ಹಾವೇರಿ: ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಜ್ ಖರೀದಿಸಿದ ಮಹಿಳೆ

ಸಿದ್ದರಾಮಯ್ಯ ಸರ್ಕಾರ ಘೋಷಿಸಿದ್ದ ಪ್ರತಿ ಕುಟುಂಬದ ಮನೆ ಯಜಮಾನಿಗೆ ಎರಡೂ ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಹಣ ಹಲವರಿಗೆ ಹಲವು ರೀತಿಯಾಗಿ ಸಹಾಯಕವಾಗಿದೆ. ಅದರಂತೆ ಹಾವೇರಿಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಫ್ರಿಜ್ ಖರೀದಿ ಮಾಡಿದ್ದಾರೆ.

ಹಾವೇರಿ: ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಜ್ ಖರೀದಿಸಿದ ಮಹಿಳೆ
ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರೀಜ್ ಖರೀದಿಸಿದ ಮಹಿಳೆ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 09, 2024 | 4:55 PM

ಹಾವೇರಿ, ಏ.09: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​(Congress) ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಫ್ರಿಜ್(fridge) ತೆಗೆದುಕೊಂಡಿದ್ದಾರೆ.

ಯುಗಾದಿ ಹಬ್ಬದಂದು ಹೊಸ ಫ್ರಿಜ್​ಗೆ ಮನೆಯಲ್ಲಿ ಭರ್ಜರಿ ಪೂಜೆ

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಲತಾ ಎಂಬವವರು ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಯುಗಾದಿ ಹಬ್ಬಕ್ಕೆ ಹೊಸ ಫ್ರಿಜ್​ವೊಂದನ್ನು ಖರೀದಿ ಮಾಡಿದ್ದಾರೆ. ಹೌದು, ಬರೊಬ್ಬರಿ 17,500 ರೂಪಾಯಿ ಕೊಟ್ಟು ಫ್ರಿಜ್ ಖರೀದಿಸುವ ಮೂಲಕ ಯುಗಾದಿ ಹಬ್ಬಕ್ಕೆ ಹೊಸ ವಸ್ತುವನ್ನ ಮನೆಗೆ ತಂದಿದ್ದಾರೆ. ಹಬ್ಬದಂದು ಮನೆಗೆ ಬಂದ ಫ್ರಿಜ್ಗೆ ಲತಾ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ:Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ

ಇನ್ನು ಕಳೆದ 2023 ಜುಲೈ 19ರಿಂದ ಬಹುನಿರೀಕ್ಷಿತ ಗೃಹ ಲಕ್ಷ್ಮೀ ಯೋಜನೆ ಆರಂಭವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಉದ್ಘಾಟನೆ ಮಾಡುವ ಮೂಲಕ ಚಾಲನೆ ನಿಡಿದ್ದರು. ಫಲಾನುಭವಿಗಳು ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಬಾಬುಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಹಾಕಬಹುದು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 9 April 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ