Karnataka Byelections: ಹಾನಗಲ್ ಬಿಜೆಪಿಯ ಬಂಡಾಯ ಅಭ್ಯರ್ಥಿ ಸಿಆರ್ ಬಳ್ಳಾರಿ ನಾಮಪತ್ರ ವಾಪಸ್

| Updated By: ganapathi bhat

Updated on: Oct 13, 2021 | 7:00 PM

BJP Karnataka: ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಿ.ಆರ್.ಬಳ್ಳಾರಿ ಚರ್ಚೆ ನಡೆಸಿದ್ದರು. ಇದೀಗ, ನಾಮಪತ್ರ ವಾಪಸ್ ಪಡೆದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರದಲ್ಲಿ ಪಾಲ್ಗೊಳ್ಳೋದಾಗಿ ಹೇಳಿಕೆ ನೀಡಿದ್ದಾರೆ.

Karnataka Byelections: ಹಾನಗಲ್ ಬಿಜೆಪಿಯ ಬಂಡಾಯ ಅಭ್ಯರ್ಥಿ ಸಿಆರ್ ಬಳ್ಳಾರಿ ನಾಮಪತ್ರ ವಾಪಸ್
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
Follow us on

ಹಾವೇರಿ: ಜಿಲ್ಲೆಯ ಹಾನಗಲ್ ಉಪಚುನಾವಣೆಯ ಬಿಜೆಪಿ ಬಂಡಾಯ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಸಿ.ಆರ್.ಬಳ್ಳಾರಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಆರ್.ಬಳ್ಳಾರಿಗೆ ಟಿಕೆಟ್ ಲಭಿಸಿರಲಿಲ್ಲ. ಹೀಗಾಗಿ, ಬಂಡಾಯ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ನಾಮಪತ್ರ ಸಲ್ಲಿಸಿದ್ದರು. ಇದೀಗ ಅವರು ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

ಸಚಿವ ಮುರುಗೇಶ ನಿರಾಣಿಯವರ ಕಾರಿನಲ್ಲಿ ತಹಶೀಲ್ದಾರ ಕಚೇರಿಗೆ ಬಂದು ಸಿ.ಆರ್. ಬಳ್ಳಾರಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಿ.ಆರ್.ಬಳ್ಳಾರಿ ಚರ್ಚೆ ನಡೆಸಿದ್ದರು. ಇದೀಗ, ನಾಮಪತ್ರ ವಾಪಸ್ ಪಡೆದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರದಲ್ಲಿ ಪಾಲ್ಗೊಳ್ಳೋದಾಗಿ ಹೇಳಿಕೆ ನೀಡಿದ್ದಾರೆ.

ವಿಜಯಪುರ: ನಾಮಪತ್ರ ವಾಪಸ್ ಪಡೆದ ಇಬ್ಬರು ಅಭ್ಯರ್ಥಿಗಳು
ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ವಿಕ್ರಮ ಪಂಡಿತ, ಪಕ್ಷೇತರ ಅಭ್ಯರ್ಥಿ ಅಬ್ದುಲ್ ರೆಹಮಾನ್ ದುಂಡಸಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮ ಕಣದಲ್ಲಿ 6 ಅಭ್ಯರ್ಥಿಗಳು ಉಳಿದಿದ್ದಾರೆ. ಕಾಂಗ್ರೆಸ್​ನಿಂದ ಅಶೋಕ ಮನಗೂಳಿ, ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್​ ಪಕ್ಷದಿಂದ ನಾಜಿಯಾ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸುನಿಲ್ ಕುಮಾರ್​ ಹೆಬ್ಬಿ ಹಾಗೂ ಪಕ್ಷೇತರರಾಗಿ ಜೀಲಾನಿ ಮುಲ್ಲಾ, ಎಸ್. ದೀಪಿಕಾ ಸ್ಪರ್ಧೆ ಮಾಡಲಿದ್ದಾರೆ. ಕರ್ನಾಟಕದಲ್ಲಿ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿದೆ. ಚುನಾವಣೆ ಬಳಿಕ, ನವೆಂಬರ್ 2ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಗಳು; ಹಾನಗಲ್ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾರ್ಯಕರ್ತರ ಅಸಮಾಧಾನ

ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ ಅಖಾಡಲ್ಲಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಆಸ್ತಿ ವಿವರ ಇಲ್ಲಿದೆ