
ಹಾವೇರಿ, ಮೇ 08: ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ (accident) ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರು. ತಷ್ಕಿನ್ ರಾಣೆಬೆನ್ನೂರು, ಪಿರೋಜ್ ಗಾಯಗೊಂಡವರು. ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿ ಅಶೋಕ್ ಎಂಬುವವರ ಸಂಬಂಧಿಕರ ಮಕ್ಕಳು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಬಾಗಲಕೋಟೆ: ಓವರ್ ಟೇಕ್ ಮಾಡಲು ಹೋಗಿ ಕುತ್ತು ತಂದುಕೊಂಡ ಬಾಲಕರು, ಕ್ಯಾಂಟರ್ ಅಡಿ ಬಿದ್ದು ಮೂವರ ಸಾವು
ಶಾಲೆ ರಜೆ ಇರುವ ಹಿನ್ನಲೆ ಸಂಬಂಧಿಕರೆಲ್ಲಾ ಸೇರಿ ರಾಣೇಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು. ಇಂದು ಅಗಡಿ ತೋಟಕ್ಕೆ ಹೋಗಿ ನಂತರ ಗೋವಾಕ್ಕೆ ಹೋಗುವ ಪ್ಲಾನ್ನಲ್ಲಿದ್ದರು. ಆದರೆ ಅಷ್ಟರಲ್ಲೇ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಜಾಸ್ತಿ ವೇಗ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಕಾರು ಚಾಲಕ ಡಿಕ್ಕಿ ಹೊಡಿದಿದ್ದಾನೆ. ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಶವಗಳ ರವಾನೆ ಮಾಡಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಗ್ರಾಮದ ಗುಟ್ಟಹಳ್ಳಿ ಸರ್ಕಲ್ ಬಳಿ ಮದ್ಯದ ಅಮಲಿನಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಮುಳಬಾಗಿಲು ತಾಲೂಕಿನ ಕೊಂಡಹಳ್ಳಿ ನಿವಾಸಿ ನಂದೀಶ್ ರೆಡ್ಡಿ(28) ಕೊಲೆಯಾದ ಯುವಕ.
ಇದನ್ನೂ ಓದಿ: ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನನ್ನ ಅಪಹರಿಸಿ ಹತ್ಯೆ, ಕೊಲೆ ಸತ್ಯ ಬಿಚ್ಚಿಟ್ಟ ಆರೋಪಿ ಪುತ್ರಿ
ಕೆಜಿಎಫ್ ತಾಲೂಕಿನ ವೆಂಕಟಾಪುರ ನಿವಾಸಿ ಮಂಜುನಾಥ್ನಿಂದ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಬಾಲಾಜಿ ಬಾರ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಬಾರ್ನಿಂದ ಹೊರಬರುತ್ತಿದ್ದಂತೆ ಚಾಕುವಿನಿಂದ ಇರಿದು ನಂದೀಶ್ನ್ನು ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:24 pm, Thu, 8 May 25