ಹಾವೇರಿ, ಏ.09: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್(Congress) ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಫ್ರಿಜ್(fridge) ತೆಗೆದುಕೊಂಡಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಲತಾ ಎಂಬವವರು ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಯುಗಾದಿ ಹಬ್ಬಕ್ಕೆ ಹೊಸ ಫ್ರಿಜ್ವೊಂದನ್ನು ಖರೀದಿ ಮಾಡಿದ್ದಾರೆ. ಹೌದು, ಬರೊಬ್ಬರಿ 17,500 ರೂಪಾಯಿ ಕೊಟ್ಟು ಫ್ರಿಜ್ ಖರೀದಿಸುವ ಮೂಲಕ ಯುಗಾದಿ ಹಬ್ಬಕ್ಕೆ ಹೊಸ ವಸ್ತುವನ್ನ ಮನೆಗೆ ತಂದಿದ್ದಾರೆ. ಹಬ್ಬದಂದು ಮನೆಗೆ ಬಂದ ಫ್ರಿಜ್ಗೆ ಲತಾ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ:Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ
ಇನ್ನು ಕಳೆದ 2023 ಜುಲೈ 19ರಿಂದ ಬಹುನಿರೀಕ್ಷಿತ ಗೃಹ ಲಕ್ಷ್ಮೀ ಯೋಜನೆ ಆರಂಭವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಉದ್ಘಾಟನೆ ಮಾಡುವ ಮೂಲಕ ಚಾಲನೆ ನಿಡಿದ್ದರು. ಫಲಾನುಭವಿಗಳು ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಬಾಬುಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಹಾಕಬಹುದು ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:20 pm, Tue, 9 April 24