Hangal Bypoll 2021: ಹಾನಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಯಾರು? ಬಿಜೆಪಿ- ಕಾಂಗ್ರೆಸ್ ಪೈಪೋಟಿ ಹೇಗಿದೆ?

ಹಾನಗಲ್​ ಉಪಚುನಾವಣೆ 2021: ಇವತ್ತು ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಆಗಿದ್ದರಿಂದ ಆಕಾಂಕ್ಷಿಗಳ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಭ್ಯರ್ಥಿಗಳ ಆಯ್ಕೆ ಘೋಷಣೆ ನಂತರ ಚುನಾವಣೆ ಮತ್ತಷ್ಟು ರಂಗು ಪಡೆದುಕೊಳ್ಳಲಿದೆ.

Hangal Bypoll 2021: ಹಾನಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಯಾರು? ಬಿಜೆಪಿ- ಕಾಂಗ್ರೆಸ್ ಪೈಪೋಟಿ ಹೇಗಿದೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Sep 28, 2021 | 3:24 PM

ಹಾವೇರಿ: ಹಿರಿಯ ಬಿಜೆಪಿ ಶಾಸಕರಾಗಿದ್ದ ಸಿ.ಎಂ. ಉದಾಸಿ‌ ನಿಧನದಿಂದ ತೆರವಾದ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದೆ. ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಕ್ಷೇತ್ರದಲ್ಲಿ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳು ಶುರುವಾಗಿವೆ. ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ಉದಾಸಿ ಕುಟುಂಬದ ಸದಸ್ಯರಿಗೆ ಮಣೆ ಹಾಕಬೇಕು ಎಂಬ ಲೆಕ್ಕಾಚಾರವೂ ಶುರುವಾಗಿದೆ. ಉದಾಸಿ ಕುಟುಂಬದವರ ಜೊತೆಗೆ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಹಲವರು ಆಕಾಂಕ್ಷಿಗಳಾಗಿದ್ದಾರೆ. ಜೆಡಿಎಸ್ ಈಗಾಗಲೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದರೆ, ಕಾಂಗ್ರೆಸ್​ನಲ್ಲೂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ.

ಆಕಾಂಕ್ಷಿಗಳು ಯಾರ್ಯಾರು? ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಕಾಂಗ್ರೆಸ್​ನ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ. 2018ರ ಚುನಾವಣೆ ಸಂದರ್ಭದಲ್ಲಿ ಹಾಲಿ ಶಾಸಕರಾಗಿದ್ದರೂ ಕಾಂಗ್ರೆಸ್ ಟಿಕೆಟ್ ವಂಚಿತರಾಗಿದ್ದ ಮಾಜಿ ಸಚಿವ ಮನೋಹರ ತಹಶೀಲ್ದಾರ ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರ ಜೊತೆಗೆ ಪ್ರಕಾಶಗೌಡ ಪಾಟೀಲ ಸೇರಿದಂತೆ ಮತ್ತೂ ಕೆಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಕಾಂಗ್ರೆಸ್​​ನಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೀಗಿದ್ದರೆ ಬಿಜೆಪಿಯಲ್ಲೂ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ದಿವಂಗತ ಶಾಸಕ ಸಿ.ಎಂ. ಉದಾಸಿಯವರ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂಬುದು ಕ್ಷೇತ್ರದಲ್ಲಿನ ಕೆಲವರ ಅಭಿಪ್ರಾಯವಾಗಿದೆ. ಆದರೆ ಉದಾಸಿ ಪುತ್ರ ಶಿವಕುಮಾರ ಉದಾಸಿ ಈಗಾಗಲೆ ಲೋಕಸಭಾ ಸದಸ್ಯರಾಗಿ ಅಧಿಕಾರದಲ್ಲಿದ್ದಾರೆ. ಹೀಗಾಗಿ ಸಂಸದ ಶಿವಕುಮಾರ ಉದಾಸಿಯವರ ಪತ್ನಿ ರೇವತಿ ಉದಾಸಿಯವರು ಸ್ಪರ್ಧೆ ಮಾಡಬೇಕು ಎಂಬುದು ಕ್ಷೇತ್ರದಲ್ಲಿನ ಕೆಲವರ ಒತ್ತಾಯವಾಗಿದೆ. ಆದರೆ ತಾವಾಗಲಿ ಅಥವಾ ತಮ್ಮ ಕುಟುಂಬದ ಸದಸ್ಯರ ಸ್ಪರ್ಧೆ ಬಗ್ಗೆ ಸಂಸದ ಶಿವಕುಮಾರ ಉದಾಸಿ ಈವರೆಗೆ ಎಲ್ಲೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಇನ್ನು ಉದಾಸಿ ಕುಟುಂಬದವರ ಜೊತೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ. ಕಳೆದ ಚುನಾವಣೆಯಲ್ಲೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣ ಈಳಿಗೇರ ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಭೋಜರಾಜ ಕರೂದಿ ಸೇರಿದಂತೆ ಇನ್ನೂ ಕೆಲವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಜೆಡಿಎಸ್ ಪಕ್ಷವಂತೂ ಈಗಾಗಲೆ ನಿಯಾಜ್ ಶೇಖ್ ಅವರನ್ನು ಉಪಚುನಾವಣೆ ಅಭ್ಯರ್ಥಿ ಎಂದು ಘೋಷಿಸಿದೆ.

ಹಾನಗಲ್ ಕ್ಷೇತ್ರದ ವಿಶೇಷತೆ ಕ್ಷೇತ್ರದಲ್ಲಿನ ಚುನಾವಣೆಯ ಇತಿಹಾಸ ನೋಡಿದರೆ ಕ್ಷೇತ್ರದ ಮತದಾರರು ಒಮ್ಮೆ ಬಿಜೆಪಿಯ ಸಿ.ಎಂ. ಉದಾಸಿಯನ್ನು ಗೆಲ್ಲಿಸಿದರೆ ಮತ್ತೊಮ್ಮೆ ಕಾಂಗ್ರೆಸ್​ನ ಮನೋಹರ ತಹಶೀಲ್ದಾರ ಅವರನ್ನು ಗೆಲ್ಲಿಸುತ್ತಿದ್ದರು. ಉದಾಸಿ ಮತ್ತು ತಹಶೀಲ್ದಾರ ಹಾನಗಲ್ ಕ್ಷೇತ್ರದ ಮುಖ್ಯ ರಾಜಕೀಯ ಮುಂದಾಳುಗಳಾಗಿದ್ದರು. ಒಂದು ಚುನಾವಣೆ ಹೊರತುಪಡಿಸಿದರೆ ಸಿ.ಎಂ. ಉದಾಸಿಯಾಗಲಿ ಅಥವಾ ಮನೋಹರ ತಹಶೀಲ್ದಾರ ಆಗಲಿ ಯಾರೂ ಸತತವಾಗಿ ಎರಡು ಬಾರಿ ಗೆದ್ದಿರುವ ಉದಾಹರಣೆಗಳಿಲ್ಲ. ಜಿಲ್ಲೆಯಲ್ಲಿನ ಹಾನಗಲ್ ಕ್ಷೇತ್ರ ಈ ಕಾರಣಕ್ಕೆ ವಿಶೇಷತೆ ಪಡೆದಿತ್ತು. ಆದರೆ ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಲಿ ಶಾಸಕರಾಗಿದ್ದರೂ ಪಕ್ಷ ಮನೋಹರ ತಹಶೀಲ್ದಾರಗೆ ಟಿಕೆಟ್ ನೀಡಿರಲಿಲ್ಲ. ಮನೋಹರ ತಹಶೀಲ್ದಾರ ಬದಲು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಸಿ.ಎಂ. ಉದಾಸಿ ಕಾಂಗ್ರೆಸ್​ನ ಶ್ರೀನಿವಾಸ ಮಾನೆಯವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು.

ಸಿಎಂಗೆ ಪ್ರತಿಷ್ಠೆಯ ಚುನಾವಣೆ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರವನ್ನು ಪ್ರತಿನಿಧಿಸಿ ರಾಜ್ಯದ ಮುಖ್ಯಮಂತ್ರಿ ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹಾನಗಲ್ ಕ್ಷೇತ್ರದ ಉಪಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಬಸವರಾಜ ಬೊಮ್ಮಾಯಿ ಸಿಎಂ ಆದಮೇಲೆ ನಡೆಯುತ್ತಿರುವ ಮೊದಲ ವಿಧಾನಸಭಾ ಉಪಚುನಾವಣೆ ಇದಾಗಿದೆ. ಸಿಎಂ ತವರು ಕ್ಷೇತ್ರದ ಜಿಲ್ಲೆಯಲ್ಲಿಯೇ ಉಪಚುನಾವಣೆ ನಡೆಯುತ್ತಿರುವುದರಿಂದ ಸಿಎಂಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಹಾನಗಲ್ ಕ್ಷೇತ್ರದ ಉಪಚುನಾವಣೆ ಸಿಎಂಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಕೆಲವೇ ದಿನಗಳಲ್ಲಿ ಸ್ಪಷ್ಟ ಚಿತ್ರಣ ಹಾನಗಲ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್, ಬಿಜೆಪಿ ಪಕ್ಷದಲ್ಲಿ ಅಭ್ಯರ್ಥಿಗಳು ಟಿಕೆಟ್​ಗಾಗಿ ಈಗಾಗಲೆ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್​ನಲ್ಲಿ ಈವರೆಗೂ ಅಭ್ಯರ್ಥಿ ಆಯ್ಕೆ ಆಗಿಲ್ಲ. ಅಭ್ಯರ್ಥಿ ಆಯ್ಕೆ ಸಂಬಂಧ ವಿಶೇಷ ಸಭೆಗಳೂ ನಡೆದಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಎರಡೂ ಪಕ್ಷಗಳ ವರಿಷ್ಠರು ಅಂತಿಮವಾಗಿ ಯಾರಿಗೆ ಮಣೆ ಹಾಕುತ್ತಾರೆ ಎಂಬ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನ ಉಂಟಾಗದಂತೆ ಪಕ್ಷದ ವರಿಷ್ಠರು ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಮುಂದೆ ಹೋಗಿರೋ ಜೆಡಿಎಸ್ ಜೂನ್ ತಿಂಗಳಲ್ಲಿಯೇ ನಿಯಾಜ್ ಶೇಖ್ ಎಂಬುವರ ಹೆಸರನ್ನು ಅಂತಿಮಗೊಳಿಸಿದೆ. ಹೀಗಾಗಿ ಜೆಡಿಎಸ್ ಪಾಳಯದಲ್ಲಿ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕಗ್ಗಂಟಾದಂತಿಲ್ಲ.

ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ‌ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭೆ ಉಪಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಗೆ ದೊಡ್ಡ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಇವತ್ತು ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಆಗಿದ್ದರಿಂದ ಆಕಾಂಕ್ಷಿಗಳ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಭ್ಯರ್ಥಿಗಳ ಆಯ್ಕೆ ಘೋಷಣೆ ನಂತರ ಚುನಾವಣೆ ಮತ್ತಷ್ಟು ರಂಗು ಪಡೆದುಕೊಳ್ಳಲಿದೆ.

ವಿಶೇಷ ವರದಿ: ಪ್ರಭುಗೌಡ ಎನ್. ಪಾಟೀಲ, ಟಿವಿ9 ಹಾವೇರಿ

ಇದನ್ನೂ ಓದಿ: Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ

ಇದನ್ನೂ ಓದಿ: ಅಕ್ಟೋಬರ್ 30ಕ್ಕೆ ಮೂರು ಲೋಕಸಭಾ, 30 ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ: ನವೆಂಬರ್ 2ರಂದು ಮತ ಎಣಿಕೆ

Published On - 3:19 pm, Tue, 28 September 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ