ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ (86th Kannada Sahitya Sammelana)ಕ್ಕೆ ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದು, ಮುಂದಿನ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಾವೇರಿಯಲ್ಲಿ ಕಸಾಪ (KaSaPa) ಅಧ್ಯಕ್ಷರ ನೇತೃತ್ವದಲ್ಲಿ ಇಂದು (ಜನವರಿ 08) ಕಾರ್ಯಕಾರಿಣಿ ಸಮಿತಿ ಸಭೆ ನಡೆದಿದ್ದು, 9 ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ನಡೆಸುವಂತೆ ಮನವಿ ಮಾಡಿದರು. ಈ ಮನವಿಗೆ ಹೆಚ್ಚಿನ ಜನರು ಬೆಂಬಲ ಸೂಚಿಸಿದ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ (87th Kannada Sahitya Sammelana) ನಡೆಸಲು ನಿರ್ಧರಿಸಲಾಯಿತು. ಮತ ಚಲಾವಣೆಯಲ್ಲಿ ಮಂಡ್ಯಕ್ಕೆ 17 ಮತಗಳು ಬಂದಿದ್ದು, ಬಳ್ಳಾರಿಗೆ 16 ಮತಗಳು ಬಂದಿವೆ.
ಕಸಾಪ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ, 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿದೆ. ದೊಡ್ಡ ಕಾರ್ಯಕ್ರಮ ಮಾಡುವಾಗ ಸಣ್ಣ ಪುಟ್ಟ ಸಮಸ್ಯೆ ಆಗುವುದು ಸಹಜ. ಈ ಬಾರಿ ಆದ ಸಮಸ್ಯೆ ಮುಂದೆ ಪುನರಾರ್ತನೆ ಆಗದಂತೆ ನೋಡಿಕೊಳ್ಳುತ್ತೆವೆ ಎಂದರು.
87ನೇ ಸಮ್ಮೇಳನ ಮಾಡಬೇಕು ಎಂಬುವುದರ ಬಗ್ಗೆ ಚರ್ಚೆ ಆಗಿದೆ. ಒಟ್ಟು ಒಂಬತ್ತು ಜಿಲ್ಲೆಯವರು ನಮ್ಮ ಜಿಲ್ಲೆಯಲ್ಲಿ ಸಮ್ಮೇಳನ ಮಾಡುವಂತೆ ಮನವಿ ಮಾಡಿದ್ದರು. ಮಂಡ್ಯ ಜಿಲ್ಲೆಯಲ್ಲಿ ಮಾಡಬೇಕೇಂದು ಕಾರ್ಯಕಾರಿಣಿ ಸಭೆಯಲ್ಲಿ ಅತಿ ಹೆಚ್ಚು ಜನರ ಬೆಂಬಲ ನೀಡಿದ್ದಾರೆ. 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಮಾಡಲು ತಿರ್ಮಾನಿಸಲಾಗಿದೆ ಎಂದರು.
ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲಿ ನಡೆಯಬೇಕು ಎಂಬ ಬಗ್ಗೆ ಮತ ಚಲಾಯಿಸಲಾಯಿತು. ಒಟ್ಟು 46 ಮತದಾರರು ತಮ್ಮ ಮತ ಚಲಾವಣೆ ಮಾಡಿದ್ದರು. ಈ ಪೈಕಿ 17 ಮತಗಳು ಮಂಡ್ಯ ಜಿಲ್ಲೆಗೆ ಬಂದಿದ್ದು, ಬಳ್ಳಾರಿ ಜಿಲ್ಲೆಗೆ 16 ಮತಗಳು ಬಂದವು. ಉತ್ತರ ಕನ್ನಡ ಜಿಲ್ಲೆಗೆ ಒಂದೂ ಮತ ಬರಲಿಲ್ಲ. ಅತಿ ಹೆಚ್ಚು ಮತ ಪಡೆದ ಮಂಡ್ಯ ಜಿಲ್ಲೆಯಲ್ಲಿ ಮುಂದಿನ ಅಖಿಲ ಭಾರತ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು. ಉಳಿದ ಕೆಲವು ಅಂಶಗಳನ್ನು ಬಹಿರಂಗ ಸಭೆಯಲ್ಲಿ ಹೇಳುತ್ತೇನೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:21 am, Sun, 8 January 23