AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಬರ್ತಡೇ ಪ್ರಯುಕ್ತ ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ ಬಣ್ಣ ಹಚ್ಚಿಸಿದ ಮುಖ್ಯಶಿಕ್ಷಕಿ

ಹಾವೇರಿಯ ಹಂಸಭಾವಿ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಮುಖ್ಯಶಿಕ್ಷಕಿ ಮಗನ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಸ್ವಂತ ಹಣದಲ್ಲಿ ಇಡೀ ಶಾಲೆಗೆ ಬಣ್ಣ ಮಾಡಿಸುವ ಮೂಲಕ ಹೊಸ ರೂಪ ನೀಡಿದ್ದಾರೆ. ಈ ಮಾದರಿ ಕಾರ್ಯದಿಂದ ಮಕ್ಕಳು ಖುಷಿಯಿಂದ ಶಾಲೆಗೆ ಬರುತ್ತಿದ್ದಾರೆ. ಶಿಕ್ಷಕಿಯ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಗನ ಬರ್ತಡೇ ಪ್ರಯುಕ್ತ ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ ಬಣ್ಣ ಹಚ್ಚಿಸಿದ ಮುಖ್ಯಶಿಕ್ಷಕಿ
ಮುಖ್ಯಶಿಕ್ಷಕಿ ಉಮೈ ಸಲ್ಮಾ ಕಡೂರುImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Jul 08, 2026 | 10:41 PM

Share

ಮುಖ್ಯಾಂಶಗಳು

  • ಸರ್ಕಾರಿ ಶಾಲೆಗೆ ಹೊಸ ಕಳೆ ನೀಡಿದ ಮುಖ್ಯಶಿಕ್ಷಕಿ
  • ಮಗನ ಜನ್ಮದಿನ ಪ್ರಯುಕ್ತ ಶಾಲೆಗೆ ಬಣ್ಣ
  • ಮುಖ್ಯಶಿಕ್ಷಕಿಯ ಕಾರ್ಯಕ್ಕೆ ಮೆಚ್ಚುಗೆ

ಹಾವೇರಿ, ಜುಲೈ 08: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ (government school) ಮೂಗು ಮುರಿಯುವವರೇ ಹೆಚ್ಚಾಗಿದ್ದಾರೆ. ಮೂಲಸೌಕರ್ಯಗಳ ಕೊರತೆ ಎಂಬ ಕಾರಣಕ್ಕೆ ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬರು ಮುಖ್ಯಶಿಕ್ಷಕಿ ತಮ್ಮ ಸ್ವಂತ ಮಗನ ಜನ್ಮದಿನದ ಆಚರಣೆಯ ದುಂದುವೆಚ್ಚಕ್ಕೆ ಬ್ರೇಕ್ ಹಾಕಿ, ಆ ಹಣದಲ್ಲಿ ತಾವು ಸೇವೆ ಸಲ್ಲಿಸುತ್ತಿರುವ ಶಾಲೆಗೆ ಬಣ್ಣ ಬಳಿಯುವ ಮೂಲಕ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಶಾಲೆಯ ಗೋಡೆಗಳಿಗೆ ರೈಲ್ವೆ ಡಬ್ಬಿಯ (ಕೋಚ್) ರೂಪ ನೀಡಿ ಸರ್ಕಾರಿ ಶಾಲೆಗೆ ಹೊಸ ಕಳೆ ತಂದಿದ್ದಾರೆ.

ಬಣ್ಣವಿಲ್ಲದೇ ಕಳೆಗುಂದಿದ್ದ ಶಾಲೆ

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದ ಸರ್ಕಾರಿ ಉರ್ದು ಶಾಲೆಗೆ ಇದೀಗ ಹೊಸ ಕಳೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕಿ ಉಮೈ ಸಲ್ಮಾ ಕಡೂರು ತಮ್ಮ ಮಗ ಮಲ್ಲೀಕ್ ರೆಹನ್ (26) ಜನ್ಮದಿನ ಪ್ರಯುಕ್ತ ಶಾಲೆಗೆ ಬಣ್ಣ ಮಾಡಿಸಿದ್ದಾರೆ. ಮುಖ್ಯಶಿಕ್ಷಕಿ ಉಮೈ ಸಲ್ಮಾ ಕಡೂರು ಕಳೆದ ನಾಲ್ಕು ವರ್ಷಗಳಿಂದ ಇದೇ ಶಾಲೆಯಲ್ಲಿ ಮುಖ್ಯಶಿಕ್ಷಕಿ ಆಗಿದ್ದಾರೆ. ಈ ಶಾಲೆಯ ಕೊಠಡಿಗಳಿಗೆ ಸರಿಯಾಗಿ ಬಣ್ಣ ಬಳಿಯದ ಕಾರಣ ಶಾಲಾ ಆವರಣ ಕಳೆಗುಂದಿತ್ತು. ಇದರ ಬಗ್ಗೆ ಪೋಷಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಚಡ್ಡಿ’ ಮುಜುಗರ! 7ನೇ ತರಗತಿ ಬಾಲಕರಿಗೂ ಹಾಫ್ ಪ್ಯಾಂಟ್ ಬಟ್ಟೆ ವಿತರಣೆ, ಪೋಷಕರಿಗೆ ಇಕ್ಕಟ್ಟು

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾದ ಮುಖ್ಯಶಿಕ್ಷಕಿ ಉಮೈ ಸಲ್ಮಾ, ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. “ನೀವು ಶಾಲೆಯ ವಾರ್ಷಿಕೋತ್ಸವದ ಖರ್ಚು-ವೆಚ್ಚಗಳನ್ನು ನೋಡಿಕೊಳ್ಳಿ, ನಾನು ನನ್ನ 26 ವರ್ಷದ ಮಗ ಮಲ್ಲಿಕ್ ರೆಹನ್ ಹುಟ್ಟಹಬ್ಬದ ನೆನಪಿಗಾಗಿ ಶಾಲೆಗೆ ಸಂಪೂರ್ಣ ಬಣ್ಣ ಹಚ್ಚಿಸುವ ಜವಾಬ್ದಾರಿ ಹೊರುತ್ತೇನೆ” ಎಂದು ತಿಳಿಸಿದ್ದರು. ಅದರಂತೆ ತಮ್ಮ ಸ್ವಂತ ಉಳಿತಾಯದ ಸುಮಾರು 2 ಲಕ್ಷ ರೂ ಹಣವನ್ನು ಖರ್ಚು ಮಾಡಿ ಇಡೀ ಶಾಲೆಗೆ ಹೊಸ ರೂಪ ನೀಡಿದ್ದಾರೆ.

Paint

  90ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ

ಈ ಸರ್ಕಾರಿ ಉರ್ದು ಶಾಲೆಯಲ್ಲಿ 1 ರಿಂದ 7ನೇ ತರಗತಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 90ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಇದೀಗ ಶಾಲೆಗೆ ಬಣ್ಣ ಹಚ್ಚಿದಕ್ಕೆ ಮಕ್ಕಳೂ ಖುಷಿಯಾಗಿದ್ದಾರೆ. ಶಾಲೆಗೆ ಆಗಮಿಸುತ್ತಿದ್ದಂತೆ ರೈಲ್ವೆ ಡಬ್ಬಿಯಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದೇವೆ ಎನ್ನುವ ಮನೋಭಾವ ಮಕ್ಕಳಲ್ಲಿ ಉಂಟಾಗಿದೆ.‌ ಆ ಮೂಲಕ ಸರ್ಕಾರಿ ಶಾಲೆಗೆ ಮಕ್ಕಳು ಬರುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಮೋಡ ಬಿತ್ತನೆಗೆ ಚಾಲನೆ ಬೆನ್ನಲ್ಲೇ ಸುರಿದ ಮಳೆ: ಪ್ರಯತ್ನ ಫಲ ನೀಡಿದೆ ಎಂದ ಶಾಸಕ; ರೈತರೂ ಖುಷ್​

ಒಟ್ಟಿನಲ್ಲಿ ಮಗನ ಹುಟ್ಟಹಬ್ಬದ ಹೆಸರಿನಲ್ಲಿ ಅನಗತ್ಯ ಹಣ ಪೋಲು ಮಾಡದೆ, ತಾವು ಕರ್ತವ್ಯ ನಿರ್ವಹಿಸುವ ಶಾಲೆಯನ್ನೇ ಸೃಜನಾತ್ಮಕವಾಗಿ ಸಕಲ ಸೌಂದರ್ಯದೊಂದಿಗೆ ಕಂಗೊಳಿಸುವಂತೆ ಮಾಡಿದ ಮುಖ್ಯಶಿಕ್ಷಕಿ ಉಮೈ ಸಲ್ಮಾ ಅವರ ಕಾರ್ಯಕ್ಕೆ ಹಂಸಭಾವಿ ಗ್ರಾಮಸ್ಥರು ಹಾಗೂ ಸಾರ್ವಜನಿಕ ವಲಯದಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ