AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನಗಲ್​​ ಗ್ಯಾಂಗ್​ರೇಪ್ ಕೇಸ್: ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ, ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ -ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದು ಆರೋಪ ಮಾಡಿದ್ದಾರೆ. ಹಾನಗಲ್​ನಲ್ಲಿ ಗ್ಯಾಂಗ್ ರೇಪ್ ಆಗಿದೆ, ನೈತಿಕ ಪೊಲೀಸ್ ಗಿರಿಯಂತಹ ಪ್ರಕರಣ ಹೊರಗೆ ಬರ್ತಿವೆ ಎಂದರು.

ಹಾನಗಲ್​​ ಗ್ಯಾಂಗ್​ರೇಪ್ ಕೇಸ್: ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ, ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ -ಬಸವರಾಜ ಬೊಮ್ಮಾಯಿ
ಮಾಜಿ‌ ಸಿಎಂ ಬಸವರಾಜ್ ಬೊಮ್ಮಾಯಿ
ಶಿವಕುಮಾರ್ ಪತ್ತಾರ್
| Updated By: ಆಯೇಷಾ ಬಾನು|

Updated on: Jan 20, 2024 | 11:26 AM

Share

ಹಾವೇರಿ, ಜ.20: ಜಿಲ್ಲೆಯ ಹಾನಗಲ್​​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ರೇಪ್​ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​ ಸರ್ಕಾರ (Congress Government) ಅತ್ಯಾಚಾರಿಗಳ ಪರ ನಿಂತಿದೆ. ಹಾನಗಲ್​​ನಲ್ಲಿ ಗ್ಯಾಂಗ್​ರೇಪ್ ಪ್ರಕರಣ (Hangal Gang Rape) ಬಹಿರಂಗಗೊಂಡಿದೆ. ನೈತಿಕ ಪೊಲೀಸ್​ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್​​ ಸಕ್ರಿಯವಾಗಿದೆ. ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಪ್ರಕರಣವನ್ನು SIT ತನಿಖೆಗೆ ಕೊಡಿ ಅಂದ್ರೂ ಸರ್ಕಾರ ನೀಡ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದು ಆರೋಪ ಮಾಡಿದ್ದಾರೆ. ಹಾನಗಲ್​ನಲ್ಲಿ ಗ್ಯಾಂಗ್ ರೇಪ್ ಆಗಿದೆ, ನೈತಿಕ ಪೊಲೀಸ್ ಗಿರಿಯಂತಹ ಪ್ರಕರಣ ಹೊರಗೆ ಬರ್ತಿವೆ. ಇಂತಹ ಗ್ಯಾಂಗ್ ನಿರಂತರವಾಗಿ ಆ್ಯಕ್ಟೀವ್ ಆಗಿದೆ. ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಆಡಳಿತ ವ್ಯವಸ್ಥೆ, ಸರ್ಕಾರ ರೇಪಿಸ್ಟ್​ಗಳ ಜೊತೆ ನಿಂತಿದೆ. SITಗೆ ಕೊಡಿ ಅಂದ್ರೂ ಸರ್ಕಾರ ಕೊಡ್ತಿಲ್ಲ. ಪೋಸ್ಕೋ ಕೇಸ್​ನಲ್ಲಿ ಕೇಸ್ ದಾಖಲು ಮಾಡಿಲ್ಲ. ಸುಳ್ಳು ಮೆಡಿಕಲ್ ಎಕ್ಸಾಮಿನ್ ಆಗಿವೆ. ಇದು ಮೆಡಿಕೋ ಲೀಗಲ್ ಕೇಸ್, ಸರ್ಕಾರ ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತಗೊಬೇಕು. ಸಿಎಂ ಶಾಸಕರಿಗೆ ಹೇಳಿದ್ದೀನಿ ಅಂತಾರೆ. ಅಂದ್ರೆ ಸರ್ಕಾರ ಸತ್ತಿದೆಯಾ? ಆರೋಗ್ಯ ಇಲಾಖೆ ಸತ್ತಿದೆಯಾ ಎಂದ ಬಸವರಾಜ್ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: PSI, ಸಿಟಿಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಗೃಹ ಸಚಿವ ಪರಮೇಶ್ವರ ಹೇಳಿದ್ದಿಷ್ಟು

ಇನ್ನು ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕ್ರಿಮಿನಲ್‌ಗಳಿಗೆ ಕುಮಕ್ಕು ಸಿಗುತ್ತಿದೆ. ಅಪರಾಧ ಕೃತ್ಯ ಎಸಗಿದವರಲ್ಲಿ ವೋಟ್ ಬ್ಯಾಂಕ್ ಇದೆ. ಹೀಗಾಗಿ ಅವರ ರಕ್ಷಣೆ ಮಾಡುವ ಕೆಲಸವನ್ನ ಸರ್ಕಾರ ಮಾಡುತ್ತಿದೆ. ಹಾನಗಲ್‌ನಲ್ಲಿ ಗ್ಯಾಂಗ್ ರೇಪ್ ಪ್ರಕರಣವನ್ನ ಖಂಡಿಸಿ ನಾವು ಇವತ್ತು ಪ್ರತಿಭಟನೆ ಮಾಡುತ್ತಿದ್ದೇವೆ. ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಆದ್ರೂ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಅಂತಾರೆ. ಹಾಗಾದ್ರೆ ಇಬ್ಬರೂ ‌ಪೊಲೀಸರನ್ನ ಅಮಾನತು ಮಾಡಿದ್ದು ಏಕೆ? ಆ ಹೆಣ್ಣು ಮಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡಿಸಲು ಇವರಿಂದ ಆಗಿಲ್ಲ. ಇಂತಹ ಘಟನೆಯಾದಾಗ ಸರ್ಕಾರವೇ ಸಂತ್ರಸ್ತರಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕು.

ಈ ಪ್ರಕರಣವನ್ನ ಎಸ್‌ಐಟಿಗೆ ತನಿಖೆಗೆ ಕೊಡಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಆರ್.ಅಶೋಕ ಅವರು ಸಹ ಈ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೆ. ಹೋರಾಟಕ್ಕೆ ಸರ್ಕಾರ ಬಗ್ಗದೆ ಹೋದ್ರೆ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರದಲ್ಲಿ ನಿರ್ಭಯವಾಗಿ ಕ್ರಿಮಿನಲ್​ಗಳು ಓಡಾಡುತ್ತಿದ್ದಾರೆ. ಪೊಲೀಸರೇ ಒಸಿ, ಇಸ್ಪೀಟ್ ಅಡ್ಡೆಗಳನ್ನ ಮಾಡಸ್ತೀದ್ದಾರೆ. ಇದಕ್ಕೆಲ್ಲ ಕಾರಣ ಪೊಸ್ಟಿಂಗ್ ನಲ್ಲಿ ಹಣ ಕೊಟ್ಟಿರೋದು. ಅಲ್ಪ ಸಂಖ್ಯಾತರಿಗೂ ನ್ಯಾಯ ಕೊಟ್ಟಿಲ್ಲ, ದಲಿತರಿಗೂ ನ್ಯಾಯ ಕೊಟ್ಟಿಲ್ಲ. ಕ್ರಿಮಿನಲ್ ಗಳಿಗೆ ಸರ್ಕಾರ ರಕ್ಷಣೆ ಕೊಡ್ತಿದೆ ಎಂದು ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!