AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ: ಕೊನೆಗೂ 58 ದಿನಗಳ ಬಳಿಕ ಚಾರ್ಜ್​ಶೀಟ್ ಸಲ್ಲಿಸಿದ ಪೊಲೀಸರು, ಯಾರ ಹೆಸರೆಲ್ಲ ಇದೆ ನೋಡಿ

Hanagal Gang Rape Case: ರಾಜ್ಯದಾದ್ಯಂತ ಬಹಳಷ್ಟು ಸದ್ದು ಮಾಡಿದ್ದ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದರಲ್ಲಿ ಏಳು ಮಂದಿಯನ್ನು ಪ್ರಮುಖ ಆರೋಪಿಗಳನ್ನಾಗಿ ಉಲ್ಲೇಖಿಸಲಾಗಿದೆ. ಚಾರ್ಜ್ ಶೀಟ್​ನಲ್ಲಿ ಏನಿದೆ? ಪ್ರಮುಖ ಆರೋಪಿಗಳು ಯಾರೆಲ್ಲಾ ಇತ್ಯಾದಿ ವಿವರಗಳು ಇಲ್ಲಿವೆ.

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ: ಕೊನೆಗೂ 58 ದಿನಗಳ ಬಳಿಕ ಚಾರ್ಜ್​ಶೀಟ್ ಸಲ್ಲಿಸಿದ ಪೊಲೀಸರು, ಯಾರ ಹೆಸರೆಲ್ಲ ಇದೆ ನೋಡಿ
ಸಾಂದರ್ಭಿಕ ಚಿತ್ರ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Mar 08, 2024 | 11:37 AM

Share

ಹಾವೇರಿ, ಮಾರ್ಚ್​ 8: ರಾಜ್ಯದಾದ್ಯಂತ ಸಂಚಲನ ಸೃಷ್ಟಿಸಿದ್ದ, ರಾಜಕೀಯವಾಗಿಯೂ ಬಹಳ ಚರ್ಚೆಗೆ ಗ್ರಾಸವಾಗಿದ್ದ ಹಾವೇರಿಯ ಹಾನಗಲ್ ಸಾಮೂಹಿಕ ಅತ್ಯಾಚಾರ (Hanagal Gangrape Case) ಪ್ರಕರಣದಕ್ಕೆ ಸಂಬಂಧಿಸಿ ಕೊನೆಗೂ ಪೊಲೀಸರು ಚಾರ್ಜ್​ಶೀಟ್ (Charge Sheet) ಸಲ್ಲಿಸಿದ್ದಾರೆ. ಗ್ಯಾಂಗ್​ರೇಪ್ ಘಟನೆ ನಡೆದು 58 ದಿನಗಳ ಬಳಿಕ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ. ಹಾನಗಲ್ ಜೆಎಂಎಫ್ ಕೋರ್ಟ್​ಗೆ (Hanagal JMF Court) 873 ಪುಟಗಳ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಜನವರಿ 8ರಂದು ಹಾನಗಲ್ ಬಳಿ ಶಿರಸಿ ಮೂಲದ ಮುಸ್ಲಿಂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು.

ಪ್ರಕರಣ ಸಂಬಂಧ 19 ಆರೋಪಿಗಳನ್ನು ಹಾನಗಲ್ ಪೊಲೀಸರು ಬಂಧಿಸಿದ್ದರು. ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದ್ದ 7 ಪ್ರಮುಖ ಆರೋಪಿಗಳು ಸೇರಿ ಒಟ್ಟು 19 ಮಂದಿಯ ಹೆಸರು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ವಿಚಾರಣೆ ವೇಳೆ 7 ಪ್ರಮುಖ ಆರೋಪಿಗಳನ್ನು ಸಂತ್ರಸ್ತೆ ಗುರುತಿಸಿದ್ದರು.

ಘಟನೆ ಸಂಬಂಧ ತನಿಖೆಯನ್ನು 20 ದಿನಗಳ ಹಿಂದೆಯೇ ಹಾನಗಲ್ ಪೊಲೀಸರು ಪೂರ್ಣಗೊಳಿಸಿದ್ದರು. ಆದರೆ ಎಫ್​​ಎಸ್​ಎಲ್ ವರದಿ ಹಾಗೂ ಡಿಎನ್​ಎ ವರದಿಗಳಿಗಾಗಿ ಪೊಲೀಸರು ಕಾದುಕುಳಿತಿದ್ದರು. ಇದೀಗ ಅವುಗಳು ದೊರೆಯುತ್ತಿದ್ದಂತೆಯೇ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

ಅತ್ಯಾಚಾರ ಎಸಗಿದ್ದಾರೆ ಎನ್ನಲಾದ 7 ಪ್ರಮುಖ ಆರೋಪಿಗಳ ಹೆಸರುಗಳನ್ನು ಚಾರ್ಜ್​ಶೀಟ್​​​ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಮುಖ 7 ಆರೋಪಿಗಳು ಯಾರೆಲ್ಲ?

ಪೊಲೀಸರು ಚಾರ್ಜ್​ಶೀಟ್​​​ನಲ್ಲಿ ಉಲ್ಲೇಖಿಸಿರುವ ಪ್ರಕಾರ, ಅಫ್ತಾಬ್ ಚಂದನಕಟ್ಟಿ, ಮದರ್​ಸಾಬ್ ಮಂಡಕ್ಕಿ, ಸಮೀವುಲ್ಲಾ ಲಾಲಾನವರ, ಶೋಯೆಬ್ ನಿಯಾಜ್ ಅಹ್ಮದ್ ಮುಲ್ಲಾ, ಮೊಹಮ್ಮದ್ ಸಾದೀಕ್, ತೌಷಿಪ್, ರಿಯಾಜ್ ಸಾವಿಕೇರಿ ಪ್ರಮುಖ ಆರೋಪಿಗಳಾಗಿದ್ದಾರೆ.

ರಾಜ್ಯಾದ್ಯಂತ ಸದ್ದು ಮಾಡಿದ್ದ ಪ್ರಕರಣ

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯದಾದ್ಯಂತ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪ್ರತಿಪಕ್ಷ ಬಿಜೆಪಿ ಕೂಡ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿತ್ತು.

ಇದನ್ನೂ ಓದಿ: ಹಾನಗಲ್ ಗ್ಯಾಂಗ್ ರೇಪ್: ನಮ್ಮ ಬಾಯಿ ಮುಚ್ಚಿಸಲು 50 ಲಕ್ಷ ರೂ. ಆಮಿಷ: ಸಂತ್ರಸ್ತೆ ಪತಿ ಗಂಭೀರ ಆರೋಪ

ಪ್ರಕರಣವನ್ನು ಮುಚ್ಚಿ ಹಾಕಲು ನಮಗೆ 50 ಲಕ್ಷ ರೂಪಾಯಿವರೆಗೆ ಆಮಿಷವೊಡ್ಡಲಾಗಿತ್ತು ಎಂದು ಸಂತ್ರಸ್ತೆಯ ಪತಿ ನಂತರದಲ್ಲಿ ಹೇಳಿದ್ದರು. ಮೂರ್ನಾಲ್ಕು ಬಾರಿ ನನಗೆ ಗೊತ್ತಿಲ್ಲದ ಹಾಗೆ ಪತ್ನಿಗೆ ಆಮಿಷ ಒಡ್ಡಿದ್ದರು. ಆದರೆ ಅವಳು ಅವರ ಆಮಿಷಕ್ಕೆ ಬಗ್ಗದೆ ನನಗೆ ಮಾಹಿತಿ ನೀಡಿದ್ದರು. ಅವರ ಆಮಿಷಕ್ಕೆ ನಾವು ಒಪ್ಪಿಲ್ಲ. ನಮಗೆ ನ್ಯಾಯ ಬೇಕು ಹಣವಲ್ಲ ಎಂದು ಸಂತ್ರಸ್ತೆಯ ಪತಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್