು ಅಪ್ಪಚ್ಚಿಯಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ

ಕಾರವಾರ: ರೈಲು ನಿಲುಗಡೆಗೆ ಆಗ್ರಹಿಸಿ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡ ನಿಲ್ದಾಣದಲ್ಲಿ ರೈಲು ತಡೆ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಪದ್ಮಶ್ರೀ ಪುರಸ್ಕೃತರಾದ ಸುಕ್ರಜ್ಜಿ ಮತ್ತು ತುಳಸಜ್ಜಿ ಪಾಲ್ಗೊಂಡರು. ಕೊಂಕಣ ಮಾರ್ಗದಲ್ಲಿ ಸಂಚರಿಸುವ ಗೋವಾದ ಮಡಗಾಂವ್​ನಿಂದ ಮಂಗಳೂರಿಗೆ ಮೆಮೊ ರೈಲು ನಿಲುಗಡೆಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗಿದೆ. ಎರಡು ವರ್ಷಗಳ ನಂತರ ಸಂಚಾರ ಆರಂಭಿಸಿದ ಮೆಮೊ ರೈಲು ಲಾಕ್​ಡೌನ್​ಗೂ ಮುನ್ನ ಹಾರವಾಡ ರೈಲ್ವೇ ನಿಲ್ದಾಣದಲ್ಲಿ ನಿಲುಗಡೆಯಾಗುತ್ತಿತ್ತು.

ಆದರೆ ಈಗ ಮೆಮೊ ರೈಲು ನಿಲುಗಡೆಗೆ ಅವಕಾಶವನ್ನು ರೈಲ್ವೇ ಇಲಾಖೆ ನಿರಾಕಿರಿಸಿದೆ. ರೈಲ್ವೇ ಇಲಾಖೆಯ ನೀತಿಯನ್ನ ಖಂಡಿಸಿ ಇಂದು ಹಾರವಾಡ ಮತ್ತು‌ ಸುತ್ತಮುತ್ತಲಿನ ಗ್ರಾಮಸ್ಥರು ರೈಲು ರೋಕೋ ಪ್ರತಿಭಟನೆ ನಡೆಸಿ ರೈಲ್ವೇ ನಿಲುಗಡೆಗೆ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.