Rat Fever: ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ, ಚಿಕಿತ್ಸೆ ಫಲಿಸದೆ ವೃದ್ಧ ಸಾವು

ಇತ್ತೀಚೆಗೆ ಹಾವೇರಿ ಜಿಲ್ಲೆಯ 12 ವರ್ಷದ ಬಾಲಕನಿಗೆ ಇಲಿ ಜ್ವರ ಬಂದಿದ್ದು ಪತ್ತೆಯಾಗಿತ್ತು. ಆದರೆ ಈಗ ಇಲಿ ಜ್ವರಕ್ಕೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಇಲಿ ಜ್ವರ ಹಾಗೂ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

Rat Fever: ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ, ಚಿಕಿತ್ಸೆ ಫಲಿಸದೆ ವೃದ್ಧ ಸಾವು
ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ
Follow us
| Updated By: ಆಯೇಷಾ ಬಾನು

Updated on: Jul 08, 2024 | 2:13 PM

ಹಾವೇರಿ, ಜುಲೈ.08: ರಾಜ್ಯಾದ್ಯಂತ ಡೆಂಗ್ಯೂ (Dengue) ಮಹಾಮಾರಿ ರುದ್ರನರ್ತನ ಹೆಚ್ಚಾಗಿದೆ. ಡೆಂಗ್ಯೂ ಜ್ವರಕ್ಕೆ ಮಕ್ಕಳ ಸಾವು ಹೆಚ್ಚಾಗುತ್ತಿವೆ. ಅದರ ನಡುವೆ ಈಗ ಹಾವೇರಿ (Haveri) ಜಿಲ್ಲೆಯಲ್ಲಿ ಇಲಿ ಜ್ವರ (Rat Fever) ಪತ್ತೆಯಾಗಿದ್ದು ಮೊದಲ ಬಲಿ ಬಿದ್ದಿದೆ. ಡೆಂಗ್ಯೂ, ಇಲಿ ಜ್ವರ ಜಿಲ್ಲೆಯ ಜನರ ಆತಂಕ ಹೆಚ್ಚಿಸಿದೆ. ನಿನ್ನೆಯಷ್ಟೇ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು. ಈಗ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ. ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್(72) ಎಂಬ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಉಮೇಶ್‌ ಅವರು ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ರಕ್ತ ತಪಾಸಣೆ ನಡೆಸಿದಾಗ ಇಲಿ ಜ್ವರ ಇರುವುದು ದೃಢಪಟ್ಟಿತ್ತು. ಇಲಿ ಜ್ವರದ ಜೊತೆ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇಲಿ ಜ್ವರದಿಂದ ವೃದ್ಧ ಸಾವು ಹಿನ್ನೆಲೆ ಹಾವೇರಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

ರಾಜ್ಯಾದ್ಯಂತ ಕಳೆದ ಒಂದು ತಿಂಗಳಿನಿಂದ ಡೆಂಗ್ಯೂ ಜ್ವರದ ಕಾಟ ಹೆಚ್ಚಾಗಿದೆ. ರಾಜ್ಯದಲ್ಲಿ ಡೆಂಗ್ಯೂನಿಂದ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗ ಡೆಂಗ್ಯೂ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಜನರನ್ನು ಮತ್ತಷ್ಟು ಆತಂಕಗೊಳ್ಳುವಂತೆ ಮಾಡಿದೆ. ಇತ್ತೀಚೆಗೆ ಹಾವೇರಿ ತಾಲೂಕಿನ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಆದರೆ ಕಳೆದ 2 ದಿನಗಳ ಹಿಂದೆ ಮಂಗಳೂರಿನಲ್ಲಿ ಹಾವೇರಿ ನಿವಾಸಿ ಇಲಿ ಜ್ವರಕ್ಕೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ ಮರಣ ಮೃದಂಗ; ಹಾವೇರಿ ಜಿಲ್ಲೆಯಲ್ಲಿ ಡೆಂಘೀಗೆ 13 ವರ್ಷದ ಬಾಲಕ ಬಲಿ

ಇನ್ನು ಮತ್ತೊಂದೆಡೆ ಇಲಿ ಜ್ವರ ಕಾಣಿಸಿಕೊಂಡ ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಹಾವೇರಿ ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ. ಮೊದಲು 12 ವರ್ಷದ ಬಾಲಕನಿಗೆ ಜಾಂಡೀಸ್ ರೋಗ ಕಾಣಿಸಿಕೊಂಡಿತ್ತು. ರೋಗ ಗುಣಮುಖಗೊಂಡು ಊರಿಗೆ ಹೋಗಿದ್ದ. ಮತ್ತೆ ಬಾಲಕನಲ್ಲಿ ಜ್ವರ ಕಾಣಿಸಿಕೊಂಡ ಹಿನ್ನಲೆ ಜಿಲ್ಲಾಸ್ಪತ್ರೆಗೆ ದಾಖಲಿದ್ದಾರೆ. ಬಾಲಕನ ರಕ್ತಪರೀಕ್ಷೆಯ ನಂತರ ಬಾಲಕನಿಗೆ ಇಲಿ ಜ್ವರ ಪತ್ತೆಯಾಗಿದೆ. ಬಾಲಕ ಆರೋಗ್ಯ ಸ್ಥಿರವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಬಾಲಕ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹಾವೇರಿ ಜಿಲ್ಲಾಸ್ಪತ್ರೆಯ ವಾರ್ಡ್ ಸಂಪೂರ್ಣ ತುಂಬಿ ಹೋಗಿದ್ದು, ಕೊಠಡಿಯ ಹೊರಗೆ ಬೆಡ್ ಹಾಕಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈಗ ಡೆಂಘಿ ಜೊತೆಗೆ ಇಲಿ ಜ್ವರ ಕಾಣಿಸಿಕೊಂಡಿದ್ದು, ಜನರ ಆತಂಕವನ್ನ ಹೆಚ್ಚು ಮಾಡಿದೆ. 12 ವರ್ಷದ ಬಾಲಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬಾಲಕನ ಆರೋಗ್ಯ ಸ್ಥಿರವಾಗಿದೆ. ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸುತ್ತಮುತ್ತಲಿನ ಪರಿಸರವನ್ನ ಸ್ವಚ್ಚವಾಗಿ ಇಟ್ಟಕೊಳ್ಳಬೇಕು. ಇಲಿ ಓಡಾಡುವ ಜಾಗವನ್ನ ಸ್ವಚ್ಚ ಮಾಡಬೇಕು. ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ